Thursday, March 4, 2021

ಕರಾವಳಿ ನಗರಿ ಮಂಗಳೂರಿಗೆ ಬಂದಿಳಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ..!

ಕರಾವಳಿ ನಗರಿ ಮಂಗಳೂರಿಗೆ ಬಂದಿಳಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ..!

ಮಂಗಳೂರು/ ಕಾಸರಗೋಡು :ಕೇರಳದ ಕಾಸರಗೋಡಿನಲ್ಲಿ ನಡೆಯಲಿರುವ ಬಿಜೆಪಿಯ ವಿಜಯ ಯಾತ್ರೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಜನಪ್ರಿಯ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಇಂದು ಸಂಜೆ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದರು.

ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ  ಸುದರ್ಶನ ಎಂ., ಶಾಸಕರಾದ ಡಾ.ಭರತ್ ಶೆಟ್ಟಿ, ಪ್ರಮುಖರಾದ ರವಿಶಂಕರ ಮಿಜಾರ್, ಸಂತೋಷ್ ರೈ, ಕಸ್ತೂರಿ ಪಂಜ, ದಿವಾಕರ ಪಾಂಡೇಶ್ವರ, ಸುಧೀರ್ ಶೆಟ್ಟಿ, ಜಗದೀಶ ಶೇಣವ, ನಿತಿನ್ ಕುಮಾರ್ ಉಪಸ್ಥಿತರಿದ್ದರು.

ನಂತರ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಆದಿತ್ಯನಾಥ್ ಕೇರಳದ ಕಾಸರಗೋಡಿಗೆ ರಸ್ತೆ ಮೂಲಕ ತೆರಳಿದ ಯೋಗಿ ಆದಿತ್ಯನಾಥ್ ಕಾಸರಗೋಡಿನಲ್ಲಿ ಕೇರಳ ಬಿಜೆಪಿ ನಾಯಕ ಕೆ. ಸುರೇಂದ್ರನ್ ನೇತೃತ್ವದ ವಿಜಯ ಯಾತ್ರೆ ಮತ್ತು ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡರು.

ಯೋಗಿ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ಮತ್ತು ಕಾಸರಗೋಡಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕಾಸರಗೋಡು ವರದಿ:

ಕೇರಳ ರಾಜ್ಯದಲ್ಲಿ “ಲವ್ ಜಿಹಾದ್” ಮೂಲಕ ಧಾರ್ಮಿಕ ಮತಾಂತರವನ್ನು ತಡೆಯಲು ಸರಕಾರವು ಯಾವುದೇ ರಚನಾತ್ಮಕ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇರಳದ ಎಡಪಂಥೀಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

2009 ರಲ್ಲಿ ಕೇರಳ ಹೈಕೋರ್ಟ್ ಧಾರ್ಮಿಕ ಮತಾಂತರದ ವಿರುದ್ಧ ಹೇಳಿಕೆ ನೀಡಿದ್ದರೂ, ಅದನ್ನು ಪರಿಶೀಲಿಸಲು ರಾಜ್ಯ ಸರ್ಕಾರ ಇಲ್ಲಿಯವರೆಗೆ ಏನೂ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರ “ಲವ್ ಜಿಹಾದ್” ಮತ್ತು ಬಲವಂತದ ಮತಾಂತರಗಳನ್ನು ನಿಯಂತ್ರಿಸಲು ಶಾಸನವನ್ನು ತಂದಿದೆ ಎಂದು ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ನೇತೃತ್ವದಲ್ಲಿ ರಾಜ್ಯವ್ಯಾಪಿ “ವಿಜಯ ಯಾತ್ರೆ” ಉದ್ಘಾಟಿಸಿದ ನಂತರ ಆದಿತ್ಯನಾಥ್ ಹೇಳಿದರು.

“2009 ರಲ್ಲಿ, ಕೇರಳ ಹೈಕೋರ್ಟ್ ʼಲವ್ ಜಿಹಾದ್ʼ ಕೇರಳವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಪರಿವರ್ತಿಸುತ್ತದೆ ಎಂದು ಹೇಳಿತ್ತು. ಇದರ ಹೊರತಾಗಿಯೂ, ರಾಜ್ಯ ಸರ್ಕಾರ ನಿದ್ರಿಸುತ್ತಿದೆ” ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಆರೋಪಿಸಿದರು.

ಕೇರಳದ 14 ಜಿಲ್ಲೆಗಳ ಎಲ್ಲಾ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 15 ದಿನಗಳ ವಿಜಯ ಯಾತ್ರೆಯು ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ವಿವಿಧ ಕೇಂದ್ರ ಸಚಿವರು ಮತ್ತು ರಾಷ್ಟ್ರಮಟ್ಟದ ಬಿಜೆಪಿ ಮುಖಂಡರು ಮತ್ತು ಸ್ಟಾರ್ ಪ್ರಚಾರಕರು ಯಾತ್ರೆಗೆ ಸೇರುವ ನಿರೀಕ್ಷೆಯಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...