Wednesday, October 5, 2022

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ : ಭಟ್ಕಳದ ಮುಟ್ಟಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿತ: ನಾಲ್ವರು ಅವಶೇಷಗಳಡಿ..!

ಭಟ್ಕಳದಲ್ಲಿ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಇಂದು ಮುಂಜಾನೆ ಮನೆಯೊಂದರ ಮೇಲೆ ಗುಡ್ಡ ಕುಸಿದು ಮನೆಯಲ್ಲಿ ಮಲಗಿದ್ದ ನಾಲ್ವರು ಅವಶೇಷಗಳಡಿ ಸಿಲುಕಿದ್ದಾರೆ.

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ತೀವ್ರಗೊಂಡಿದೆ. ಜಿಲ್ಲೆಯ ಆನೇಕ ಭಾಗಗಳು ಜಲಾವೃತಗೊಂಡು ಅಪಾರ ಆಸ್ತಿಪಾಸ್ತಿ ನಾಶವಾಗಿದೆ.

ಭಟ್ಕಳದಲ್ಲಿ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಇಂದು ಮುಂಜಾನೆ ಮನೆಯೊಂದರ ಮೇಲೆ ಗುಡ್ಡ ಕುಸಿದು ಮನೆಯಲ್ಲಿ ಮಲಗಿದ್ದ ನಾಲ್ವರು ಅವಶೇಷಗಳಡಿ ಸಿಲುಕಿದ್ದಾರೆ.

ಮುಟ್ಟಳ್ಳಿ ಗೌರಮ್ಮಜ್ಜಿ ಮನೆ ಇದಾಗಿದ್ದು. ಮನೆಯಲ್ಲಿದ್ದ ಲಕ್ಷ್ಮಿ ನಾರಾಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮಿ ನಾಯ್ಕ (33), ಪುತ್ರ ಅನಂತ ನಾರಾಯಣ ನಾಯ್ಕ (32) ಹಾಗೂ ಸಂಬಂಧಿ ಪ್ರವೀಣ ಬಾಲಕೃಷ್ಣ ನಾಯ್ಕ (20) ಮಣ್ಣಿನಲ್ಲಿ ಸಿಲುಕಿಕೊಂಡಿದ್ದಾರೆ.

ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದಲ್ಲಿ ಕೆಂಪುಕಲ್ಲು ಮಿಶ್ರಿತ ಮಣ್ಣು ಕುಸಿದಿದೆ.

ಮನೆ ಸಂಪೂರ್ಣ ನಾಶವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಆರಂಭವಾಗಿದೆ.

ಜೊತೆಗೆ ನಾಗ ಮಾಸ್ತಿ ದೇವಸ್ಥಾನದ ಮೂರ್ತಿಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ರೈಲು ನಿಲ್ದಾಣ ಸಮೀಪದಲ್ಲಿರುವ ಈ ದೇವಸ್ಥಾನವು ಇತಿಹಾಸ ಪ್ರಸಿದ್ಧವಾಗಿದೆ.

ದೇವಸ್ಥಾನದ ನಾಲ್ಕೈದು ಮೂರ್ತಿಗಳು ನೀರು ಪಾಲಾಗಿವೆ.

ವೆಂಕಟಾಪುರದಲ್ಲಿ ಪ್ರವಾಹದಿಂದ ಹುಲ್ಲುಕಿ ಸೇತುವೆಯ ಬಳಿ ರೈಲು ಹಳಿಗೂ ಹಾನಿಯಾಗಿದೆ. ಕೊಂಕಣ ರೈಲ್ವೆಯ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಭಟ್ಕಳ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...