Connect with us

    DAKSHINA KANNADA

    ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನದ ಜೀರ್ಣೋದ್ಧಾರದ ಶಿಲಾನ್ಯಾಸ

    Published

    on

    ಮಂಗಳೂರು : ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಶಿಲಾನ್ಯಾಸವು ಜನವರಿ 27ರಂದು ನೆರವೇರಿತು.

    ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಶ್ರೀಧಾಮ ಮಾಣಿಲದ ಪರಮಾಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಈ ಪುಣ್ಯ ಕಾರ್ಯವನ್ನು ನೆರವೇರಿಸಿದರು.

    ಶಿಲಾನ್ಯಾಸದ ಧಾರ್ಮಿಕ ವಿಧಿ ವಿಧಾನಗಳು ಕ್ಷೇತ್ರದ ತಂತ್ರಿ ಆನಂದ ಉಪಾಧ್ಯಯಾರವರ ನೇತೃತ್ವದಲ್ಲಿ ನಡೆಯಿತು. ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿಗೆ ಕಾರಣಿಭೂತರಾದರು.

    ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, “ಊರಿನ ಅಭಿವೃದ್ಧಿಗೆ ಕ್ಷೇತ್ರವು ಮಹತ್ತರ ಆಗಿದೆ. ಕ್ಷೇತ್ರಗಳು ಜೀರ್ಣೋದ್ಧಾರಗೊಂಡಾಗ ಸಮಾಜ ಅಭಿವೃದ್ಧಿ ಆಗುತ್ತದೆ.

    ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನ ದಕ್ಷಿಣ ಭಾರತದಲ್ಲೇ ಪ್ರಸಿದ್ಧ ಹೊಂದಿದೆ.

    ಇದರ ಬ್ರಹ್ಮಕಲಶ ನಿರ್ವಿಘ್ನವಾಗಿ ನಡೆಯಲಿ, ಕ್ಷೇತ್ರದ ಜೀರ್ಣೋದ್ಧಾರದೊಂದಿಗೆ ಸಮಾಜದ ಅಭಿವೃದ್ಧಿಯಾಗಲಿ” ಎಂದು ಹೇಳಿದರು.

    ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿ “ಜೀರ್ಣೋದ್ಧಾರದ ಕಾರ್ಯವು ಸರ್ವ ಭಕ್ತರ ಒಗ್ಗಟ್ಟು ಮತ್ತು ಸಹಕಾರದಿಂದ ನೆರವೆರಲಿ, ಧರ್ಮ ಕಾರ್ಯ ನಿರಂತರ ನಡೆಯುವಂತಾಗಲಿ” ಎಂದು ಹೇಳಿದರು.

    ಆನಂತರ ಆಗಮಿಸಿದ ಒಡಿಯೂರು ಕ್ಷೇತ್ರದ ಸಾಧ್ವಿ ಮಾತಾನಂದಮಯಿ ಆಶೀರ್ವಚನ ನೀಡುತ್ತಾ ಕ್ಷೇತದ ಸರ್ವತೋಮುಖ ಅಭಿವೃದ್ಧಿ ಆಗುವಂತೆ ಶುಭ ಹಾರೈಸಿದರು.

    ಧಾರ್ಮಿಕ ಸಭಾ ವೇದಿಕೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪುರುಷೋತ್ತಮ ಕುಲಾಲ್ ಕಲ್ಬಾವಿ, ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್,

    ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ದಾಮೋದರ್ ಎ.
    ಶ್ರೀ ವೀರನಾರಾಯಣ ಟ್ರಸ್ಟ್ ನ ಅಧ್ಯಕ್ಷರು ಪ್ರೇಮಾನಂದ ಕುಲಾಲ್, ಸೇವಾ ಸಮಿತಿ ಅಧ್ಯಕ್ಷರು ಸುಂದರ್ ಕುಲಾಲ್, ಶ್ರೀ ವೀರನಾರಾಯಣ ಮಹಿಳಾ ಮಂಡಳಿ ಉಪಾಧ್ಯಕ್ಷೆ ಪಾರ್ವತಿ.ಕೆ ಉಪಸ್ಥಿತರಿದ್ದರು.

    ಸಂಪೂರ್ಣ ಕಾರ್ಯಕ್ರಮದ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ದೇವಸ್ಥಾನದ ಸೇವಾ ಸಮಿತಿ, ದೇವಳದ ಜೀರ್ಣೋದ್ಧಾರ ಸಮಿತಿ, ದ.ಕ. ಜಿಲ್ಲಾ ಮೂಲ್ಯರ ಯಾನೆ ಮಾತೃ ಸಂಘ, ವಿವಿಧ ನಗರಗಳ ಕುಲಾಲ ಸಮಾಜದ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸರ್ವ ಸದಸ್ಯರು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕಾರ್ಕಳದಲ್ಲಿ ಭೀಕರ ಅಪಘಾತ; ತಂದೆ ಸಹಿತ ಮೂರು ಮಕ್ಕಳ ದುರ್ಮರಣ

    Published

    on

    ಕಾರ್ಕಳ : ಕಾರ್ಕಳ – ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು (ಸೆ.30) ಭೀಕರ ಅಪಘಾತ ಸಂಭವಿಸಿದೆ. ಮಿನಿ ಲಾರಿ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.


    ವೇಣೂರಿನಿಂದ ನಲ್ಲೂರು ಕಡೆಗೆ ಬರುತ್ತಿದ್ದ ಬೈಕ್‌ಗೆ ಕಾರ್ಕಳದಿಂದ ಗುರುವಾಯನಕೆರೆಯತ್ತ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
    ಬೈಕ್ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದರು. ತಂದೆ ಸುರೇಶ್ ಆಚಾರ್ಯ (36), ಮಕ್ಕಳಾದ ಸಮಿಕ್ಷಾ (7) ಸುಶ್ಮಿತಾ (5) ಸುಶಾಂತ್ (2) ಮೃತಪಟ್ಟವರು. ತಾಯಿ ಮೀನಾಕ್ಷಿ (32) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಡೆ*ತ್ ನೋಟ್ ಬರೆದು ನೇ*ಣಿಗೆ ಶರಣಾದ ವಿದ್ಯಾರ್ಥಿನಿ !!

    Published

    on

    ಮುಲ್ಕಿ: ಸಣ್ಣ ಸಣ್ಣ ಕಾರಣಗಳಿಗೆ ವಿದ್ಯಾರ್ಥಿಗಳು ಸಾ*ವಿನ ಹಾದಿಯನ್ನಿಡಿಯುವ ಅದೆಷ್ಟೋ ಘಟನೆಗಳು ನಡೆಯುತ್ತಿವೆ. ಇದೀಗ ಅಂತಹದ್ದೇ ಒಂದು ಪ್ರಕರಣ ದಾಖಲಾಗಿದ್ದು, ಡೆ*ತ್ ನೋ*ಟ್ ಬರೆದಿಟ್ಟು ವಿದ್ಯಾರ್ಥಿನಿ ನೇ*ಣಿಗೆ ಶರಣಾಗಿರುವ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್‌ನಲ್ಲಿ ನಡೆದಿದೆ.


    ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್ ಎಂಬವರ ಪುತ್ರಿ ಉಜ್ವಲ (17) ಶನಿವಾರ (ಸೆ.28) ಸಂಜೆ ರೈಲ್ವೇ ಕ್ವಾಟರ್ಸ್‌ನ ಮನೆಯ ಎದುರು ಬದಿಯ ಕೋಣೆಯಲ್ಲಿ ಡೆ*ತ್ ನೋಟ್ ಬರೆದಿಟ್ಟು ಪ್ಯಾನ್‌ಗೆ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ.
    ಉಜ್ವಲ ಮುಲ್ಕಿ ವಿಜಯ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನಲ್ಲಿ ನಡೆದ ಮೀಟಿಂಗ್ ಮುಗಿದ ಬಳಿಕ ಮನೆ ಕಡೆ ಬಂದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಏಕಾ ಏಕಿ ಈ ಕೃ*ತ್ಯ ಎಸಗಿದ್ದಾಳೆ.
    ಆತ್ಮ*ಹತ್ಯೆ ಸಂದರ್ಭ ತಂದೆ ಮಹೇಶ್ ನಾಯಕ್ ಮೈಲೊಟ್ಟು ರೈಲ್ವೇ ಗೇಟ್ ಬಳಿ ಕರ್ತವ್ಯಕ್ಕೆ ಹೋಗಿದ್ದರು. ತಾಯಿ ತನ್ನ ಊರಾದ ಭಟ್ಕಳಕ್ಕೆ ತೆರಳಿದ್ದರು. ಮೃತಳ ಅಣ್ಣ ಮುಕ್ಕ ಕಾಲೇಜಿನಲ್ಲಿ ಕಲಿಯುತ್ತಿದ್ದು ಕಾಲೇಜು ಮುಗಿಸಿ ಸಂಜೆ 6:30 ಗಂಟೆ ಸುಮಾರಿಗೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಡೆತ್‌ ನೋಟ್‌ನಲ್ಲಿ ಏನಿದೆ?
    ಮೃತಳ ರೂಮ್‌ನಲ್ಲಿದ್ದ ಡೆ*ತ್ ನೋಟಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಕೆಯ ಬಗ್ಗೆ ಬರೆದಿದ್ದಾಳೆ. ತೋಟದ ಮನೆಯಲ್ಲಿ ಅಂತಿಮ ಕ್ರಿಯೆ ನಡೆಯಬೇಕು ಎಂಬುವುದಾಗಿಯೂ ಉಲ್ಲೇಖಿಸಿದ್ದಾಳೆ.
    ಮುಲ್ಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಹಾವು ಕಡಿತಕ್ಕೆ ಒಳಗಾದ ಯುವಕ..! ಸ್ಕೂಟರ್ ಸೀಟ್ ಅಡಿಯಲ್ಲಿತ್ತು ವಿಷಕಾರಿ ಹಾವು..!

    Published

    on

    ಮಂಗಳೂರು : ಸ್ಕೂಟರ್ ಸೀಟಿನ ಕೆಳಗೆ ಇದ್ದ ಹಾವೊಂದು ಸ್ಕೂಟರ್ ಸವಾರಿನಿಗೆ ಕಚ್ಚಿದ ಘಟನೆ ಮಂಗಳೂರು ಹೊರವಲಯದ ಗುರುಪುರದ ಬಳಿಯ ಕೈಕಂಬದಲ್ಲಿ ನಡೆದಿದೆ. ಕುಪ್ಪೆಪದವು ಎಂಬಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಇಮ್ತಿಯಾಜ್‌ ಎಂಬವರ ಇವಿ ಸ್ಕೂಟರ್‌ ಸೀಟ್ ಒಳಗೆ ಹಾವೊಂದು ಸೇರಿಕೊಂಡಿತ್ತು.

    ಸೀಟ್ ಅಡಿಯಲ್ಲಿತ್ತು ಕೊಳಕಮಂಡಲ (ಕಂದಡಿ) ಹಾವು :

    ಇಮ್ತಿಯಾಜ್‌ ಅವರು ಸ್ಕೂಟರ್ ನಿಲ್ಲಿಸಿ ಹೋಗಿದ್ದ ವೇಳೆ ಅಪಾಯಕಾರಿ ಕೊಳಕಮಂಡಲ ಹಾವು ಇವರ ಸೀಟ್ ಅಡಿಗೆ ಸೇರಿಕೊಂಡಿದೆ. ತುಳುವಿನಲ್ಲಿ ಕಂದಡಿ ಅಥವಾ ಕಂದೊಡಿ, ಎಂದು ಕರೆಯುವ ಈ ಹಾವು ವಿಷಕಾರಿಯಾಗಿದ್ದು, ಇದು ಕಚ್ಚಿದ ಭಾಗ ಕೊಳೆಯಲು ಆರಂಭಿಸುತ್ತದೆ. ಸೆಪ್ಟಂಬರ್ 27 ರಂದು ಇಮ್ತಿಯಾಜ್‌ ಅವರು ಕೆಲಸ ಮುಗಿಸಿ ರಾತ್ರಿ ವೇಳೆ ಮನೆಗೆ ತೆರಳಲು ಸಿದ್ಧತೆ ನಡೆಸಿದ್ದ ವೇಳೆ ಈ ವಿಷಕಾರಿ ಹಾವಿನ ಕಡಿತಕ್ಕೆ ಒಳಗಾಗಿದ್ದಾರೆ. ಸೀಟ್ ಮೇಲೆತ್ತಿ ಕಾಗದ ಪತ್ರಗಳನ್ನು ಒಳಗೆ ಇರಿಸುವ ವೇಳೆ ಅಲ್ಲಿ ಹಾಯಾಗಿ ಮಲಗಿದ್ದ ಈ ಹಾವು ಇಮ್ತಿಯಾಜ್ ಅವರ ಕೈಗೆ ಕಚ್ಚಿದೆ.


    ತಕ್ಷಣವೇ ಇಮ್ತಿಯಾಜ್ ಅವರನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲಾಗಿದ್ದು, ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕೊಳಕ ಮಂಡಲ ಹಾವು ವಿಷಕಾರಿಯಾಗಿದ್ದರೂ ತಕ್ಷಣ ಸೂಕ್ತ ಚಿಕಿತ್ಸೆ ದೊರೆತರೆ ಜೀವಕ್ಕೆ ಯಾವುದೇ ಅಪಾಯ ಉಂಟಾಗುವುದಿಲ್ಲ.

    Continue Reading

    LATEST NEWS

    Trending