Wednesday, October 20, 2021

ರೈತರ ಬಗ್ಗೆ ವಾಜಪೇಯಿ ವೀಡಿಯೋ ಹರಿಬಿಟ್ಟು ಬಿಜೆಪಿಗೆ ಠಕ್ಕರ್‌ ಕೊಟ್ಟ ಸಂಸದ ವರುಣ್‌ ಗಾಂಧಿ

ನವದೆಹಲಿ: ಕಳೆದ ವಾರವಷ್ಟೇ ಭಾರತೀಯ ಜನತಾ ಪಕ್ಷದ ಫೈರ್ ಬ್ರ್ಯಾಂಡ್ ಎಂದು ಕರೆಸಿಕೊಳ್ಳುತ್ತಿದ್ದ ವರುಣ್ ಗಾಂಧಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ವರುಣ್ ಗಾಂಧಿ ಮತ್ತು ಅವರ ತಾಯಿ ಮನೇಕಾ ಗಾಂಧಿಯವರನ್ನು ಕೈಬಿಡಲಾಗಿದೆ.

ಇದರ ಬೆನ್ನಲ್ಲೇ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವರುಣ್ ಗಾಂಧಿ ತಿರುಗುಬಾಣ ಬಿಟ್ಟಿದ್ದಾರೆ.
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿರುವ ವರುಣ್ ಗಾಂಧಿ,

ರೈತರ ಕಣ್ಣು ಕೆಂಪಾಗಿಸಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಆ ಮೂಲಕ ರೈತರ ವಿಷಯದಲ್ಲಿ ತಮ್ಮ ನಿಲುವು ಬದಲಿಸುವ ಪ್ರಶ್ನೆಯೇ ಇಲ್ಲ ಎಂಬ ಸಂದೇಶವನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಪಕ್ಷದ ಶ್ರೇಷ್ಠ ನಾಯಕ ಮತ್ತು ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ತಮ್ಮ ಹೋರಾಟದ ದಿನಗಳಲ್ಲಿ ರೈತರ ಬಗ್ಗೆ ಮಾತನಾಡಿರುವ ವಿಡಿಯೋ ತುಣುಕುವೊಂದನ್ನು ಟ್ವೀಟ್ ಮಾಡಿದ್ದಾರೆ.

ಟ್ವೀಟ್ ಮೇಲ್ಭಾಗದಲ್ಲಿ “ವಿಶಾಲ ಹೃದಯದ ನಾಯಕನ ಬುದ್ಧಿವಂತ ಮಾತುಗಳು…” ಎಂದು ಬರೆದುಕೊಂಡಿದ್ದಾರೆ.

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...