LATEST NEWS
‘ನಮೋ ಭಾರತ್ ರಾಪಿಡ್ ರೈಲ್’ ಆಗಿ ಬದಲಾದ ‘ವಂದೇ ಮೆಟ್ರೋ’..!
ಗುಜರಾತ್ : ‘ವಂದೇ ಮೆಟ್ರೋ’ ರೈಲಿಗೆ ‘ನಮೋ ಭಾರತ್ ರಾಪಿಡ್ ರೈಲ್’ ಎಂದು ಮರುನಾಮಕರಣ ಮಾಡಲಾಗಿದೆ. ಇಂದು ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ನಮೋ ಭಾರತ್ ರಾಪಿಡ್ ರೈಲ್’ಗೆ ಚಾಲನೆ ನೀಡಿದ್ದಾರೆ.
ಮೊದಲ ‘ನಮೋ ಭಾರತ್ ರಾಪಿಡ್ ರೈಲ್’ ಭುಜ್ ನಿಂದ ಪ್ರಯಾಣ ಆರಂಭಿಸಿ 359 ಕಿಲೋ ಮೀಟರ್ ದೂರದ ಅಹಮದಾಬಾದ್ ತಲುಪಲಿದೆ.ಕೇವಲ 5 ಗಂಟೆ 45 ನಿಮಿಷದಲ್ಲಿ ಈ ರೈಲು 359 ಕಿಲೋ ಮೀಟರ್ ಕ್ರಮಿಸಲಿದೆ. ಇಂದು ಉದ್ಘಾಟನಾ ರೈಲು ಸಂಚರಿಲಿದ್ದು ಸೆಪ್ಟಂಬರ್ 17 ರಿಂದ ಪ್ರಯಾಣಿಕರಿಗೆ ನಿಯಮಿತ ಸೇವೆ ಆರಂಭವಾಗಲಿದೆ. ಈ ಎರಡು ನಗರಗಳ ನಡುವಿನ ಪ್ರಯಾಣದ ಟಿಕೇಟ್ ದರವು ರೂ.455.00 ಆಗಿದೆ.
ರೈಲು ಗರಿಷ್ಠ 110 kmph ವೇಗದಲ್ಲಿ ಚಲಿಸುತ್ತದೆ ಮತ್ತು ಹಲವಾರು ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ. ಅಂಜರ್, ಗಾಂಧಿಧಾಮ್, ಭಚೌ, ಸಮಖಿಯಾಲಿ, ಹಲ್ವಾಡ್, ಧ್ರಂಗಾಧ್ರ, ವಿರಾಮ್ಗಮ್, ಚಂದ್ಲೋಡಿಯಾ, ಸಬರಮತಿ ಮತ್ತು ಕಲುಪುರ್ (ಅಹಮದಾಬಾದ್ ನಿಲ್ದಾಣ) ಇಲ್ಲಿ ರೈಲು ನಿಲುಗಡೆ ನೀಡಲಾಗಿದೆ.
ಮೆಟ್ರೋ ಪ್ರಯಾಣದ ಪರಿಕಲ್ಪನೆಯಲ್ಲಿ ‘ನಮೋ ಭಾರತ್ ರಾಪಿಡ್ ರೈಲ್’
ಭಾರತೀಯ ರೈಲ್ವೇಯು ಮೆಟ್ರೋ ಮಾದರಿಯಲ್ಲಿ ಈ ರೈಲು ಸಂಚಾರವನ್ನು ಆರಂಭಿಸಿದೆ. ಮೆಟ್ರೋ ನಗರದ ಒಳಗೆ ಸಂಚರಿಸಿದ್ರೆ ಇದು ನಗರದಿಂದ ನಗರಕ್ಕೆ ಸಂಚರಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಿದೆ. ಮೆಟ್ರೋಕ್ಕಿಂತ ಹೆಚ್ಚಿನ ಪ್ರಯಾಣಿಕರಿಗೆ ಪ್ರಯಾಣದ ಅವಕಾಶ ಇದ್ದು, 1150 ಜನರಿಗೆ ಆಸನದ ವ್ಯವಸ್ಥೆ ಹಾಗೂ 2058 ಜನರಿಗೆ ನಿಂತುಕೊಂಡು ಪ್ರಯಾಣಿಸಲು ಅನುಕೂಲವಾಗಿದೆ. ಸೋಫಾ ಮಾದರಿಯ ಆಸನದ ವ್ಯವಸ್ಥೆ ಇದ್ದು ರೈಲು ಸಂಪೂರ್ಣ ಹವಾನಿಯಂತ್ರಿತವಾಗಿದೆ.
ಈ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಹೋಲುತ್ತಿದ್ದು, ಇದು ಮೆಟ್ರೋ ರೈಲಿನಂತೆ ಸ್ಲೈಡಿಂಗ್ ಬಾಗಿಲು ಮತ್ತು ಎರಡು ತುದಿಯಲ್ಲಿ ಇಂಜೀನ್ ಹೊಂದಿದೆ. ರೈಲು ಹೊರಡುವ ಮೊದಲು ಟಿಕೇಟ್ ಖರೀದಿಸಲು ಪ್ರಯಾಣಿಕರಿಗೆ ಅವಕಾಶ ಇರುವ ಕಾರಣ ಬುಕ್ಕಿಂಗ್ ಚಿಂತೆ ಕೂಡಾ ಇಲ್ಲ ಎಂದು ರೈಲ್ವೇ ಇಲಾಖೆ ತಿಳಿಸಿದೆ.
BELTHANGADY
ಗಾಂಜಾ ಸಾಗಾಟ ಪ್ರಕರಣ: ಓರ್ವ ಆರೋಪಿ ಸೆರೆ
ಮಂಗಳೂರು ನಗರಕ್ಕೆ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗುರುವಾರ ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು, ಈ ಸಂಬಂಧ ಓರ್ವನನ್ನು ಬಂಧಿಸಿ ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಸಹಿತ ಒಟ್ಟು 1,75,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿಯ ಕುಕ್ಕೇಡಿಯ ಗೋಳಿಯಂಗಡಿ ನಿವಾಸಿ ಅಬುತಾಹಿರ್ ಯಾನೆ ಅನ್ವರ್ (25) ಬಂಧಿತ ಆರೋಪಿ. ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್‌ನಲ್ಲಿ ಈ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ನರೇಂದ್ರ, ಎಎಸ್‌ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
DAKSHINA KANNADA
ಫ್ರಾಡ್ ಕಾಲ್; ಬ್ಯಾಂಕ್ ಖಾತೆಯಿಂದ 76 ಸಾವಿರ ವಂಚನೆ
ಕಾರ್ಕಳ: ಬ್ಯಾಂಕ್ ಅಕೌಂಟ್‌ನಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವುದಾಗಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಾಳದಲ್ಲಿ ನಡೆದಿದೆ.
ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30 ರಂದು ಮನೋಜ್ ಶರ್ಮಾ ಕರೆ ಮಾಡಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುತ್ತೇವೆ ಎಂದು ಹೇಳಿ ಎಲ್ಲಾ ಮಾಹಿತಿಗಳನ್ನು ತೆಗೆದುಕೊಂಡು, ಕೊನೆಯದ್ದಾಗಿ ಒಟಿಪಿ ಪಡೆದುಕೊಂಡನು.
ಅ.1 ರಂದು ಸಂಜೆ 4 ರಿಂದ 6 ರ ಅವಧಿಯಲ್ಲಿ ಎರಡೂ ಬ್ಯಾಂಕ್‌ನ ಕ್ರೆಡೀಟ್ ಕಾರ್ಡ್ ಮೂಲಕ 76,118 ರೂ. ಕಡಿತವಾಗಿತ್ತು. ಈ ಬಗ್ಗೆ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ.
LATEST NEWS
SHOCKING NEWS : ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಹಾವಳಿ ಹೆಚ್ಚಾಗುತ್ತಿದ್ದು, ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಗುರುವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ನಾಲ್ವರನ್ನು ಬಂಧಿಸಿಲಾಗಿತ್ತು. ಇದೀಗ ಪೀಣ್ಯದಲ್ಲಿ ಗಂಡ, ಹೆಂಡತಿ ಮತ್ತು ಅವರ ಮಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕೂಡಾ ಜಿಗಣಿಯಲ್ಲಿದ್ದಂತೆ ನಕಲಿ ಗುರುತಿನ ಚೀಟಿ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.
ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
- DAKSHINA KANNADA7 days ago
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
- BIG BOSS4 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS4 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್
- BIG BOSS4 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!