Monday, January 24, 2022

ಕೊಣಾಜೆ: ವಾಹನದ ಬ್ಯಾಟರಿ ಕದಿಯುತ್ತಿದ್ದ ಖದೀಮರ ಬಂಧನ

ಮಂಗಳೂರು: ಲಾರಿಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಇಬ್ಬರನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದು, 2.70 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ರಾಜೇಶ್ ಕೆ (27), ಸಿನಾನ್ (24) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣವೊಂದು ದಾಖಲಾಗಿತ್ತು.

ಮಹಮ್ಮದ್ ಶರೀಫ್ ಎಂಬವರು ಕುರ್ನಾಡು ಮಿತ್ತಕೋಡಿ ಎಂಬಲ್ಲಿರುವ ಸೈಟ್‌ನಲ್ಲಿ ನಿಲ್ಲಿಸಿದ್ದ ಲಾರಿ, ಹಿಟಾಚಿ ಮತು ಜೆಸಿಬಿಗಳ 7 ಬ್ಯಾಟರಿಗಳನ್ನು ಕಳವು ಮಾಡಲಾಗಿತ್ತು.

ಬುಧವಾರ ಆರೋಪಿಗಳು ಟಾವಾಹನದ ಬ್ಯಾಟರಿ ಕದಿಯುತ್ತಿದ್ದ ಖದೀಮರ ಬಂಧನ ಟಾ ಏಸ್ ವಾಹನದಲ್ಲಿ 10 ಬ್ಯಾಟರಿಗಳನ್ನು ಮಾರಾಟ ಮಾಡಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಕೊಣಾಜೆ ಪೊಲೀಸರಿಗೆ ಲಭ್ಯವಾಗಿತ್ತು.

ಈ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಬಾಳೆಪುಣಿ ಗ್ರಾಮದ ಸುಟ್ಪಾಡಿ ಕ್ರಾಸ್ ಬಳಿ ಟಾಟಾ ಏಸ್ ವಾಹನವನ್ನು ತಡೆದು ನಿಲ್ಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Hot Topics

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಧನ ಸಹಾಯ ಹಾಗೂ ಅಕ್ಕಿ ವಿತರಣೆ

ಕಾರ್ಕಳ: ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ರವರು ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ಟ್ರಸ್ಟ್ ವತಿಯಿಂದ ಮಿತ್ತಬೈಲ್...

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...