Wednesday, May 31, 2023

‘ಬಿ.ಟಿ ಲಲಿತಾ ನಾಯಕ್‌ನ ದೈವ ನರ್ತಕರ ವಿರುದ್ಧದ ಹೇಳಿಕೆಗೆ ಯು.ಟಿ ಖಾದರ್ ಕೆಂಡಾಮಂಡಲ

ಮಂಗಳೂರು: ‘ಬಿ.ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಸಾಶನ ಸರಿ ಅಲ್ಲ ಎಂಬ ಮಾತನ್ನು ನಾನು ಒಪ್ಪಲು ಸಾಧ್ಯವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ’ ಎಂದು ಮಾಜಿ ಸಚಿವ, ವಿಪಕ್ಷ ಉಪನಾಯಕ ಯು.ಟಿ ಖಾದರ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ದೈವ ನರ್ತಕರಿಗೆ ಘೋಷಿಸಿರುವ ಮಾಸಾಶನದ ಕುರಿತು ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ನೀಡಿದ ಹೇಳಿಕೆಯನ್ನುಖಂಡಿಸಿ ಶನಿವಾರ ಟ್ವೀಟ್ ಮಾಡಿರುವ ಅವರು

‘ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ ಸಂಸ್ಕೃತಿಯನ್ನು ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics