Thursday, September 29, 2022

ಕೊಲೆ ಪಾತಕಿ ವಾಮಂಜೂರು ಪ್ರವೀಣ್‌ ಬಿಡುಗಡೆಗೆ ಆಕ್ಷೇಪ: ಕುಟುಂಬಸ್ಥರ ಹೇಳಿಕೆ ದಾಖಲು-ನಾಳೆ ಕಮೀಷನರ್‌ ಭೇಟಿ

ಮಂಗಳೂರು: 1994ರ ಕೊಲೆ ಪಾತಕಿ ವಾಮಂಜೂರು ಪ್ರವೀಣ್‌ನನ್ನು ಜೈಲಿನಿಂದ ಬಿಡುಗಡೆ ಮಾಡುವ ಬಗ್ಗೆ ಆತನ ಕುಟುಂಬಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಕುಟುಂಬಿಕರ ಹೇಳಿಕೆ ಪಡೆದುಕೊಂಡಿದ್ದಾರೆ.

ಪ್ರವೀಣ್‌ ಕುಮಾರ್‌

ಪ್ರವೀಣ್‌ ಕುಮಾರ್‌ ಸಂಬಂಧಿ ಸೀತಾರಾಮ್‌ ಸೇರಿದಂತೆ ನಾಲ್ಕು ಮಂದಿ ಮಂಗಳೂರು ಗ್ರಾಮಾಂತರ ಠಾಣೆಗೆ ತೆರಳಿ ತಮ್ಮ ಹೇಳಿಕೆಯನ್ನು ನೀಡಿದರು. ಪ್ರವೀಣ್‌ ಪತ್ನಿ ಅನಸೂಯ ಅವರಿಗೆ ವೈಯಕ್ತಿಕ ಕಾರಣಗಳಿಂದ ಠಾಣೆಗೆ ಹಾಜರಾಗಲು ಸಾಧ್ಯವಾಗದ ಕಾರಣ ಪೊಲೀಸರು ಸ್ವತ: ಅನಸೂಯ ಅವರ ಮನೆಗೆ ತೆರಳಿ ಹೇಳಿಕೆಯನ್ನು ದಾಖಲಿಸಿಕೊಂಡಿದ್ಧಾರೆ.

ಪ್ರವೀಣ್‌ ಸಹೋದರ ಕೂಡಾ ಹೇಳಿಕೆ ನೀಡಿದ್ದಾರೆ. ಹೇಳಿಕೆ ನೀಡಿದ ಎಲ್ಲರೂ ನಾಲ್ಕು ಮಂದಿಯನ್ನು ಕೊಲೆ ಮಾಡಿದ ಪಾತಕಿ ಪ್ರವೀಣ್‌ನನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡ ಬಾರದು. ಒಂದೊಮ್ಮೆ ಆತನನ್ನು ಜೈಲಿನಿಂದ ಬಿಟ್ಟರೆ ಕುಟುಂಬದ ನೆಮ್ಮದಿ ಹಾಳಾಗಬಹುದು ಮತ್ತು ಈ ಪ್ರಕರಣದಲ್ಲಿ ಸಾಕ್ಷಿ ಹೇಳಿದವರಿಗೆ ಅನಾಹುತ ತಪ್ಪಿದ್ದಲ್ಲ.

ಹಾಗಾಗಿ ಸನ್ನಡತೆ ನೆಪದಲ್ಲಿ ಪ್ರವೀಣ್‌ನನ್ನು ಬಿಡುಗಡೆ ಮಾಡುವ ಯೋಜನೆಯನ್ನು ಕೈಬಿಡ ಬೇಕು ಎಂದು ಒತ್ತಾಯಿಸಿದ್ದಾರೆ. ಈ ತನ್ಮಧ್ಯೆ ಕುಟುಂಬಿಕರು ಮತ್ತು ಸಂಬಂಧಿಕರು ನಾಳೆ ಬೆಳಗ್ಗೆ 11 ಗಂಟೆಗೆ ಮಂಗಳೂರು ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ಅವರನ್ನು ಭೇಟಿ ಮಾಡಿ ಈ ಕುರಿತಂತೆ ಮನವಿ ಸಲ್ಲಿಸಲಿದ್ದಾರೆ.

ಕಮಿಷನರ್‌ ಆವರು ಪ್ರವೀಣ್‌ ಕುಟುಂಬಿಕರು ಸಲ್ಲಿಸುವ ಮನವಿಯನ್ನು ಹಾಗೂ ಈಗಾಗಲೇ ಗ್ರಾಮಾಂತರ ಠಾಣೆಯ ಪೊಲೀಸರು ದಾಖಲಿಸಿರುವ ಹೇಳಿಕೆಗಳನ್ನು ಸಮೀಕರಿಸಿ ವರದಿಯನ್ನು ಜೈಲು ಅಧಿಕಾರಿಗಳಿಗೆ ಕಳುಹಿಸಿ ಕೊಡಲಿದ್ದಾರೆ.

ವಾಮಂಜೂರು ಪ್ರವೀಣ್‌ನನ್ನು ಬಿಡುಗಡೆ ಮಾಡುವ ಬಗ್ಗೆ ಆತನ ಸಂಬಂಧಿಕರಿಂದ ಮಾತ್ರವಲ್ಲ, ದಕ್ಷಿಣ ಕನ್ನಡ ಜಿಲ್ಲೆಯ ನಾಗರಿಕರಿಂದಲೂ ತೀವ್ರ ವಿರೋಧವಿದೆ.

LEAVE A REPLY

Please enter your comment!
Please enter your name here

Hot Topics

ಕಡಬ: ಕಾನ್ವೆಂಟ್‌ಗೆ ನುಗ್ಗಿ ಹಲ್ಲೆಗೆ ಯತ್ನ-ಇಬ್ಬರು ಯುವಕರು ಅರೆಸ್ಟ್

ಕಡಬ: ಕಾನ್ವೆಂಟ್‌ವೊಂದಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಕಡಬದ ನೆಲ್ಯಾಡಿಯಲ್ಲಿ ನಡೆದಿದೆ.ಕಡಬ ತಾಲೂಕಿನ ಪೇರಡ್ಕ ನಿವಾಸಿಗಳಾದ ಸದಾಂ...

ಮಂಗಳೂರು: ಮಾರ್ನಮಿಕಟ್ಟೆ ದೇವಿ ಪ್ರತ್ಯಂಗಿರಾ ಕ್ಷೇತ್ರದಲ್ಲಿ ಶರನ್ನವರಾತ್ರಿ ಸಂಭ್ರಮ, ದುರ್ಗಾ ನಮಸ್ಕಾರ ಪೂಜೆ

ಮಂಗಳೂರು: ಕರಾವಳಿಯಲ್ಲೀಗ ನವರಾತ್ರಿ ಸಂಭ್ರಮ. ದೇವಿ ದೇಗುಲಗಳಲ್ಲಿ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಲಾಗುತ್ತಿದೆ.ಕಾರಣಿಕದ ಶಕ್ತಿಗೆ ಮನೆಮತಾಗಿರುವ ಹಾಗೂ ದೇವಿಯ ಸನ್ನಿಧಾನಕ್ಕೆ ಬಂದು ಪ್ರಾರ್ಥಿಸಿ ಹರಕೆ ಹೇಳಿದವರ ಇಷ್ಟಾರ್ಥಗಳನ್ನು ಈಡೇರಿಸುತ್ತಿರುವಂತಹ ಮಂಗಳೂರು ಮಾರ್ನಮಿಕಟ್ಟೆಯ ತಾಯಿ...

ಮುಂದಿನ ವರ್ಷ ಅ.1ರಿಂದ ಕಾರ್‌ನಲ್ಲಿ 6 ಏರ್‌ಬ್ಯಾಗ್ಸ್‌ ಕಡ್ಡಾಯ..!

ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ದೃಷ್ಠಿಕೋನದಲ್ಲಿ ಇನ್ನು ಮುಂದಿನ ವರ್ಷದಿಂದ ಕಾರಿನಲ್ಲಿ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಈ ನಿಯಮ ಅಧಿಕೃತವಾಗಿ 2023ರ ಅ.1 ರಿಂದ ಜಾರಿಗೆ ಬರಲಿದೆ.ಈ ಬಗ್ಗೆ...