Thursday, August 11, 2022

ಮಂಗಳೂರಿನಲ್ಲಿ ಎನ್‍ಐಎ ಕಚೇರಿ ತೆರೆಯುವಂತೆ ಗೃಹಸಚಿವ, ಸಿಎಂಗೆ ಶಾಸಕ ಕಾಮತ್‌ ಮನವಿ

ಮಂಗಳೂರು: ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸಮುದ್ರ ತಟದಲ್ಲಿ ರಕ್ಷಣೆ ಭದ್ರಪಡಿಸಲು ವಿಶೇಷ ನೀತಿ ರಚಿಸಬೇಕಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಎನ್‍ಐಎ ತನಿಖಾ ಸಂಸ್ಥೆಯ ಕಚೇರಿ ತೆರೆಯಬೇಕು ಎಂದು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.


ಭಯೋತ್ಪಾದನೆ ಚಟುವಟಿಕಯು ಕರಾವಳಿ ಜಿಲ್ಲೆಗಳಲ್ಲಿ ನೆಲೆಕಾಣಲು ಪ್ರಯತ್ನಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಉಗ್ರ ಚಟುವಟಿಕೆಗಳ ನಂಟು ಹೊಂದಿರುವ ಪ್ರಕರಣಗಳು ಕರಾವಳಿಯಲ್ಲಿ ವರದಿಯಾಗಿದೆ. ಇದೊಂದು ಆತಂಕಕಾರಿ ಫಟನೆಯಾಗಿದ್ದು, ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಕರಾವಳಿ ಪ್ರದೇಶದಲ್ಲಿ ಭಯೋತ್ಪಾದನ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ಕಚೇರಿ (ಎನ್‌ಐಎ) ತೆರೆಯಬೇಕು ಎಂದು ಅವರು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಸಲ್ಲಿಸಿ, ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ರಾಜ್ಯ ಗೃಹ ಸಚಿವರು ಶೀಘ್ರವೇ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪರಿಶೀಲನೆ ಬಳಿಕ ನಾವೆಲ್ಲರೂ ಸೇರಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಎನ್ಐಎ ಕಚೇರಿ ಸ್ಥಾಪನೆ ದಿಕ್ಕಿನಲ್ಲಿ ಈಗಾಗಲೇ ಕೆಲವು ಹೆಜ್ಜೆಗಳನ್ನು ಇರಿಸಿದ್ದೇವೆ. ಆದರೆ, ಇದನ್ನು ಬಹಿರಂಗಪಡಿಸಲಾಗುವುದಿಲ್ಲ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಈ ವೇಳೆ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 3 ಯೋಧರು ಹುತಾತ್ಮ -ಇಬ್ಬರು ಉಗ್ರರು ಉಡೀಸ್

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ...

“ಬೆಳ್ತಂಗಡಿಯಲ್ಲಿ ಪೂಂಜಾ ಬಂದ್ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ”

ಬೆಳ್ತಂಗಡಿ: 'ನಮ್ಮ ತಾಲೂಕಿನಲ್ಲಿ ಹರೀಶ್ ಪೂಂಜಾನ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ ಪೂಂಜಾ ಬಂದ ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ. ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವೇಳೆ...

ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ರಕ್ಷಾಬಂಧನ

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ಇಂದು ರಕ್ಷಾಬಂಧನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ವಿಶ್ವಸ್ಥರಾದ ಸುಧಾಕರ ರಾವ್ ಪೇಜಾವರರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು...