Connect with us

    ಲಯನ್ಸ್‌ ಸದಸ್ಯರಿಂದ ಸಾಣೂರಿನಲ್ಲಿ ವನಮಹೋತ್ಸವ..!

    Published

    on

    ಲಯನ್ಸ್‌ ಸದಸ್ಯರಿಂದ ಸಾಣೂರಿನಲ್ಲಿ ವನಮಹೋತ್ಸವ..!

    ಮಂಗಳೂರು : ಸಾಣೂರಿನ ಕೈಗಾರಿಕಾ ಸಂಸ್ಥೆ ಸುರೇಂದ್ರ ಕಾಮತ್‌ ಅವರ ಮಾಲಕತ್ವದ ಸಂಸ್ಥೆಗಳ ಪರಿಸರದಲ್ಲಿ ಲಯನ್ಸ್ ಕ್ಲಬ್‌ನ ಮಂಗಳೂರಿನ ಸದಸ್ಯರು ವನಮಹೋತ್ಸವ ನಡೆಸಿದರು.

    ಈ ಸಂದರ್ಭ ಸಾಗುವಾಣಿ, ಹಲಸಿನ ಗಿಡಗಳನ್ನು ಇಲ್ಲಿ ನೆಟ್ಟು ಪೋಷಿಸಲಾಯಿತು.

    ಕ್ಯಾಶ್ಯೂ ಇಂಡಸ್ಟ್ರೀಸ್‌ ಮಾಲಕ ಸುರೇಂದ್ರ ಕಾಮತ್‌ ಅವರು ಗೀರ್‌ ತಳಿಯ 8 ಗೋವುಗಳನ್ನು ಸಾಕುತ್ತಿದ್ದಾರೆ. ಪ್ರತೀ ಗೋವು ತಲಾ 7 ಲೀಟರ್‌ ಹಾಲು ಕೊಡುತ್ತಿದೆ.

    ಅವರ ಹೈನುಗಾರಿಕೆ ಮಾದರಿ ಎಲ್ಲರಿಗೂ ಮಾದರಿ ಆಗಿದೆ. ಈ ವೇಳೆ ಸಂಸ್ಥೆ ಸೇವಾ ಚಟುವಟಿಕೆಗಳ ಬಗ್ಗೆ ಲಯನ್ಸ್‌ ಸದಸ್ಯರಿಗೆ ಪ್ರತ್ಯಕ್ಷವಾಗಿ ಕಾಣುವ ಸುಯೋಗ ಲಭಿಸಿತು.

    ಲಯನ್ಸ್‌ ಕ್ಲಬ್‌ ನ ಸೇವಾ ಕಾರ್ಯಕ್ರಮಕ್ಕೆ ಸಂಬಂಧಿಸಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಸಂದರ್ಭ ಉಪಸ್ಥಿತರಿದ್ದ ಸುರೇಂದ್ರ ಕಾಮತ್‌ ಲಯನ್ಸ್ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಗಿಡಗಳನ್ನು ನೆಡಲು ಲಯನ್‌ ಜಯರಾಜ್‌ ಪ್ರಕಾಶ್‌ ನೆರವು ನೀಡಿದರು.

    ಅಧ್ಯಕ್ಷ ಲಯನ್‌ ಕೃಷ್ಣಾನಂದ ಪೈ ಸ್ವಾಗತಿಸಿ, ಲಯನ್ಸ್‌ ಕ್ಲಬ್‌ನ ಸಮಾಜ ಸೇವಾ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಲಯನ್ಸ್‌ ಕ್ಲಬ್‌ ಮಂಗಳೂರಿನ ಪ್ರಥಮ ಮಹಿಳೆ ಕವಿತಾ ಪೈ, ಗುರುಪ್ರೀತ್‌ ಆಳ್ವ, ಶೀನ ಪುಜಾರಿ, ಪ್ರಶಾಂತ್‌ ಭಟ್‌ ಕಡಬ, ವೆಂಕಟೇಶ್ ಬಾಳಿಗ, ವಿದ್ಯಾ ಬಾಳಿಗ, ರಾಜೇಶ್‌ ವಿಕ್ಟರ್‌ ಹೆರಿ, ದಿನಕರ ಕೋಟ್ಯಾನ್‌, ರವಿಪ್ರಸಾದ ಪೈ, ಜಯರಾಜ್‌ ಪ್ರಕಾಶ್‌, ರೋನಾಲ್ಡ್‌ ಮಸ್ಕರೇನ್ಹಸ್‌, ಪತ್ರಕರ್ತ ನಂದಗೋಪಾಲ್‌ ಮೊದಲಾದವರಿದ್ದರು.

     

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕನ್ನಡದಲ್ಲಿ ಔಷಧ ಚೀಟಿ ಬರೆದು ಮಗನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!

    Published

    on

    ಮಂಜೇಶ್ವರ/ಮಂಗಳೂರು: ಈ ಹಿಂದೆ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿಯನ್ನು ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಕರ್ನಾಟಕದಲ್ಲಿ ವೈದ್ಯರು ಕನ್ನಡದಲ್ಲೇ  ಔಷಧ ಚೀಟಿಯನ್ನು ಬರೆಯುವಂತೆ ಕನ್ನಡ ಪ್ರಾಧಿಕಾರ ಸೂಚನೆ ಕೂಡಾ ನೀಡಿತ್ತು. ಆದರೆ ಕರ್ನಾಟಕದಲ್ಲಿ ಈ ಸೂಚನೆ ಕಟ್ಟುನಿಟ್ಟಾಗಿ ಜಾರಿಯಾಗುವ ಮೊದಲೇ ಕೇರಳದ ಕಾಸರಗೋಡಿನಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿ ಬರೆದು ಎಲ್ಲರ ಗಮನ ಸೆಳೆದಿದ್ದಾರೆ.

    ಹೌದು, ಕಾಸರಗೋಡಿನ ಮಂಜೇಶ್ವರದಲ್ಲಿರುವ ಸುರಕ್ಷಾ ದಂತ ಚಿಕಿತ್ಸಾಲಯದ ಡಾ.ಮುರಳೀ ಮೋಹನ ಚೂಂತೂರು ರವರು ಕನ್ನಡ ಪ್ರೇಮ ಮೆರೆದಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿನೆಲೆ ಅವರು ಇತ್ತೀಚೆಗೆ ಮಂಗಳೂರು ಭೇಟಿ ನೀಡಿದ ವೇಳೆ ವೈದ್ಯರು ಕೂಡಾ ಕನ್ನಡದಲ್ಲಿ ಔಷಧ ಚೀಟಿಯನ್ನು ಜನರಿಗೆ ಅರ್ಥವಾಗುವಂತೆ ಬರೆಯಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.

    ಹಾಗಾಗಿ ರಾಜ್ಯದಲ್ಲಿ ಒಬ್ಬ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ಮೊದಲ ಸ್ಪಂದನ ನೀಡಿದ್ದರು. ಇದೀಗ ಕೇರಳ ರಾಜ್ಯದಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ  ಔಷಧ ಚೀಟಿ ಬರೆಯುವ ಮೂಲಕ ತನ್ನ ಕನ್ನಡ ಪ್ರೇಮವನ್ನು ತೋರಿಸಿದ್ದಾರೆ.

    ಸರ್ಕಾರಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸುವಂತೆ ಸಚಿವರಿಗೆ ಪ್ರಾಧಿಕಾರ ಪತ್ರ

    ಅದಾದ ಬಳಿಕ ಆರೋಗ್ಯ ಸಚಿವರು ಪತ್ರಿಕಾ ಹೇಳಿಕೆ ಹೊರಡಿಸಿ, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿ ಬಳಿಕ ಸಾಧಕ ಬಾಧಕ ನೋಡಿಕೊಂಡು ಅನುಷ್ಠಾನಕ್ಕೆ ತರವಲಾಗುವುದು ಎಂದಿದ್ದರು. ಈಗ ಗಡಿನಾಡಿನ ಕನ್ನಡಿಗ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲಿ ಬರೆಯುವ ಮೂಲಕ ಇತರರಿಗೆ ಮಾರ್ಗದರ್ಶಿಯಾಗಿರುವುದನ್ನು ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

    Continue Reading

    LATEST NEWS

    ಲೋ ಬಿಪಿಯಿಂದ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾ*ವು

    Published

    on

    ಬೆಂಗಳೂರು : ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾ*ವನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ  ಗಬ್ಯೂರು ಗ್ರಾಮದಲ್ಲಿ  ನಡೆದಿದೆ.

    5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃ*ತ ಬಾಲಕ. ಗಬ್ಯೂರ್‌ನಲ್ಲಿ ಸೈನಿಕ, ನವೋದಯ ಕೋಚಿಂಗ್ ಪಡೆಯುತ್ತಿದ್ದ. ಇನ್ನು ಕೋಚಿಂಗ್ ಸೆಂಟರ್‌ನಲ್ಲೇ ಏಕಾಏಕಿ ಲೋ ಬಿಪಿಯಾಗಿ ಬಾಲಕ ಶಿವಪ್ರಸಾದ್ ಸಾವನಪ್ಪಿದ್ದು, ಗಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ಇಂದು ದೆಹಲಿ ನೂತನ ಸಿಎಂ ಆಗಿ ಆತಿಶಿ ಪ್ರಮಾಣವಚನ ಸ್ವೀಕಾರ

    Published

    on

    ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ ನಾಯಕ ಮುಖೇಶ್ ಅಹ್ಲಾವತ್ ಅವರು ದಿಲ್ಲಿ ಕ್ಯಾಬಿನೆಟ್ಗೆ ಹೊಸದಾಗಿ ಪ್ರವೇಶಿಸುತ್ತಿದ್ದಾರೆ. ಸುಲ್ತಾನ್ಪುರ ಮಜ್ರಾದಿಂದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

    ನಿರ್ಗಮಿತ ಕೇಜ್ರಿವಾಲ್ ಸರ್ಕಾರದಲ್ಲಿ ಅತಿಶಿ ಅವರು ಹಣಕಾಸು, ಕಂದಾ ಯ, ಲೋಕೋಪಯೋಗಿ, ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ 13 ಪ್ರಮುಖ ಖಾತೆಗಳನ್ನು ಹೊಂದಿದ್ದರು.ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅರವಿಂದ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಹೊರಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು . ಅದಾದ ಬಳಿಕ ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆತಿಶಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.

    Continue Reading

    LATEST NEWS

    Trending