Connect with us

BANTWAL

ಗೆಲುವಿಗಾಗಿ ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಯುಟಿ ಖಾದರ್.!

Published

on

ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ವಿಪಕ್ಷ ನಾಯಕ ಯು.ಟಿ.ಖಾದರ್ ಅವರು ಕೇಂದ್ರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಬಿಲ್ಲವ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಪೂಜಾರಿ ಅವರ ಕಾಲಿಗೆ ನಮಸ್ಕರಿಸಿ ಮುಂದಿನ ಚುನಾವಣೆಯ ಗೆಲುವಿಗಾಗಿ ಆಶೀರ್ವಾದ ಪಡೆದರು.

ಬಂಟ್ವಾಳ : ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ವಿಪಕ್ಷ ನಾಯಕ ಯು.ಟಿ.ಖಾದರ್ ಅವರು ಕೇಂದ್ರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಬಿಲ್ಲವ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಪೂಜಾರಿ ಅವರ ಕಾಲಿಗೆ ನಮಸ್ಕರಿಸಿ ಮುಂದಿನ ಚುನಾವಣೆಯ ಗೆಲುವಿಗಾಗಿ ಆಶೀರ್ವಾದ ಪಡೆದರು.


ಕಾಂಗ್ರೇಸ್ ಕಾರ್ಯಕರ್ತರು ಕುಟುಂಬದ ಸದಸ್ಯರು ಅವರಿಗೆ ಕಿಂಚಿತ್ತೂ ನೋವಾಗದ ರೀತಿಯಲ್ಲಿ ಜೊತೆಯಲ್ಲಿ ಕರೆದುಕೊಂಡು ಹೋಗಿ ಅವರ ನೋವು ನಲಿವುಗಳಿಗೆ ಸದಾ ಜೊತೆ ನಿಂತು ಪ್ರೋತ್ಸಾಹ ನೀಡಿ ಎಂದು ಶಾಸಕರಿಗೆ ಪೂಜಾರಿ ಅವರು ಕಿವಿಮಾತು ಹೇಳಿದರು.
ಮುಂದಿನ ಚುನಾವಣೆಯಲ್ಲಿ ಪ್ರಚಂಡ ಬಹುಮತದ ಮೂಲಕ ಗೆಲುವು ಸಾಧಿಸಿ ಎಂದು ಹರಸಿದರು.

ಶಾಸಕ ಯು.ಟಿ.ಖಾದರ್ ಮಾತನಾಡಿ, ಚುನಾವಣೆಯ ಸ್ಪರ್ಧೆಯ ಮುನ್ನ ಹಿರಿಯ ಕಾಂಗ್ರೆಸ್ ನಾಯಕ ಕರಾವಳಿ ಭಾಗದ ಅಭಿವೃದ್ಧಿಗೆ ಕೊಡುಗೆ ನೀಡಿದ ಪೂಜಾರಿ ಅವರ ಮಾರ್ಗದರ್ಶನ ಸಲಹೆ ಸೂಚನೆ ಹಾಗೂ ಆಶ್ರೀರ್ವಾದ ಪಡೆಯಲು ಮನಗೆ ಬಂದಿದ್ದೇನೆ.

ವಿದ್ಯಾರ್ಥಿ ದೆಸೆಯಿಂದ ರಾಜಕೀಯವಾಗಿ ಬೆಳೆದು ಇಷ್ಟು ಎತ್ತರಕ್ಕೆ ಬೆಳೆಯಲು ಪೂಜಾರಿ ಅವರೇ ಕಾರಣ.

ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದ ಜನರ ಗೌರವಕ್ಕೆ ಚ್ಯುತಿ ಬರದ ರೀತಿಯ ಲ್ಲಿ ಕೆಲಸ ಮಾಡಿದ್ದೇನೆ,ಮುಂದೆಯೂ ಜನ ಆಶ್ರೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ಇದ್ದು, ಕ್ಷೇತ್ರದ ಜನರ ಜೊತೆ ಜಿಲ್ಲೆಯ ಜನರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತೇನೆ. ಸರ್ವ ಜನರ ಸರ್ವ ಧರ್ಮವನ್ನು ಪ್ರೀತಿ ಮಾಡಿಕೊಂಡು ಅಭಿವೃದ್ಧಿ ಕಾರ್ಯಮಾಡುತ್ತೇನೆ ಎಂದು ಅವರು ತಿಳಿಸಿದರು.

ಚುನಾವಣಾ ಸಂದರ್ಭದಲ್ಲಿ ಮಾತ್ರ ಪೂಜಾರಿ ಅವರ ಮನೆಗೆ ಕಾಂಗ್ರೇಸ್ ನಿಯೋಗ ಬೇಟಿ ನೀಡಿ ಆಶ್ರೀರ್ವಾದ ಪಡೆಯುತ್ತಾರೆ ಎಂಬ ಆರೋಪದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಬಿಜೆಪಿಯವರು ಸುಳ್ಳು ಅಪಪ್ರಚಾರಗಳ ಮೂಲಕ ಪ್ರಚಾರ ಪಡೆಯಲು ಹೊರಟಿದೆ.
ಅಪಪ್ರಚಾರದ ಮೂಲಕ ಪೂಜಾರಿ ಅವರನ್ನು ಸೋಲಿಸಿ ಇಂದಿನ ದಿನಗಳಲ್ಲಿ ಅನುಕಂಪವನ್ನು ತೋರಿಸುವ ಬಿಜೆಪಿಯವರನ್ನು ನಂಬುವವರಿಲ್ಲ.
ಚಾಕು ತೋರಿಸಿ ಬೆದರಿಕೆ ಪತ್ರ ಹಾಕಿದ ಬಿಜೆಪಿ ಕಾರ್ಯಕರ್ತರು ಜೈಲು ಪಾಲಾಗಿದ್ದಾರೆ ಇದೆಲ್ಲವನ್ನು ಜನ ಗಮನಿಸಿದ್ದಾರೆ ಎಂದು ಅವರು ತಿಳಿಸಿದರು.
ಮುಡಿಪು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪ್ರಶಾಂತ್ ಕಾಜವ , ಪ್ರಮುಖರಾದ ಚಂದ್ರಹಾಸ ಕರ್ಕೇರ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಉಮ್ಮರ್ ಫಾರೂಕ್ ಪರಂಗಿಪೇಟೆ, ಪ್ರವೀಣ್ ಅಳ್ಚ, ದೇವದಾಸ ಭಂಡಾರಿ, ದೀಪಕ್ ಪಿಲಾರ್, ಮಹಮ್ಮದ್ ಮೋನು, ಕೃಷ್ಣ ಗಟ್ಟಿ,ಚಂದ್ರಿಕಾ, ರಮ್ಲಾನ್ ಮಾರಿಪಳ್ಳ,ಈಶ್ವರ್ ಉಳ್ಳಾಲ್, ಅಬ್ದುಲ್ ಜಲೀಲ್ , ನಾಸೀರ್ ನಡುಪದವು, ದೇವಣ್ಣ ಶೆಟ್ಟಿ, ದೇವದಾಸ್ ಭಂಡಾರಿ, ಸುರೇಶ್ ಭಟ್ ನಗರ, ಇಕ್ಬಾಲ್ ಸುಜೀರು, ಬಾಬು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

LATEST NEWS

Trending