Connect with us

DAKSHINA KANNADA

ರಾಜ್ಯಸಭೆಗೆ ಹೆಗ್ಗಡೆ: ಪೇಜಾವರ ಶ್ರೀ, ಸಂಸದ ನಳಿನ್‌ ಸೇರಿ ಹಲವರಿಂದ ಅಭಿನಂದನೆಗಳ ಮಹಾಪೂರ

Published

on

ಮಂಗಳೂರು: ಭಾರತ ಸರ್ಕಾರವು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ಬು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತುಂಬು ಸಂತಸ ವ್ಯಕ್ತಪಡಿಸಿದ್ದಾರೆ.‌


ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ ಏಳಿಗೆಗೆ ಬಹುಮುಖಿ ಹಾಗೂ ಅತ್ಯಂತ ಪರಿಣಾಮಕಾರಿಯಾದ ಕೊಡುಗೆ ಮತ್ತು ಕೈಂಕರ್ಯಗಳನ್ನು ನಿರ್ವಹಿಸುತ್ತಿರುವ ಹೆಗ್ಗಡೆಯವರ ನಿಯುಕ್ತಿಯಿಂದ ರಾಜ್ಯಸಭೆಯ ಘನತೆ ನೂರ್ಮಡಿಸಿದಂತಾಗಿದೆ.

ನಾವು ಮಾತ್ರವಲ್ಲ. ಇಡೀ ನಾಡೇ ಈ ಆಯ್ಕೆಯಿಂದ ಸಂತಸಪಡುವಂತಾಗಿದೆ. ಶ್ರೀಯುತ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರಿಗೆ ಶ್ರೀಕೃಷ್ಣನ ಪೂರ್ಣಾನುಗ್ರಹವನ್ನು ಪ್ರಾರ್ಥಿಸುತ್ತೇವೆ ಎಂದು ಶ್ರೀಗಳು ಸಂದೇಶ ನೀಡಿದ್ದಾರೆ.

ಕರ್ನಾಟಕದ ಜನತೆಗೆ ಹೆಮ್ಮೆ: ನಳಿನ್‌ಕುಮಾರ್ ಕಟೀಲ್
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ನರೇಂದ್ರ ಮೋದಿ ಅವರ ನೇತ್ರತ್ವದ ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿರುವುದು ಕರ್ನಾಟಕದ ಸಮಸ್ತ ಜನತೆಗೆ ಹೆಮ್ಮೆಯ ವಿಷಯವಾಗಿದೆ.

ಧಾರ್ಮಿಕ, ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿಗೆ ಅತ್ಯಪೂರ್ವ ಕೊಡುಗೆ ನೀಡಿರುವ ಡಾ.ಹೆಗ್ಗಡೆ ಅವರ ಜ್ಞಾನ, ಅನುಭವ ರಾಜ್ಯಸಭೆಗೆ ವರದಾನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ದೇಶದ ಹೆಮ್ಮೆಯ ಕ್ರೀಡಾಪಟು ಪಿ.ಟಿ.ಉಷಾ, ಚಿತ್ರ ಕಥೆಗಾರ ವಿ.ವಿಜಯೇಂದ್ರ ಮತ್ತು ಸಂಗೀತ ದಿಗ್ಗಜ ಇಳಯರಾಜ ಅವರನ್ನು ಅಭಿನಂದಿಸುವುದಾಗಿ ನಳಿನ್‌ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಾಗತಾರ್ಹ ಎಂದ ಜೈನ್ ಮಿಲನ್ ರಾಜ್ಯಾಧ್ಯಕ್ಷ ಪುಷ್ಪರಾಜ್ ಜೈನ್
ಶ್ರೀ ಕ್ಷೇತ್ರದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದನ್ನು ಭಾರತೀಯ ಜೈನ್ ಮಿಲನ್‌ನ ರಾಜ್ಯಾಧ್ಯಕ್ಷ ಪುಷ್ಪರಾಜ್ ಜೈನ್ ಸ್ವಾಗತಿಸಿದ್ದಾರೆ.


ಧಾರ್ಮಿಕ ಕ್ಷೇತ್ರದಲ್ಲಿದ್ದುಕೊಂಡು ತನ್ನ ಜವಾಬ್ದಾರಿಯೊಂದಿಗೆ ಸಾಮಾಜಿಕವಾಗಿ ತಮ್ಮನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡು ಸಮಾಜದ ಕೆಳಸ್ಥರದಲ್ಲಿದ್ದ ಸಮುದಾಯವನ್ನು ಮುಖ್ಯವಾಹಿನಿಗೆ ತರುವಲ್ಲಿ

ಡಿ.ವೀರೇಂದ್ರ ಹೆಗ್ಗಡೆ ಅವರ ಪ್ರಯತ್ನವನ್ನು ಗೌರವಿಸಿ ಇದೀಗ ಕೇಂದ್ರ ಸರಕಾರವು ಡಾ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿರುವುದು ಅವರು ಮಾಡಿರುವ ಸಮಾಜ ಸೇವೆಗೆ ದೊರೆತ ಗೌರವ ಮಾತ್ರವಲ್ಲದೆ ಸಮುದಾಯಕ್ಕೆ ಸಿಕ್ಕ ಗೌರವವಾಗಿದೆ.
ಶಿಕ್ಷಣ, ಆರೋಗ್ಯ,

ಸ್ತ್ರೀ ಶಕ್ತಿ ಸಂಘಟನೆಯ ಮೂಲಕ ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿಯ ಯೋಜನೆಯ ಮೂಲಕ ಗ್ರಾಮಾಂತರ ಪ್ರದೇಶದ ಜನರ ಕಲ್ಯಾಣ, ಮಧ್ಯವರ್ಜನ ಶಿಬಿರದ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣ, ಕೆರೆಗಳ ಅಭಿವೃದ್ಧಿö, ಕೃಷಿಗೆ ಉತ್ತೇಜನ, ಹೈನುಗಾರಿಕೆಗೆ ಉತ್ತೇಜನ, ಸಿರಿ ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಉದ್ಯೋಗ,

ಅನ್ನದಾನ, ಅಭಯದಾನ, ವಸ್ತ್ರದಾನ, ನ್ಯಾಯದಾನ ಹೀಗೆ ಹತ್ತು ಹಲವು ಯೋಜನೆ, ಯೋಚನೆಯ ಮೂಲಕ ಧಾರ್ಮಿಕ ಚಟುವಟಿಕೆಯೊಂದಿಗೆ ಸಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದಕ್ಕೆ ಪೂರಕವಾಗಿ ಮತ್ತು ಗೌರವವಾಗಿ ಇದೀಗ ರಾಜ್ಯಸಭಾ ಸದಸ್ಯತ್ವ ನೀಡುವ ಮೂಲಕ ಅವರನ್ನು ಗುರುತಿಸಿದೆ ಎಂದು ಪುಷ್ಪರಾಜ್ ಜೈನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

DAKSHINA KANNADA

ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

Published

on

ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Continue Reading

DAKSHINA KANNADA

15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!

Published

on

ಮಂಗಳೂರು ( ಜಾರ್ಖಂಡ್‌ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು ಜಾರ್ಖಂಡ್‌ನಲ್ಲಿ ನಡೆದ ಘಟನೆಯಾಗಿದ್ದು, ಹತ್ತು ಸಾವಿರ ಲಂಚ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಇಡಿ  ಸಾಮಾನ್ಯ ನೌಕರನ ಮನಗೆ ದಾಳಿ ಮಾಡಿತ್ತು. ಅಲ್ಲಿ ಅಡಗಿಸಿಟ್ಟಿದ್ದ ಹಣ ನೋಡಿ ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಣ ಎಣಿಸಲು ಮೆಷಿನ್ ಹಾಗೂ ಹೆಚ್ಚುವರಿ ನೌಕರರನ್ನು ಮನೆಗೆ ಕರೆಸಿಕೊಂಡಿದ್ದಾರೆ.

ನೌಕರನ ಮನೆಗೆ ಲಂಚದ ಹಣ…!

ಜಾರ್ಖಂಡ್‌ ನ ಸಚಿವ ಅಲಂಗೀರ್ ಆಲಂ ಅವರ ಖಾಸಗಿ ಕಾರ್ಯದರ್ಶಿ ಮನೆ ಮೇಲೆ ರಾಂಚಿಯ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಲಂಗೀರ್ ಆಲಂ ಅವರ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಲ್ಲಿನ ಲಂಚದ ಹಣ ನೌಕರನ ಮನೆಗೆ ಹೋಗುತ್ತದೆ ಅನ್ನೋ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಚಿವರ ಆಪ್ತ ಕಾರ್ಯದರ್ಶಿಯ ಅಡಿಯಲ್ಲಿ ಮಾಸಿಕ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ನೌಕರನ ಮನೆಗೆ ದಾಳಿ ಮಾಡಿದಾಗ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ.

ವಿಡಿಯೋ ನೋಡಿ :

ಹತ್ತು ಸಾವಿರ ಲಂಚದ ಹಿಂದೆ ಬಿದ್ದಿದ್ದ ಇಡಿ..!

ಕಳೆದ ವರ್ಷ ಹತ್ತು ಸಾವಿರ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಇಂಜೀನಿಯರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಇಂಜೀನಿಯರ್ ಅವರ ಹೇಳಿಕೆಯನ್ನು ದಾಖಲಿಸಿದಾಗ ಲಂಚದ ಹಣ ಸಚಿವರಿಗೆ ತಲುಪಿಸಲಾಗುತ್ತದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಜಾರ್ಖಂಡ್‌ನ ಗ್ರಾಮೀಣ ಅಭಿವೃದ್ದಿ ಸಚಿವ ಅಲಂಗೀರ್ ಆಲಂ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹೆಸರು ಮುನ್ನಲೆಗೆ ಬಂದಿತ್ತು . ಹೀಗಾಗಿ ಸಂಜೀವ್‌ ಲಾಲ್ ಅವರ ಬಳಿ ನೌಕರನಾಗಿದ್ದ ವ್ಯಕ್ತಿಯ ಮನೆಗೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

ಜಾರ್ಖಂಡ್ ಕಾಂಗ್ರೆಸ್ ಸರ್ಕಾರದ ಸಚಿವ…!

ಅಲಂಗೀರ್ ಆಲಂ ಜಾರ್ಖಂಡ್‌ನ ಪಾಕುರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾರೆ. ಈ ಹಿಂದೆ 2006 ರಿಂದ 2009 ರ ವರೆಗೆ ಅವರು ಸ್ಪೀಕರ್ ಕೂಡಾ ಆಗಿದ್ದರು. 2023ರ ಡಿಸೆಂಬರ್‌ ತಿಂಗಳಲ್ಲಿ ಜಾರ್ಖಂಡ್‌ನ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಉದ್ಯಮಿ ಧೀರಜ್ ಸಾಹು ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲಿ 350 ಕೋಟಿಯಷ್ಟು ಹಣ ಪತ್ತೆಯಾಗಿತ್ತು. ಈ ವೇಳೆ ಧೀರಜ್ ಸಾಹು ಅದು ಮದ್ಯದ ವ್ಯವಹಾರದ ಹಣವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.

Continue Reading

DAKSHINA KANNADA

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

Published

on

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.

nethravathi river

ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ  ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Continue Reading

LATEST NEWS

Trending