Connect with us

LATEST NEWS

ಸೋಲಿನ ಹತಾಶೆಯಿಂದ ಕಾಂಗ್ರೇಸ್ ಮುಖಂಡರ ಆರೋಪ – ಶಾಸಕ ಕಾಮತ್

Published

on

ಮಂಗಳೂರು ನವೆಂಬರ್ 11:  ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡದೆ ರಸ್ತೆ ಸಂಚಾರ ಬದಲಿಸಿರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಕರೆದು ಮಾಹಿತಿ ಪಡೆದುಕೊಂಡಿದ್ದೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ರಸ್ತೆ ಬದಲಿಸಿದ ಕಾರಣ ಉಂಟಾದ ಟ್ರಾಫಿಕ್ ಸಮಸ್ಯೆಯ ಕುರಿತು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಜೊತೆ ಸಭೆ ನಡೆಸಿ ಒಂದು ದಿನದಲ್ಲಿ ಸಮಸ್ಯೆ ಪರಿಹರಿಸುವ ಕಾರ್ಯದಲ್ಲಿ ಅಲ್ಪ ಮಟ್ಟಿಗೆ ಯಶಸ್ಸು ದೊರೆತಿದೆ. ಅಧಿಕಾರಿಗಳು ಪ್ರಮುಖ ರಸ್ತೆಯಲ್ಲಿ ಕಾಮಗಾರಿ ಪ್ರಾರಂಭಿಸುವ ಮುನ್ನ ಸಾರ್ವಜನಿಕರಿಗೆ ಮಾಹಿತಿ ನೀಡದಿರುವ‌ ಕಾರಣ ಸಹಜವಾಗಿ ಗೊಂದಲ ಉಂಟಾಗಿತ್ತು. ಹಾಗಾಗಿ ಸೋಮವಾರವೇ ತುರ್ತು ಸಭೆ ನಡೆಸಿ ಸಾರ್ವಜನಿಕರು ಹಾಗೂ ಅಧಿಕಾರಿಗಳ ಅಭಿಪ್ರಾಯ ಪಡೆದುಕೊಂಡು ಬದಲಿಯ ವ್ಯವಸ್ಥೆಯ ಆದೇಶ ನೀಡಿದ್ದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಸೋಮವಾರ ರಾತ್ರಿಯ ವೇಳೆಗೆ ಬದಲಿ ವ್ಯವಸ್ಥೆಯನ್ನು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿ, ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿದ್ದೇನೆ. ಹಾಗೂ ತ್ವರಿತವಾಗಿ ಬಿಟ್ಟುಕೊಡಬಹುದಾದ ಕಡೆಗಳಲ್ಲಿ ರಾತ್ರಿಯ ವೇಳೆ ಕಾಮಗಾರಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆ ಕಾರಣಗಳಿಂದ ಒಂದೇ ದಿನದಲ್ಲಿ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಸಹಾಯಕವಾಗಿದೆ ಎಂದರು.

ಜೆ.ಆರ್ ಲೋಬೋ- ಮಿಥುನ್ ರೈಗೆ ಶಾಸಕ ಕಾಮತ್ ತಿರುಗೇಟು

ವೇದವ್ಯಾಸ್ ಕಾಮತ್ ಅವರಿಗೆ ಅನುಭವದ ಕೊರತೆಯಿದೆ ಎಂದಿದ್ದ ಮಾಜಿ ಶಾಸಕ ಜೆ.ಆರ್ ಲೋಬೋ ಹಾಗೂ ಮಿಥುನ್ ರೈ ಅವರ ಹೇಳಿಕೆಗೆ ಪ್ರತಿಕ್ರಯಿಸಿರುವ ಶಾಸಕ ಕಾಮತ್,ಸರಕಾರಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಅನುಭವವಿದ್ದ ಜೆ.ಆರ್ ಲೋಬೋ ಅವರು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಎಡಿಬಿ – 1 ಮುಖ್ಯಸ್ಥರಾಗಿದ್ದ ಯೋಜನೆ ಯಾಕೆ ವಿಫಲವಾಗಿತ್ತು ?
ಮಂಗಳೂರಿನ ಶಕ್ತಿನಗರದಲ್ಲಿ ವಸತಿ ಯೋಜನೆಯ 930ವಸತಿ ನಿರ್ಮಾಣಕ್ಕೆ ಆಯ್ಕೆ ಮಾಡಿದ ಜಮೀನು ಅರಣ್ಯ ಪ್ರದೇಶವಾಗಿದ್ದರೂ ಕೂಡ ಅವೆಲ್ಲವನ್ನೂ ಗಣನೆಗೆ ತೆದುಕೊಳ್ಳದೆ ತುರ್ತಾಗಿ ಹಕ್ಕುಪತ್ರ ವಿತರಿಸಿ, ಗುದ್ದಲಿಪೂಜೆ ನೆರವೇರಿಸಿದಾಗ ಜೆ.ಆರ್ ಲೋಬೊ ಅವರಿಗೆ ಅನುಭವದ ಕೊರತೆಯಿತ್ತೆ. ಕಂಕನಾಡಿ ಹಾಗೂ ಕದ್ರಿ ಮಾರುಕಟ್ಟೆ ನಿರ್ಮಾಣ ಯೋಜನೆಗೆ ಬ್ಯಾಂಕ್ ಸಾಲದ ಕುರಿತು ಯಾವುದೇ ರೀತಿಯ ಪ್ರಕ್ರಿಯೆ ಪೂರ್ಣಗೊಳಿಸದೆ ಗುದ್ದಲಿಪೂಜೆ ನೆರವೇರಿಸಿದಾಗ ಅವರಿಗೆ ಅನುಭವದ ಕೊರತೆ ಇತ್ತೇ ಎಂದು ಪ್ರಶ್ನಿಸಿದ್ದಾರೆ.

ದೇಶದೆಲ್ಲೆಡೆ ಕಾಂಗ್ರೇಸ್ ಹೀನಾಯವಾಗಿ ಸೋಲುತ್ತಿದೆ. ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿಯೂ ಭಾರತೀಯ ಜನತಾ ಪಾರ್ಟಿ ಜಯ ಗಳಿಸಿದೆ. ಇದು ಜನರಿಗೆ ನಮ್ಮ ಪಕ್ಷದ ಮೇಲಿನ ನಂಬಿಕೆಯಾಗಿದೆ. ಇವೆಲ್ಲಾ ಕಾರಣಗಳಿಂದ ಹತಾಶರಾಗಿರುವ ಕಾಂಗ್ರೇಸ್ ಮುಖಂಡರು ಮಿಥ್ಯಾರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

DAKSHINA KANNADA

ಚೈತ್ರಾ ಹೆಬ್ಬಾರ್ ನಾಪತ್ತೆ ಹಿಂದೆ ಅನ್ಯಕೋಮಿನ ಯುವಕನ ಕೈವಾಡ ಶಂಕೆ- ಆರೋಪಿಯ ಬಂಧಿಸಲು ಹಿಂದೂ‌ ಸಂಘಟನೆ ಒತ್ತಾಯ

Published

on

ಪುತ್ತೂರು: ಮಾಡೂರು ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ, ಲವ್ ಜಿಹಾದ್ ಶಂಕೆಯನ್ನು ವ್ಯಕ್ತಪಡಿಸಿದ ಹಿಂದೂ‌ ಸಂಘಟನೆ ಮುಖಂಡರು, ಇದೀಗ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಆಕೆ ನಾಪತ್ತೆ ಪ್ರಕರಣದ ಹಿಂದೆ ಇದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಪುತ್ತೂರಿನ ಕೂರ್ನಡ್ಕದಲ್ಲಿ ವಾಸವಿದ್ದ ಶಾರೂಕ್ ಶೇಖ್ ಮೂಲತಃ ಬಂಟ್ವಾಳದ ನೇರಳಕಟ್ಟೆಯ ನಿವಾಸಿಯಾಗಿದ್ದಾನೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಶಂಕಿತ ಬರುತ್ತಿದ್ದ. ಚೈತ್ರಾ ಪೋಷಕರಿಗೆ ಮಾಡೂರು ಬಜರಂಗದಳ ಮುಖಂಡರು ಮಾಹಿತಿಯನ್ನೂ ನೀಡಿದ್ದರು. ಇದೀಗ ಮಾಹಿತಿ ನೀಡಿದ ಬಳಿಕ ನಾಪತ್ತೆಯಾದ ಚೈತ್ರಾ ಹೆಬ್ಬಾರ್‌ ಹಿಂದೆ ಈ ಆರೋಪಿ ಇರುವುದು ದೃಢಪಡುತ್ತಿರುವುದರಿಂದ ಎರಡು ದಿನದಲ್ಲಿ ಚೈತ್ರಾಳನ್ನು ಪೊಲೀಸರು ಕರೆ ತರಬೇಕು. ಇಲ್ಲದೇ ಇದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರಾಂತ ಸಂಚಾಲಕ ಮುರಳಿ ಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.

Continue Reading

DAKSHINA KANNADA

Ullala: ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಸ್ಕೂಟರ್ ಪತ್ತೆ..!

Published

on

ಮಂಗಳೂರು: ಉಳ್ಳಾಲದ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ.

ಮಾಡೂರಿನ ಪಿಜಿ ಯಿಂದ ಫೆ.17 ರಂದು ಮುಂಜಾನೆ 9 ಗಂಟೆಗೆ ಚೈತ್ರಾ ಇದೇ ಸ್ಕೂಟರ್‌ನಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದ ಚೈತ್ರಾ ಸುಳಿವು ಸಿಗದೆ ಹಿನ್ನೆಲಯಲ್ಲಿ ಚೈತ್ರಾ ದೊಡ್ಡಪ್ಪ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಹಿಂದೂ ಸಂಘಟನೆಗಳೂ ಇದೊಂದು ಲವ್‌ ಜಿಹಾದ್ ಪ್ರಕರಣವೆಂದು ಆರೋಪಿಸಿ ಹೋರಾಟದ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ತನಿಕೆ ಚುರುಕುಗೊಳಿಸಿ ಪೊಲೀಸರಿಗೆ ಇದೀಗ ಚೈತ್ರಾಳ ಸ್ಕೂಟರ್ ಪತ್ತೆಯಾಗಿದೆ. ಚೈತ್ರ ಪಿಜಿಯಿಂದ ಹೊರಟ ಬಳಿಕ ಪಂಪ್‌ವೆಲ್ ಬಳಿ ಮೊಬೈಲ್ ಆಫ್ ಮಾಡಿಕೊಂಡಿದ್ದು ಬಳಿಕ ಸುರತ್ಕಲ್‌ಗೆ ಬಂದು ಅಲ್ಲಿ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದರು, ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡಿಸಿರುವ ಪೊಲೀಸರು ಶಂಕಿತ ಯುವಕನ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ಆದರೆ ಆತನ ಮೊಬೈಲ್ ಕೂಡಾ ಸ್ವಿಚ್‌ ಆಫ್ ಆಗಿರುವ ಕಾರಣ ಚೈತ್ರಾ ಆತನ ಜೊತೆಯಲ್ಲಿ ಹೋಗಿರುವ ಬಲವಾದ ಅನುಮಾನ ಮೂಡಿದೆ. ಕೇರಳ ಅಥವಾ ಬೆಂಗಳೂರಿಗೆ ಹೋಗಿರುವ ಸಾದ್ಯತೆ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Continue Reading

LATEST NEWS

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಘಾತಕ್ಕೆ ಬಲಿ..!

Published

on

ಯಾದಗಿರಿ: ಸುರಪುರ ಕಾಂಗ್ರೆಸ್ ಶಾಸಕರ ರಾಜಾ ವೆಂಕಟಪ್ಪ ನಾಯಕ ಅವರು ಫೆ.25 ರಂದು ಹೃದಯಘಾತದಿಂದ ನಿಧನ ಹೊಂದಿದರು.


ರಾಜಾ ವೆಂಕಟಪ್ಪ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಘಾತಕ್ಕೆ ಬಲಿಯಾದ ರಾಜಾ ವೆಂಕಟಪ್ಪ ಅವರ ಸಾವು ಕಾಂಗ್ರೆಸ್ ಗರಿಗೆ ಶಾಕ್ ನೀಡಿದಂತಾಗಿದೆ. ಇವರ ಸಾವಿಗೆ ಹಲವು ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ.

Continue Reading

LATEST NEWS

Trending