Connect with us

    LATEST NEWS

    “ಹೊರಗೆ ಬಂದ್ರೆ ಇನ್ನೂ ನಾಲ್ವರನ್ನ ಕೊಲೆ ಮಾಡ್ತೇನೆ” ಎನ್ನುವ ಅಪರಾಧಿ ಪ್ರವೀಣ್‌ನನ್ನು ಬಿಡುಗಡೆ ಮಾಡದಂತೆ ಕಮೀಷನರ್‌ಗೆ ಕುಟುಂಬಸ್ಥರ ಮನವಿ

    Published

    on

    ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವ ಹಿನ್ನೆಲೆ ಸನ್ನಡತೆಯ ಆಧಾರದಲ್ಲಿ ಜೈಲಿನಿಂದ ಬಿಡುಗಡೆಗೊಳಿಸಲು ಪ್ರಯತ್ನಿಸುತ್ತಿರುವ ವಾಮಂಜೂರು ಕೊಲೆ ಪ್ರಕರಣ ಅಪರಾಧಿ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಪ್ರವೀಣ್ ಕುಮಾರ್‌ನನ್ನು ಯಾವ ಕಾರಣಕ್ಕೂ ಬಿಡುಗಡೆ ಮಾಡಬಾರದು.

    “ನಾನು ಹೊರಗೆ ಬಂದ್ರೆ ಇನ್ನೂ ನಾಲ್ಕು ಜನ್ರರನ್ನ ಕೊಲೆ ಮಾಡ್ತೇನೆ” ಎಂದು ಈಗಾಗಲೇ ಹೇಳಿದ್ದರಿಂದ ಆತನನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದೆಂದು ಅಪರಾಧಿ ಪ್ರವೀಣ್‌ ಕುಮಾರ್‌ ಪತ್ನಿ,

    ಸಹೋದರ ಮತ್ತು ಕೊಲೆಯಾದ ಅಪ್ಪಿ ಶೇರಿಗಾರ್ತಿಯ ಪುತ್ರ ಸೀತಾರಾಮ ಸಹಿತ 30 ಮಂದಿಯ ತಂಡ ಇಂದು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಕಚೇರಿಗೆ ಆಗಮಿಸಿ ಮನವಿ ಮಾಡಿ ಒತ್ತಾಯಿಸಿದ್ದಾರೆ.


    1994ರ ಫೆ.23ರ ಮಧ್ಯರಾತ್ರಿ ವಾಮಂಜೂರಿನಲ್ಲಿದ್ದ ತನ್ನ ಸೋದರತ್ತೆ ಅಪ್ಪಿ ಶೇರಿಗಾರ್ತಿ, ಅವರ ಪುತ್ರ ಗೋವಿಂದ ಮತ್ತು ಸೋದರತ್ತೆಯ ಪುತ್ರಿ ಶಕುಂತಳಾ ಹಾಗೂ ಶಕುಂತಾಳರ ಪುತ್ರಿ ದೀಪಿಕಾಳನ್ನು ಕೊಲೆ ಮಾಡಿದ್ದ ಆರೋಪವು ಸಾಬೀತಾಗಿತ್ತು.

    ನ್ಯಾಯಾಲಯವು ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಬಳಿಕ ಪ್ರವೀಣ್ ಕುಮಾರ್ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಗಲ್ಲು ಶಿಕ್ಷೆಯು ಜೀವಾವಧಿ ಶಿಕ್ಷೆಗೆ ಪರಿವರ್ತನೆಗೊಂಡಿತ್ತು.

    ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಪ್ರವೀಣ್ ಕುಮಾರ್ ಇದ್ದಾನೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭ ಸನ್ನಡತೆಯ ಆಧಾರದಲ್ಲಿ ಈತನನ್ನು ಜೈಲಿನಿಂದ ಬಿಡುಗಡೆಗೆ ಸರಕಾರ ಮುಂದಾಗಿದೆ.


    ಅಲ್ಲದೆ ಸಂತ್ರಸ್ತರ ಹಾಗೂ ಪ್ರವೀಣ್‌ನ ಮನೆಯವರ ಹೇಳಿಕೆ ದಾಖಲಿಸುವಂತೆ ಸರಕಾರ ಪೊಲೀಸ್ ಇಲಾಖೆಗೆ ಸೂಚಿಸಿತ್ತು.

    ಈ ಹಿನ್ನಲೆಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರವೀಣ್ ಕುಮಾರ್‌ನ ಸಂಬಂಧಿ ಹಾಗೂ ಅಪ್ಪಿ ಶೇರಿಗಾರ್ತಿಯ ಪುತ್ರ ಸೀತಾರಾಮ್, ಪ್ರವೀಣ್‌ನ ಪತ್ನಿ ಅನಸೂಯ ಪ್ರವೀಣ್ ಸಹೋದರ ಪ್ರದೀಪ್‌ರ ಹೇಳಿಕೆ ನೀಡಿದ್ದಾರೆ.

    ಪ್ರವೀಣ್‌ ಕುಮಾರ್ ಬಿಡುಗಡೆಯಾಗಿ ಬಂದರೆ ಮುಂದಿನದಿನಗಳಲ್ಲಿ ಮತ್ತೆ ಆತ ಕೊಲೆ ಮಾಡುವ ಸಾಧ್ಯತೆ ಇದ್ದು ಆತನನ್ನು ಬಿಡುಗಡೆ ಮಾಡಬಾರದು ಎಂದು ಪತ್ನಿ ಕಮಿಷನರ್ ಅವರಲ್ಲಿ ಮನವಿ ಮಾಡಿದ್ದಾರೆ.

    ಅಪರಾಧಿ ಪ್ರವೀಣ್‌ ವಾಮಂಜೂರು

    ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಕಮಿನಷರ್‌ ಶಶಿಕುಮಾರ್, ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದು ಕುಟುಂಬಿಕರು ಇಲ್ಲಿ ಬಂದು ಬಿಡುಗಡೆ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

    ಈ ಬಗ್ಗೆ ಘಟನೆ ನಡೆದಿರುವ ಗ್ರಾಮಾಂತರ ಎಸ್ಪಿ ಅವರಲ್ಲಿ ಮಾಹಿತಿ ಕಲೆ ಹಾಕುತ್ತೇನೆ. ಈ ವಿಚಾರದಲ್ಲಿ ಏನು ಮಾಡಬೇಕೆಂದು ನಿರ್ಧರಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮನೆ ಮಂದಿಗೆ ಭರವಸೆ ನೀಡಿದ್ದಾರೆ.

    1 Comment

    1 Comment

    1. Sharath Kumar Shetty

      09/08/2022 at 1:44 PM

      ನಮಸ್ತೆ🙏
      ನಿಜಕ್ಕೂ ಇದು ನಮ್ಮ ದೇಶದ ಕಾನೂನು ವ್ಯವಸ್ಥೆಯ ಹಾಗೂ ಕೆಲ ಧೋರಣೆಗಳ ವಿಡಂಬನೆ. ಜೈಲಿನೊಳಗೆ ಈತನ ಗುಣನಡತೆ ಎಷ್ಟೇ ಒಳ್ಳೆಯದಿದ್ದರೂ ಈತನೊಬ್ಬ ಮಹಾನ್ ಕಟುಕ ಕೊಲೆಗಾರ. ಕೋರ್ಟ್ ಗಳು ವಿಚಾರಿಸಿ ಗಲ್ಲು ಶಿಕ್ಷೆ ವಿಧಿಸಿದ ಮೇಲೆ ಮತ್ತೆ ಈತನ ಮನವಿಯನ್ನು ಪುರಸ್ಕರಿಸುವುದಾದರೆ.ಕೋರ್ಟಿನ ತೀರ್ಮಾನಕ್ಕೆ ಏನು ಅರ್ಥವೋ?!. ಮತ್ತೆ ಇವನ ಪರವಾಗಿ ಸರಕಾರವೇ ವಾದ ಮಾಡಿ ಆತನನ್ನು ಹೊರಗೆ ಕಳುಹಿಸುವ ತೀರ್ಮಾನ!. ಇದು ವಿಚಿತ್ರ. ಇಂತಹ ನಮ್ಮ ಕಾನೂನಿನ ನ್ಯೂನ್ಯತೆಗಳೇ, ಧೋರಣೆಗಳೇ ನಮ್ಮ ದೇಶದಲ್ಲಿ ರಾಜಾರೋಷವಾಗಿ ಕೊಲೆಮಾಡಲು ಪ್ರೋತ್ಸಾಹ ನೀಡುತ್ತಿದೆ. ಮನೆಯವರಿಗೇ ಬೇಡದ ಈ ನೀಚನನ್ನು ದಯವಿಟ್ಟು ಬಿಡುಗಡೆಮಾಡಬೇಡಿ.

    Leave a Reply

    Your email address will not be published. Required fields are marked *

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending