Connect with us

    LATEST NEWS

    ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯದ ಈ ಭಾಗದಲ್ಲಿ ವಾಹನ ಸಂಚಾರ, ಪಾರ್ಕಿಂಗ್​ ನಿಷೇಧ

    Published

    on

    ಮಂಗಳೂರು/ಬೆಂಗಳೂರು: ಗಣರಾಜ್ಯೋತ್ಸವ ದಿನದ ಪ್ರಯುಕ್ತ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಭಾನುವಾರ (ಜನವರಿ 26) ರಂದು ಬೆಳಗ್ಗೆ 9 ಗಂಟೆಗೆ ವಿಶೇಷ ಪಥಸಂಚಲನ ನಡೆಯಲಿದೆ. ರಾಜ್ಯಪಾಲರು ಧ್ವಜಾರೋಹಣ ಮಾಡಿ, ಗೌರವ ವಂದನೆ ಸ್ವೀಕರಿಸಲಿದ್ದಾರೆ.

    ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿದ್ದಾರೆ. ಮತ್ತು ಮೈದಾನದ ಸುತ್ತ-ಮುತ್ತಲು ವಾಹನ ಸಂಚಾರ, ಪಾರ್ಕಿಂಗ್​​ ನಿಷೇಧಿಸಲಾಗಿದೆ. ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್​​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ನಾಳೆ ಬೆಳಗ್ಗೆ 8:30 ರಿಂದ 10:30ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್​ನಿಂದ ಕಾಮರಾಜರಸ್ತೆ ಜಂಕ್ಷನ್​ವರೆಗೆ ಎರಡೂ ದಿಕ್ಕುಗಳಲ್ಲಿನ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

    ಪರ್ಯಾಯ ಮಾರ್ಗ

    ಇನ್ಫೆಂಟ್ರಿರಸ್ತೆಯಲ್ಲಿ ಮಣಿಪಾಲ್ ಸೆಂಟ‌ರ್ ಕಡೆಗೆ ಸಂಚರಿಸುವ ವಾಹನಗಳು: ನೇರವಾಗಿ ಇನ್ ಫೆಂಟ್ರಿರಸ್ತೆ – ಸಫೀನಾ ಪ್ಲಾಜಾದಲ್ಲಿ ಎಡತಿರುವು ಪಡೆದು ಮೈನ್​ಗಾರ್ಡ್​ರಸ್ತೆ – ಆಲೀಸ್​ ಸರ್ಕಲ್​​-ಡಿಸ್ಸೆನ್ಸರಿ ರಸ್ತೆ – ಕಾಮರಾಜರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್​ನಲ್ಲಿ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ – ಕಬ್ಬನ್​ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್​ನಲ್ಲಿ ಎಡಕ್ಕೆ ತಿರುವು ಪಡೆದು ಕಬ್ಬನ್‌ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬೇಕು. ಕಬ್ಬನ್‌ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್​ನಿಂದ ಬಿ.ಆರ್.ವಿ. ಜಂಕ್ಷನ್​ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಬಂಧಿಸಿದ್ದು, ಸದರಿ ವಾಹನಗಳು ವೆಬ್ಸ್​ ಜಂಕ್ಷನ್​​ ಬಳಿ ಬಲ ತಿರುವು ಪಡೆದು ಎಂ.ಜಿ. ರಸ್ತೆಯ ಮೂಲಕ ಮೆಯೋ ಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬೇಕು. ಅನಿಲ್ ಕುಂಬ್ಳೆ ವೃತ್ತದಿಂದ ಕಬ್ಬನ್ ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟ್ರೀಟ್​ನಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು ಇನ್​ಫೆಂಟ್ರಿರಸ್ತೆ – ಸಫೀನಾ ಪ್ಲಾಜಾದಲ್ಲಿ ಎಡ ತಿರುವು ಪಡೆದು ಮೈನ್ ಗಾರ್ಡ್ ರಸ್ತೆ – ಅಲಿ ಸರ್ಕಲ್ – ಡಿಸ್ಪೆನ್ಸರಿರಸ್ತೆ – ಕಾಮರಾಜರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್​​ನಲ್ಲಿ ಬಲ ತಿರುವು ಪಡೆದು ಕಾಮರಾಜ ರಸ್ತೆ – ಕಬ್ಬನ್‌ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು, ಕಬ್ಬನ್‌ ರಸ್ತೆ ಮುಖಾಂತರ ಮಣಿಪಾಲ್​ ಸೆಂಟರ್​ ಕಡೆಗೆ ಸಾಗಬೇಕು.

    ಸೂಚನೆಗಳು

    ಕಾರ್ಯಕ್ರಮಕ್ಕೆ ಬರುವ ಎಲ್ಲ ಮಾಧ್ಯಮ ಪ್ರತಿನಿಧಿಗಳ ವಾಹನಗಳು ಪ್ರವೇಶ ದ್ವಾರ-4 ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬೇಕು. ಭದ್ರತಾ ದೃಷ್ಟಿಯಿಂದ ಪೆರೇಡ್ ಗೆ ಬರುವ ಎಲ್ಲಾ ಆಹ್ವಾನಿತರು ಹಾಗೂ ಸಾರ್ವಜನಿಕರು ಮೊಬೈಲ್ ಫೋನ್. ಹೆಲ್ಮೆಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬಾರದು. ಇಂತಹ ವಸ್ತುಗಳನ್ನು ಹೊಂದಿರುವವರನ್ನು ಒಳಗೆ ಬಿಡುವುದಿಲ್ಲ. ಎಲ್ಲರೂ ಬೆಳಗ್ಗೆ 8 ಒಳಗೆ ಮೈದಾನದ ಒಳಗೆ ಬರಬೇಕೆಂದು ಮನವಿ ಮಾಡಿದ್ದಾರೆ. ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗಧಿಪಡಿಸಿದ ಗೇಟ್​ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್‌ನಲ್ಲಿ ನಿಗಧಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆಮಾಡಬೇಕು. ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ. ಕ್ಯೂ.ಆರ್.ಟಿ, ಬಿ.ಬಿ.ಎಂ.ಪಿ. ಹಾಗೂ ಪಿಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬೇಕು.

    ವಾಹನ ನಿಲುಗಡೆ ನಿಷಿದ್ದ ರಸ್ತೆಗಳು:

    • ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ.
    • ಕಬ್ಬನ್‌ ರಸ್ತೆ, ಸಿ.ಟಿ.ಓ. ವೃತ್ತದಿಂದ ಕೆ.ಆರ್.ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್​ವರೆಗೆ.
    • ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ಷೀನ್ಸ್ ವೃತ್ತದವರೆಗೆ

    ವಿಶೇಷ ಸೂಚನೆಗಳು:

    • ಮಾಣಿಕ್ ಪಾ ಪೆರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನ ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸುವಂತೆ ಸೂಚಿಸಿದ್ದಾರೆ.
    • ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಬಹುದಾಗಿದೆ ಎಂದಿದ್ದಾರೆ.
    • ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ತಮ್ಮ ಸಹಕಾರವನ್ನು ಬಯಸುತ್ತೇವೆ ಎಂದರು.
    • ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯಗಳನ್ನು ಬಿ.ಬಿ.ಎಂ.ಪಿ. ವತಿಯಿಂದ ಏರ್ಪಡಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    LATEST NEWS

    ಮೊಹಮ್ಮದ್ ಸಿರಾಜ್ ಹಾಗೂ ಝನಾಯಿ ಭೋಸ್ಲೆ ಡೇಟಿಂಗ್ ; ಫೋಟೋ ವೈರಲ್

    Published

    on

    ಪಾರ್ಟಿಯೊಂದರಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಝನಾಯಿ ಭೋಸ್ಲೆ ಜೊತೆಯಾಗಿ ಕಾಣಿಸಿಕೊಂಡದ್ದು ಅಷ್ಟೇ. ಆ ಚಿತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ಇದರ ಬೆನ್ನಲ್ಲೇ ‘ಮೊಹಮ್ಮದ್ ಸಿರಾಜ್ ಹಾಗೂ ಝನಾಯಿ ಭೋಸ್ಲೆ ಡೇಟಿಂಗ್ ಮಾಡುತ್ತಿದ್ದಾರೆ’ ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.

    ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರ ಫೋಟೋವೊಂದು ವೈರಲ್ ಆಗಿದ್ದು, ಇದಕ್ಕೆ ಮುಖ್ಯ ಕಾರಣ ಗಾಯಕಿ ಝನಾಯಿ ಭೋಸ್ಲೆ. ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಮೊಮ್ಮಗಳಾಗಿರುವ ಝನಾಯಿ ಭೋಸ್ಲೆ ಸಿರಾಜ್ ಅವರೊಂದಿಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಆದರೀಗ ಈ ಬಗ್ಗೆ ಖುದ್ದು ಮೊಹಮ್ಮದ್ ಸಿರಾಜ್ ಸ್ಪಷ್ಟನೆ ನೀಡಿದ್ದು, ‘ಝನಾಯಿ ಭೋಸ್ಲೆ ಅವರು ನನಗೆ ತಂಗಿ ಸಮಾನ. ನನ್ನ ಫ್ರೆಂಡ್ ಆಗಿರುವ ಕಾರಣ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದೆ. ಇದರ ಹೊರತಾಗಿ ಬೇರೇನು ಇಲ್ಲ’ ಎಂದು ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ್ದಾರೆ.

    ಝನಾಯಿ ಭೋಸ್ಲೆ ಕೂಡ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದು, ‘ಮೊಹಮ್ಮದ್ ಸಿರಾಜ್ ನನ್ನ ಅಣ್ಣ. ನನ್ನ ಪ್ರೀತಿಯ ಅಣ್ಣ’ ಎಂದು ವೈರಲ್ ಆಗಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಎಲ್ಲಾ ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ.

    Continue Reading

    BIG BOSS

    ಕಿಚ್ಚ ಸುದೀಪ್ ಜೊತೆ ಬಿಗ್‌ಬಾಸ್ ಧ್ವನಿ ಪ್ರದೀಪ್ ಬಡೆಕ್ಕಿಲ ವಿದಾಯ

    Published

    on

    ಹಲವು ಬದಲಾವಣೆಗಳಿಗೆ ಬಿಗ್ ಬಾಸ್ ಕನ್ನಡ 11ರ ಈ ಸೀಸನ್ ಸಾಕ್ಷಿಯಾಗಿದೆ. ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್ ಇದು ತಮ್ಮ ಕೊನೆಯ ಸೀಸನ್ ಎಂದು ಈಗಾಗಲೇ ಘೋಷಿಸಿದ್ದಾರೆ.

    ಈ ಸೀಸನ್ ಶುರುವಾಗುವ ಮುನ್ನ ಸುದೀಪ್ ಬಿಗ್ ಬಾಸ್ ನಿರೂಪಣೆ ಮಾಡುತ್ತಾರೋ ಎಂಬುದು ದೊಡ್ಡ ಪ್ರಶ್ನೆ ಆಗಿತ್ತು. ಆದರೆ ಈ ಸೀಸನ್ ನಲ್ಲಿ ಸುದೀಪ್ ನಿರೂಪಣೆ ಮಾಡುವುದಾಗಿ ಬಿಗ್ ಬಾಸ್ ಪ್ರೋಮೋದ ಮೂಲಕ ತಿಳಿದುಬಂದಿತ್ತು.

    ಕಳೆದ ವಾರ ಕಿಚ್ಚನ ಪಂಚಾಯಿತಿ ಬಳಿಕ ತಮ್ಮ ಕೊನೆಯ ಪಂಚಾಯಿತಿ ಎಂದು ಕಿಚ್ಚ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಜತೆಗೆ ಬಿಗ್ ಬಾಸ್ ಅಭಿಮಾನಿಗಳು ಇದಕ್ಕೆ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

    ಆದರೆ ಇದೀಗ ಇನ್ನೊಂದು ಶಾಕ್ ಕೊಟ್ಟಿದ್ದು ಕಿಚ್ಚ ಸುದೀಪ್ ವಿದಾಯದೊಂದಿಗೆ ಬಿಗ್ ಬಾಸ್ ಧ್ವನಿಯೂ ವಿದಾಯ ಹೇಳಲಿದೆ. ಹೌದು, ಬಿಗ್ ಬಾಸ್ ಹಾಗೂ ಕಲರ್ಸ್ ಕನ್ನಡ ಹಾಗೂ ನಮ್ಮ ಮೆಟ್ರೋಗೆ ಧ್ವನಿ ನೀಡಿದ್ದ ಬಡೆಕ್ಕಿಲ ಪ್ರದೀಪ್ ಮನೆಮಾತಾಗಿದ್ದಾರೆ.

    ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಧ್ವನಿಯಾಗಿಯೂ ಪ್ರದೀಪ್ ಅವರೇ ಇದ್ದಾರೆ ಎಂದು ಎಲ್ಲರೂ ಹೇಳುವುದು ಹೌದು. ಹೀಗಾಗಿ ಬಿಗ್ ಬಾಸ್ ಧ್ವನಿ ಎನ್ನಲಾಗುವ ಪ್ರದೀಪ್ ಅವರು ಕೂಡ ಬೆಂಗಳೂರನ್ನು ತೊರೆಯಲಿದ್ದು, ಕಿಚ್ಚ ಸುದೀಪ್ ವಿದಾಯದೊಂದಿಗೆ ಬಿಗ್ ಬಾಸ್ ಧ್ವನಿಯೂ ವಿದಾಯ ಹೇಳಲಿದೆ.

    ಬಡೆಕ್ಕಿಲ ಪ್ರದೀಪ್ ಅವರು ಈಗಾಗಲೇ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ, ತಾವು ಅನಿವಾರ್ಯ ಕಾರಣಗಳಿಂದಾಗಿ ಹುಟ್ಟೂರು ಪುತ್ತೂರಿಗೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ತಡರಾತ್ರಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ; ಜಪ್ಪಿನಮೊಗರು ಬಳಿ ಹೊತ್ತಿ ಉರಿದ ಅಂಗಡಿ

    Published

    on

    ಮಂಗಳೂರು : ಭಾನುವಾರ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಜಪ್ಪಿನ ಮೊಗರು ಬಳಿಯ ಅಂಗಡಿಯೊಂದು ಹೊತ್ತಿ ಉರಿದ ಘಟನೆ ಸಂಭವಿಸಿದೆ.

    ಜಪ್ಪಿನ ಮೊಗರು ಬಳಿಯ ಗ್ಲಾಸ್ ಸೆಂಟರ್ ಒಂದರಲ್ಲಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣದಲ್ಲಿ ಇಡೀ ಅಂಗಡಿಯನ್ನು ಬಸ್ಮ ಮಾಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದು, ಅಗ್ನಿ ಶಾಮಕದಳಕ್ಕೂ ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ: ಕಡಲ್ಕೊರೆತ ತಡೆಗಾಗಿ ವಿಷ್ಣು ಸಹಸ್ರನಾಮ ಪಠಣ

    ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯುಟ್ ಕಾರಣ ಅಂತ ಹೇಳಲಾಗಿದ್ದು, ಈ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಾಗಿದೆ.

    ಅಗ್ನಿಯ ಕೆನ್ನಾಲಿಗೆ ಸುಟ್ಟು ಕರಕಲಾದ ಗ್ಲಾಸ್ ಸೆಂಟರ್‌ನಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.

    Continue Reading

    LATEST NEWS

    Trending