LATEST NEWS
ವಾಲ್ಮೀಕಿ ನಿಗಮ ಹಗರಣ : ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
Published
4 months agoon
By
NEWS DESK4ಮಂಗಳೂರು/ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3 ತನಕ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ(ಜು.22) ಆದೇಶಿಸಿದೆ. ಹಗರಣದ ಆರೋಪಿ ಸತ್ಯನಾರಾಯಣ ವರ್ಮನನ್ನು ಬಾಡಿ ವಾರೆಂಟ್ ಮೇಲೆ ನಮಗೆ ನೀಡಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕೋರ್ಟ್ ಗೆ ಮನವಿ ಮಾಡಿದ್ದಾರೆ.
ಹಗರಣ ಸಂಬಂಧ ಸತ್ಯನಾರಾಯಣ ವರ್ಮನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಸದ್ಯ ಆರೋಪಿ ಪರಪ್ಪನ ಅಗ್ರಹಾರದಲ್ಲಿದ್ದಾನೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಭಾನುವಾರ ಪರಪ್ಪನ ಅಗ್ರಹಾರಕ್ಕೆ ತೆರಳಿ ಸತ್ಯನಾರಾಯಣ ವರ್ಮನನ್ನು ವಿಚಾರಣೆ ನಡೆಸಿದ್ದರು.
ಏನಿದು ಹಗರಣ?
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು.
ಈ ಸಂಬಂಧ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ಈ ಬಗ್ಗೆ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಎಸ್‌ಐಟಿ ಬಂಧಿಸಿದೆ.
ಜುಲೈ 10 ರಂದು ದಾಳಿ ನಡೆಸಿದ್ದ ಇಡಿ :
ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ (ಜು.10) ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಿಗಮದ ಹಣದಲ್ಲಿ ಮದ್ಯ ಖರೀದಿ ಮಾಡಿದ್ದಾರೆ. ಈ ಬಗ್ಗೆ ಬಸನಗೌಡ ದದ್ದಲ್ ಮತ್ತು ನಾಗೇಂದ್ರ ನಿವಾಸದಲ್ಲಿ ಮಹತ್ವದ ದಾಖಲೆಗಳ ಪತ್ತೆಯಾಗಿವೆ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆ ನೀಡಿತ್ತು.
ಇದನ್ನೂ ಓದಿ : WATCH : ಲೈಟ್ಸ್…ಕ್ಯಾಮೆರಾ…ಆ್ಯಕ್ಷನ್…ಥಿಯೇಟರ್ ನಲ್ಲಿ ತರುಣ್ ಸುಧೀರ್ – ಸೋನಲ್ ಪ್ರೀ – ವೆಡ್ಡಿಂಗ್ ಶೂಟ್
ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬಂಧಿಸಿದ್ದರು. ಇದೀಗ ಬಿ. ನಾಗೇಂದ್ರ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
Ancient Mangaluru
ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು
Published
4 hours agoon
27/11/2024By
NEWS DESKಮಂಗಳೂರು : ವೆಣೂರಿನ ಬರ್ಕಜೆ ಸಮೀಪದಲ್ಲಿರುವ ಸ್ನೇಹಿತನ ಮನೆಗೆ ತೆರಳಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಮದ್ಯಾಹ್ನದ ಊಟ ಮುಗಿಸಿ ಸಮೀಪದ ನದಿಗೆ ಈಜಲು ತೆರಳಿದ್ದ ಮೂವರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾ*ಣ ಕಳೆದುಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ವೇಣೂರಿನ ಮೂಡಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಮೂಡಬಿದ್ರೆಯ ಲಾರೆನ್ಸ್ 20 ವರ್ಷ, ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ 19 ವರ್ಷ, ಹಾಗೂ ಬಂಟ್ವಾಳದ ವಗ್ಗ ಗ್ರಾಮದ ಜೈಸನ್ 19 ವರ್ಷ ಈ ಮೂವರು ಹೋಗಿದ್ದಾರೆ. ಮದ್ಯಾಹ್ನದ ಊಟವನ್ನು ಮುಗಿಸಿದ ಇವರು ಜೊತೆಯಾಗಿ ಬರ್ಕಜೆ ಸಮೀಪದ ಡ್ಯಾಂ ಬಳಿ ನದಿಯಲ್ಲಿ ಈಜಲು ಹೋಗಿದ್ದಾರೆ. ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಮೂವರೂ ನೀರುಪಾಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಿಯರು ರಕ್ಷಣೆಗೆ ನದಿಗೆ ದುಮಿಕಿದ್ದಾರೆ. ಆದ್ರೆ ಮೂವರನ್ನು ನದಿಯಿಂದ ಮೇಲೆತ್ತುವ ಮೊದಲೇ ಇ*ಹಲೋಕ ತ್ಯಜಿಸಿದ್ದಾರೆ. ಮೂವರೂ ಮಂಗಳೂರಿನ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.
LATEST NEWS
ಮತ್ತೆ ತಾಯಿ ಮಡಿಲು ಸೇರಿದ ಅಪಹರಣಕ್ಕೊಳಗಾಗಿದ್ದ ನವಜಾತ ಶಿಶು; ಇಬ್ಬರು ಕಳ್ಳಿಯರು ಅರೆಸ್ಟ್
Published
7 hours agoon
27/11/2024By
NEWS DESK4ಮಂಗಳೂರು/ಕಲಬುರಗಿ : ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಅಪಹರಣಕ್ಕೊಳಗಾಗಿದ್ದ ನವಜಾತ ಶಿಶುವನ್ನು 36 ಗಂಟೆಗಳಲ್ಲಿ ರಕ್ಷಿಸಿ, ಮತ್ತೆ ತಾಯಿಯ ಮಡಿಲು ಸೇರಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಗುವನ್ನು ಅಪಹರಣ ಮಾಡಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಹೆಚ್.ನಸ್ರೀನ್ ಮತ್ತು ಫಾತೀಮಾ ಬಂಧಿತ ಆರೋಪಿಗಳು.
ಸೋಮವಾರ(ನ.25)ಮುಂಜಾನೆ ಮಹಿಳೆಯರಿಬ್ಬರು ಜಿಮ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ನವಜಾತ ಶಿಶುವನ್ನು ಅಪಹರಿಸಿ ಪರಾರಿಯಾಗಿದ್ದರು. ಈ ಘಟನೆ ರಾಜ್ಯದ್ಯಂತ ಭಾರಿ ಸುದ್ದಿಯಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸುವ ಮೂಲಕ ಪೊಲೀಸರು ಕಳ್ಳಿಯರನ್ನು ಬಂಧಿಸಿದ್ದಾರೆ.
ನರ್ಸ್ ವೇಷದಲ್ಲಿ ಬಂದಿದ್ದ ಕಳ್ಳಿಯರು :
ಕಸ್ತೂರಿ ಎಂಬವರು ಸೋಮವಾರ ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ತಾಯಿ ಮಗು ಆರೋಗ್ಯವಾಗಿದ್ದರು. ಆದರೆ, ನರ್ಸ್ ವೇಷದಲ್ಲಿ ಬಂದ ಮಹಿಳೆಯರು, ರಕ್ತ ಪರೀಕ್ಷೆ ಮಾಡಬೇಕು, ಮಗುವನ್ನು ಕರೆ ತನ್ನಿ ಎಂದು ಹೇಳಿದ್ದಾರೆ. ಇದನ್ನು ನಂಬಿ ಕಸ್ತೂರಿ ಅವರ ಸಂಬಂಧಿ ರಕ್ತ ತಪಾಸಣೆಗಾಗಿ ಮಗುವಿನೊಂದಿಗೆ ಹೋಗಿದ್ದರು. ಈ ವೇಳೆ ಮಹಿಳೆಯರು ಮಗುವನ್ನು ನಮಗೆ ಕೊಡಿ ಎಂದಿದ್ದಾರೆ. ಅದರಂತೆ ಮಹಿಳೆ ಮಗುವನ್ನು ಅವರಿಗೆ ಕೊಟ್ಟಿದ್ದಾರೆ. ಮಗು ಪಡೆದ ಕಳ್ಳಿಯರು ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಇದನ್ನೂ ಓದಿ : ಬೆಚ್ಚಿ ಬೀಳಿಸಿದ ಯುವತಿ ಕೊ*ಲೆ ಪ್ರಕರಣ; ಪ್ರೇಯಸಿಯ ಶ*ವದೊಂದಿಗೆ ಒಂದು ದಿನ ಕಳೆದಿದ್ದ ಯುವಕ!
ಈ ಬಗ್ಗೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
International news
ನೀವು ಕೂಡ ಕ್ರಿಕೆಟ್ ಅಂಪೈರ್ ಆಗಬಹುದು; ಲಕ್ಷ ಲಕ್ಷ ಸಂಬಳ !
Published
7 hours agoon
27/11/2024By
NEWS DESK3ಮಂಗಳೂರು : ಭಾರತದಲ್ಲಿ ಕ್ರಿಕೆಟ್ ಗೆ ಎಷ್ಟು ಕ್ರೇಜ್ ಇದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಬಾಲ್ಯದಲ್ಲಿ ಕ್ರಿಕೆಟ್ ಆಡುವ ಪ್ರತಿಯೊಬ್ಬರು ಕೂಡ ಭಾರತದ ಪರ ಆಡುವ ಕನಸನ್ನು ಕಾಣುತ್ತಾರೆ. ಆದರೆ ಎಲ್ಲರಿಗೂ ಇದು ಸಾಧ್ಯವಾಗುವುದಿಲ್ಲ. ಆದರೆ ನಿಮ್ಮ ಕನಸು ಈಡೇರದಿದ್ದರೂ ನೀವು ಅಂಪೈರ್ ಆಗುವ ಮೂಲಕ ನಿಮ್ಮ ಕನಸನ್ನು ಸಾಕಾರಗೊಳಿಸಬಹುದು.
ಕೆಲವೇ ಕೆಲವು ಜನರಿಗೆ ಮಾತ್ರ ಅಂಪೈರ್ ಆಗುವುದು ಹೇಗೆಂದು ಗೊತ್ತಿದೆ. ಕ್ರಿಕೆಟ್ ಅಂಪೈರ್ ಆಗಲು ಕೆಲವೊಂದು ಪ್ರಕ್ರಿಯೆಗಳಿವೆ. ಕ್ರಿಕೆಟ್ ಕೌಶಲ್ಯವನ್ನು ಮಾತ್ರವಲ್ಲದೇ ದೈಹಿಕ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕೂಡ ಮುಖ್ಯವಾಗಿರುತ್ತದೆ.
ಅಂಪೈರ್ ಆಗಲು ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ?
ಸ್ಥಳೀಯ ಮಟ್ಟದಲ್ಲಿ ನಡೆಯುವ ಪಂದ್ಯಗಳಲ್ಲಿ ಅಂಪೈರಿಂಗ್ ಮಾಡಬೇಕು. ಆ ಮೂಲಕ ಅಂಪೈರಿಂಗ್ ಮಾಡುವ ಅನುಭವವನ್ನು ಪಡೆದುಕೊಳ್ಳಬೇಕು. ಇಲ್ಲಿ ಸಿಗುವ ಅನುಭವ ಅಂಪೈರ್ ವಿಭಾಗದಲ್ಲಿ ನಿಮ್ಮನ್ನು ಎತ್ತರ ಮಟ್ಟಕ್ಕೆ ಕೊಂಡೊಯ್ಯಲು ಸಹಾಯ ಮಾಡುತ್ತದೆ. ನಂತರ ಕ್ರಿಕೆಟ್ ಅಂಪೈರ್ ಆಗಲು ಬಯಸಿದ ಅಭ್ಯರ್ಥಿಗಳು ತಮಗೆ ಸಂಬಂಧಿತ ‘ರಾಜ್ಯ ಕ್ರಿಕೆಟ್ ಸಂಸ್ಥೆ’ಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಇದಕ್ಕಾಗಿ ಸ್ಥಳೀಯ ಪಂದ್ಯಗಳಲ್ಲಿ ಅನುಭವ ಪಡೆಯುವುದು ಮುಖ್ಯವಾಗಿದೆ.
ಇದನ್ನೂ ಓದಿ: ತಂದೆ-ತಾಯಿಯನ್ನು ಕೂಡಿ ಹಾಕಿ ಮಗಳು ಪ್ರಿಯಕರನೊಂದಿಗೆ ಪರಾರಿ !!
ನೀವು ರಾಜ್ಯ ಕ್ರಿಕೆಟ್ ಸಂಸ್ಥೆಯೊಂದಿಗೆ ನೀವು ಸಾಕಷ್ಟು ಅನುಭವ ಪಡೆದ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಡೆಸುವ ಹಂತ-1 ಪರೀಕ್ಷೆಗೆ ಹೆಸರನ್ನು ಕಳುಹಿಸಲಾಗುತ್ತದೆ. ನಂತರ ಮೂರು ದಿನಗಳ ಕಾಲ ಬಿಸಿಸಿಐ ತರಬೇತಿ ನೀಡುತ್ತದೆ. ನಾಲ್ಕನೇ ದಿನ ಲಿಖಿತ ಪರೀಕ್ಷೆ ನಡೆಸುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಬಿಸಿಸಿಐ ಶಾರ್ಟ್ ಲಿಸ್ಟ್ ಮಾಡುತ್ತದೆ.
ಬಿಸಿಸಿಐ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ವಿಶೇಷ ತರಬೇತಿಗೆ ಕರೆಯುತ್ತದೆ. ಅಲ್ಲಿ ಆಟದ ನಿಯಮಗಳು ಮತ್ತು ಇತರೆ ಪ್ರಮುಖ ವಿಷಯಗಳ ಬಗ್ಗೆ ತರಬೇತಿ ನೀಡುತ್ತದೆ. ನಂತರ ಅಭ್ಯರ್ಥಿಗಳು ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಈ ಎಲ್ಲಾ ಹಂತದ ಪರೀಕ್ಷೆಗಳಲ್ಲಿ ಯಶಸ್ವಿಯಾದರೆ ಮಾತ್ರ ಹಂತ-2 ಪರೀಕ್ಷೆಗೆ ಅರ್ಹರಾಗುತ್ತೀರಿ.
ಎರಡನೇ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ವೈದ್ಯಕೀಯ ಪರೀಕ್ಷೆ ನಡೆಸುತ್ತದೆ. ಇದರಲ್ಲಿ ದೈಹಿಕ ಸಾಮರ್ಥ್ಯವನ್ನು ಪರಿಶೀಲಿಸಲಾಗುತ್ತದೆ. ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಮುಗಿಸಿದ ನಂತರ ಬಿಸಿಸಿಐ ನಿಮ್ಮನ್ನು ಅಂಪೈರ್ ಎಂದು ಪ್ರಕಟಿಸುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ಅನುಸರಿಸುವ ಮೂಲಕ ನೀವು ಅರ್ಹ ಕ್ರಿಕೆಟ್ ಅಂಪೈರ್ ಆಗಬಹುದು. ವಿವಿಧ ಹಂತಗಳಲ್ಲಿ ಪಂದ್ಯಗಳನ್ನು ನಿರ್ವಹಿಸಬಹುದು.
ಅಂಪೈರ್ ಗೆ ಸಿಗುವ ಸಂಬಳ ಎಷ್ಟು :
ಅಂಪೈರ್ ಗಳ ವೇತನವು ಅವರ ದರ್ಜೆ, ಅನುಭವ ಮತ್ತು ಹಿರಿತನದ ಮೇಲೆ ಅವಲಂಬಿತವಾಗಿರುತ್ತದೆ. ಬಿಸಿಸಿಐನ ವರದಿಗಳ ಪ್ರಕಾರ ಎ+ ಮತ್ತು ಎ ಗ್ರೇಡ್ ಅಂಪೈರ್ ಗಳು ದೇಶಿಯ ಪಂದ್ಯಗಳಿಗೆ ದಿನಕ್ಕೆ 40,000 ರೂಪಾಯಿ ಪಡೆಯುತ್ತಾರೆ. ಬಿ ಮತ್ತು ಸಿ ದರ್ಜೆಯ ಅಂಪೈರ್ ಗಳಿಗೆ ದಿನಕ್ಕೆ 30,000 ರೂಪಾಯಿ ನೀಡಲಾಗುತ್ತದೆ.
ಅಂಪೈರ್ ನ ದಾಖಲೆ ಉತ್ತಮವಾಗಿದ್ದರೆ ಅವರನ್ನು ಐಸಿಸಿ ಪ್ಯಾನಲ್ ಗೆ ಸೇರಿಸಬಹುದು. ಐಸಿಸಿಯು ಪ್ರತಿ ಪಂದ್ಯಕ್ಕೆ 1.50 ರಿಂದ 2.20 ಲಕ್ಷ ರೂಪಾಯಿ ನೀಡುತ್ತದೆ. ವಾರ್ಷಿಕವಾಗಿ 75 ಲಕ್ಷಕ್ಕಿಂತ ಹೆಚ್ಚಾಗಿರುತ್ತದೆ.
ನಿಮಗೆ ಕ್ರಿಕೆಟ್ ನಲ್ಲಿ ಆಸಕ್ತಿ ಇದ್ದು, ಟೀಂ ಇಂಡಿಯಾದಲ್ಲಿ ಆಡಲು ಅವಕಾಶ ವಂಚಿತರಾದರೆ, ನಿಮಗೆ ಅಂಪೈರ್ ವೃತ್ತಿಯನ್ನು ಆಯ್ದುಕೊಳ್ಳಬಹುದು.
LATEST NEWS
ಸರಕಾರಿ ಕೆಲಸದ ಹುಡುಗನೇ ಬೇಕೆಂದು ಮಂಟಪದಲ್ಲೇ ವರನನ್ನು ತಿರಸ್ಕರಿಸಿದ ವಧು !!
ನಂಬಿದವರ ಕೈ ಬಿಡದ ಪದಾಳ ಸುಬ್ರಹ್ಮಣ್ಯ ಸ್ವಾಮಿ ಸನ್ನಿಧಾನದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ
ನಿಮ್ಮ ನಾಯಿಗಳನ್ನು ಪಾರ್ಕ್ಗೆ ಕೊಂಡೊಯ್ಯುತ್ತೀರಾ? ಹೈಕೋರ್ಟ್ ಹೊಸಮಾರ್ಗಸೂಚಿ ಗಮನಿಸಿ!
ಐಪಿಎಲ್ ಹರಾಜು ಪ್ರಕ್ರಿಯೆ ನಡೆಸಿ ಕೊಟ್ಟ ಈ ಮಹಿಳೆ ಯಾರು ?
ಎಟಿಎಂ ಹೊತ್ತೊಯ್ದರೂ ಸಿಗದ ಹಣ; ನೀಲಗಿರಿ ತೋಪಿನಲ್ಲಿ ಯಂತ್ರ ಬಿಟ್ಟು ಪರಾರಿಯಾದ ಖದೀಮರು
ಬೆಚ್ಚಿ ಬೀಳಿಸಿದ ಯುವತಿ ಕೊ*ಲೆ ಪ್ರಕರಣ; ಪ್ರೇಯಸಿಯ ಶ*ವದೊಂದಿಗೆ ಒಂದು ದಿನ ಕಳೆದಿದ್ದ ಯುವಕ!
Trending
- Baindooru5 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION7 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS4 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!
- Baindooru4 days ago
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ