Monday, July 4, 2022

ಕಾಪು: ವಾಹನ ಬ್ಯಾಟರಿ ಕದಿಯುತ್ತಿದ್ದ ಖದೀಮರ ಬಂಧನ

ಕಾಪು: ವಾಹನಗಳ ಬ್ಯಾಟರಿ ಕಳವುಗೈಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಕಾಪು ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಬಂಧಿತರನ್ನು ಶರೀಫ್ (35), ಅಲ್ತಾಫ್ (26), ಫರ್ಜೀನ್ ಅಹಮದ್ (21), ಅಫ್ಝಲ್ ರಹ್ಮಾನ್ (20), ಮುಹಮ್ಮದ್ ಇಜಾಝ್ (18) ಎಂದು ಗುರುತಿಸಲಾಗಿದೆ.

ಬಂಧಿತರಿಂದ 2.21 ಲಕ್ಷ ರೂ. ಮೌಲ್ಯದ 22 ಬ್ಯಾಟರಿ, ಮೂರು ಕಾರು ಸೇರಿ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಶರೀಫ್ ಶಿರ್ವ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದು, ವಾಹನಗಳ ಬ್ಯಾಟರಿ ಕಳವು ಮಾಡುತಿದ್ದ ಬಗ್ಗೆ ಪಡುಬಿದ್ರಿ,

ಶಿರ್ವ ಹಾಗೂ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಸ್‍ಪಿ ಎನ್. ವಿಷ್ಣುವರ್ಧನ್, ಎಎಸ್‍ಪಿ ಕುಮಾರಚಂದ್ರ ನಿರ್ದೆಶನದಂತೆ, ಕಾರ್ಕಳ ಡಿವೈಎಸ್‍ಪಿ ವಿಜಯ ಪ್ರಸಾದ್ ಮಾರ್ಗದರ್ಶನದಲ್ಲಿ ಕಾಪು ಇನ್ಸ್‍ಪೆಕ್ಟರ್ ಪ್ರಕಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಪಿಎಸ್‍ಐ ತಿಮ್ಮೇಶ್, ರಾಘವೇಂದ್ರ, ತಂಡದ ಪ್ರವೀಣ್ ಕುಮಾರ್, ನಾರಾಯಣ, ರಾಜೇಶ್, ಹೇಮರಾಜ್, ಸಂದೇಶ, ಆನಂದ ರಘು, ಸಂತೋಷ್ ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Hot Topics

ಪೌರಕಾರ್ಮಿಕರ ಬೆಂಬಲಕ್ಕೆ ನಿಂತ ವಿರೋಧ ಪಕ್ಷದ ಉಪನಾಯಕ ಖಾದರ್

ಮಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ಪೌರ ಕಾರ್ಮಿಕರ ಮುಷ್ಕರ ನಾಳೆ ಐದನೇ ದಿನಕ್ಕೆ ಕಾಲಿರಿಸಲಿದೆ. ರಾಜ್ಯ ಘಟಕದ ಸೂಚನೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರತಿಭಟನೆ ಮುಂದುವರಿದಿದೆ.ಸ್ವಚ್ಛತಾ ಕೆಲಸವನ್ನು ಸಂಪೂರ್ಣ ಸ್ಥಗಿತಗೊಳಿಸಿ ಪೌರ ಕಾರ್ಮಿಕರು ಮಂಗಳೂರಿನಲ್ಲಿ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು-ಓರ್ವನ ರಕ್ಷಣೆ

ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...

“ನ್ಯಾಯಮೂರ್ತಿಗಳ ವೈಯುಕ್ತಿಕ ದಾಳಿ ನಡೆಸುವ ಸೋಷಿಯಲ್‌ ಮೀಡಿಯಾ ಅಪಾಯಕಾರಿ”

ನವದೆಹಲಿ: ನ್ಯಾಯಧೀಶರ ಕುರಿತು ವೈಯಕ್ತಿಕವಾಗಿ ದಾಳಿ ನಡೆಸುತ್ತಿರುವ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳು ಲಕ್ಷ್ಮಣ ರೇಖೆ ದಾಟುತ್ತಿರುವುದು ಅಪಾಯಕಾರಿ.ಸಂವಿಧಾನದಡಿ ಕಾನೂನು ಸುವ್ಯವಸ್ಥೆ ಕಾಪಾಡಲು ದೇಶದಲ್ಲಿ ಇವುಗಳ ಕಡ್ಡಾಯವಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್...