Connect with us

LATEST NEWS

ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಕಿರುಕುಳದಿಂದ ಆತ್ಮಹತ್ಯೆ ಪ್ರಕರಣ: ಮೃತ ಮನೋಹರ್ ಪಿರೇರಾ ನಿವಾಸಕ್ಕೆ ಯು. ಟಿ. ಖಾದರ್ ಭೇಟಿ

Published

on

ಮಂಗಳೂರು: ಉಳಾಯಿಬೆಟ್ಟು ಗ್ರಾಮದ, ಕುಟಿನ್ಹ ಪದವು, ಫೆರ್ಮಾಯ್ ಚರ್ಚ್ ಬಳಿಯ ನಿವಾಸಿ ಮನೋಹರ್ ಪಿರೇರಾ (47 ವರ್ಷ) ರವರು ಡಿಸೆಂಬರ್ 17 ರಂದು ಆತ್ಮ ಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಾರಣ ಎಂದು ಹೇಳಿ ತಮ್ಮ ಕೊನೆಯ ವಾಟ್ಸಾಪ್ ವಿಡಿಯೋ ಮಾಡಿ ಹಲವು ವಾಟ್ಸಪ್ಪ್ ಗ್ರೂಪ್ ಗಳಲ್ಲಿ ಹಂಚಿ ಆತ್ಮಹತ್ಯೆಮಾಡಿ ಕೊಂಡಿದ್ದರು.

ತನ್ನ ಸಾಲವನ್ನು ಮರುಪಾವತಿಸಲು ನೀಡಿದ ಹಣವನ್ನು ಸಾಲಕ್ಕೆ ಜಮೆ ಮಾಡದೆ 9 ಲಕ್ಷ ರೂಪಾಯಿ ಯನ್ನು ಅನಿಲ್ ಲೋಬೊ ತಿಂದಿದ್ದಾನೆ ಎಂದು ವಿವರಿಸಿದ್ದರು.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ FIR ದಾಖಲಾಗಿದ್ದು ದಿನಾಂಕ 18-12-2024 ರಂದು ಭಾತೀಯ ನ್ಯಾಯ ಸಂಹಿತೆ ಸೆಕ್ಷನ್ 108 ಅಡಿಯಲ್ಲಿ ಅನಿಲ್ ಲೋಬೊ ನನ್ನು ಬಂದಿಸಲಾಗಿತ್ತು.

ಮನೋಹರ್ ಪಿರೇರಾ ಕುಟುಂಬಕ್ಕೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿ ಪರಿಸರದ ನೂರಾರು ಮಂದಿಯ ಸಹಿಯನ್ನೊಳಗೊಂಡ ಮನವಿಯನ್ನು ರಾಜ್ಯದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಮುಖ್ಯಮಂತ್ರಿಗಳು, ಗ್ರಹಸಚಿವರು, ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ರವರಿಗೆ ನೀಡಲಾಗಿತ್ತು. ಮನವಿಗೆ ಸ್ಪಂದಿಸಿದ ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್ ರವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾoತ್ವನ ಹೇಳಿದ್ದಾರೆ. ನಿಷ್ಪಕ್ಷ ತನಿಖೆಗೆ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿರುತ್ತಾರೆ.

 

ಎಂಸಿ ಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊನಿಂದ ತೊಂದರೆಗೊಳಗಾ ದ ಇತರ ಗ್ರಾಹಕರು ಸ್ಥಳದಲ್ಲಿ ಹಾಜರಿದ್ದು ತಮ್ಮ ಅಳಲನ್ನು ಯು. ಟಿ. ಖಾದರ್ ಬಳಿ ತೋಡಿಕೊಂಡರು. ಈ ವೇಳೆ ಹಾಜರಿದ್ದ ಸ್ಥಳೀಯರು ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್ ರವರ ಬಳಿ ದಿವಂಗತ ಮನೋಹರ್ ರವರ ಬದುಕಿನ ಕಷ್ಟಗಳನ್ನು ವಿವರಿಸಿದರು ಹಾಗೂ ಅವರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಒತ್ತಾಯಿಸಿದರು.

BELTHANGADY

ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ

Published

on

ಮಂಗಳೂರು: ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಭಕ್ತರು ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ.

ಕದ್ರಿ ಮಂಜುನಾಥ ದೇಗುಲಕ್ಕೆ ಬೆಳ್ಳಗ್ಗಿನಿಂದಲೂ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ದೇವಳದ ಕೆರೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೇವಳದ ಮುಂದೆ ಕಲಶ ಸ್ನಾನ ಮಾಡುತ್ತಿದ್ದಾರೆ. ಕದ್ರಿ ದೇವಳದಲ್ಲಿ ಕಲಶ ಸ್ನಾನ ಸೇವೆ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

ಹೊಸ ವರ್ಷಾರಂಭದ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಭಕ್ತ ಸಾಗರವೇ ನೆರೆದಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ದಂಡು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬಿದ್ದಿದೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸದ್ಯ ದೇವಸ್ಥಾನದ ಕ್ಯೂ ಸೆಂಟರ್ನಲ್ಲಿ ಭಾರೀ ಜನಜಂಗುಳಿ ಏರ್ಪಟ್ಟಿದೆ.

ದೇವಸ್ಥಾನದ ಮುಂಭಾಗದಲ್ಲಿಯೂ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

Continue Reading

LATEST NEWS

ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ : ನಿನ್ನೆ ಒಂದೇ ದಿನ ಭರ್ತಿ 308 ಕೋಟಿ ರೂ. ಮದ್ಯ ಸೇಲ್.!

Published

on

ಬೆಂಗಳೂರು: ರಾಜ್ಯದಲ್ಲಿ ಹೊಸವರ್ಷ 2025 ನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಗಿದ್ದು, ಈ ನಡುವೆ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ.

ಹೌದು, 2024 ರ ಡಿಸೆಂಬರ್ 31 ರಂದು ರಾಜ್ಯಾದ್ಯಂತ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿದೆ. 2023 ರ ಡಿಸೆಂಬರ್ 31 ರಂದು 193 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿತ್ತು. 2,92,339 ಬಿಯರ್ ಬಾಕ್ಸ್ ಮಾರಾಟದಿಂದ 57.75 ಕೋಟಿ ರೂ. ಒಟ್ಟು 7,76,042 ಬಾಕ್ಸ್ ಮದ್ಯ ಮಾರಾಟದಿಂದ 308 ಕೋಟಿ ರೂ. ಬಂದಿದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 28ರ ಶನಿವಾರ 408.53 ಕೋಟಿ ರೂಪಾಯಿ ಮದ್ಯ ಮಾರಾಟವಾಗಿದೆ. ಡಿಸೆಂಬರ್ 27ರಂದು ರಜೆ ಘೋಷಣೆ ಮಾಡಿದ್ದರಿಂದ ಮದ್ಯ ಖರೀದಿ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ. ರಾಜ್ಯಾದ್ಯಂತ ಡಿ. 28ರಂದು 6,22,062 ಕೇಸ್ ವಿಸ್ಕಿ ಮತ್ತು ಇತರ ಸ್ಪಿರಿಟ್ ಖರೀದಿ ಮಾಡಲಾಗಿದೆ. 4,04,998 ಕೇಸ್ ಬಿಯರ್ ಸೇರಿದಂತೆ 10,27,060 ಕೇಸ್ ಮದ್ಯ ಮಾರಾಟ ಆಗಿದೆ. ಇದರಲ್ಲಿ 80.58 ಕೋಟಿ ಮೊತ್ತದ ಬಿಯರ್ ಇದ್ದರೆ, 327,50 ಕೋಟಿ ಮೌಲ್ಯದ ಸ್ಪಿರಿಟ್ಸ್ ಮಾರಾಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

LATEST NEWS

ಸೇನಾ ವಾಹನ ದು*ರಂತ ಪ್ರಕರಣ; ಹುತಾತ್ಮ ಯೋಧ ದಿವಿನ್ ಅಂತ್ಯಕ್ರಿಯೆ

Published

on

ಮಂಗಳೂರು/ಮಡಿಕೇರಿ: ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ನಡೆದ ಸೇನಾ ವಾಹನ ದುರಂತದಲ್ಲಿ ಗಂ*ಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ. ಅವರ ಪಾರ್ಥಿ*ವ ಶರೀರ ಹೂಟ್ಟುರು ತಲುಪಿದೆ.

ಓದಿದ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಹುತಾತ್ಮ ಯೋಧ ದಿವಿನ್ ವಿದ್ಯಾಭ್ಯಾಸ ಮಾಡಿದ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಕೆಲ ಗಂಟೆಗಳ ಕಾಲ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಬಳಿಕ ಕುಶಾಲನಗರದಿಂದ ನೇರವಾಗಿ ಆಲೂರು ಸಿದ್ದಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ಯಲಾಗುತ್ತದೆ.

ಇದನ್ನೂ ಓದಿ: ಸೇನಾ ವಾಹನ ಅಪಘಾತ ಪ್ರಕರಣ : ಕೋಮಾದಲ್ಲಿದ್ದ ಕೊಡಗಿನ ಯೋಧ ವಿಧಿವಶ..!

ಬಳಿಕ ದಿವಿನ್ ಅವರ ತೋಟದಲ್ಲಿರುವ ಅವರ ತಂದೆ ಸಮಾಧಿ ಪಕ್ಕದಲ್ಲಿ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂ*ತದಲ್ಲಿ ಕೊಡಗಿನ ಯೋಧ ಗಂ*ಭೀರ ಗಾಯಗೊಂಡಿದ್ದರು. ದುರಂತದಲ್ಲಿ ಕರ್ನಾಟಕದ ಮೂವರು ಸೈನಿಕರು ಹುತಾತ್ಮರಾಗಿದ್ದರು.

Continue Reading

LATEST NEWS

Trending

Exit mobile version