BELTHANGADY
ವೇಣೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ 3.30 ಲಕ್ಷ ರೂ. ವಂಚನೆ..!
Published
1 year agoon
By
Adminಇತ್ತೀಚಿನ ದಿನಗಳಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಹಣ ವಂಚನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅದೇ ರೀತಿ ಬೆಳ್ತಂಗಡಿ ತಾಲೂಕಿನ ಒಬ್ಬ ಯುವಕನಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಸುಮಾರು 3.30 ಲಕ್ಷ ರೂ. ವಂಚನೆ ಮಾಡಿದ್ದಾರೆ. ಈ ಬಗ್ಗೆ ಇಬ್ಬರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೇಣೂರು: ಇತ್ತೀಚಿನ ದಿನಗಳಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಹಣ ವಂಚನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅದೇ ರೀತಿ ಬೆಳ್ತಂಗಡಿ ತಾಲೂಕಿನ ಒಬ್ಬ ಯುವಕನಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಸುಮಾರು 3.30 ಲಕ್ಷ ರೂ. ವಂಚನೆ ಮಾಡಿದ್ದಾರೆ. ಈ ಬಗ್ಗೆ ಇಬ್ಬರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್ ವಂಚನೆಗೊಳಗಾದವರು.
ಲಿಯೋ ಪಾಯಸ್‌ರವರ ಮನೆಗೆ ಆರೋಪಿಗಳಿಬ್ಬರು ಜ. 18ರಂದು ಬಂದು ಅವರ ಪುತ್ರ ಸುರೇಶ್ ಪಾಯಸ್ ಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಾತುಕತೆ ನಡೆಸಿದ್ದರು.
ಉದ್ಯೋಗ ಕೊಡಿಸುವುದಾಗಿ ಆರೋಪಿಗಳು 1.25 ಲಕ್ಷ ರೂ. ನಗದು ಪಡೆದು ಬಳಿಕ ವಿವಿಧ ಹಂತಗಳಲ್ಲಿ 1.37 ಲಕ್ಷ ರೂ., 40 ಸಾವಿರ, 28 ಸಾವಿರ ರೂ. ನಗದನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.
ಬಲಿಕ ಆರೋಪಿಗಳು ಸುರೇಶ್ ಪಾಯಸ್ ಗೆ ಮೊಬೈಲ್ ಮೂಲಕ ಬಲ್ಗೇರಿಯಾಕ್ಕೆ ವಿಮಾನ ಟಿಕೆಟ್ ಬುಕ್ ಮಾಡಿದ
ನಕಲಿಪ್ರತಿಯನ್ನು ವಾಟ್ಸ್ ಆ್ಯಪ್ ನಲ್ಲಿ ಕಳುಹಿಸಿ ಮುಂಬೈಗೆ ಬರುವಂತೆ ತಿಳಿಸಿದ್ದಾರೆ.
ಹಾಗಗಿ ಸುರೇಶ್ ಪಾಯಸ್ ಮುಂಬೈಗೆ ತೆರಳಿದ್ದಾನೆ.
ಮುಂಬೈನಲ್ಲಿ ಆತನಿಗೆ ಆರೋಪಿಗಳು ವೀಸಾ ಹಾಗೂ ವಿದೇಶಿ ಕರೆನ್ಸಿ ತರುವುದಾಗಿ ಹೇಳಿ ಹೋದವರು ಹಿಂದಿರುಗದೆ ವಂಚಿಸಿದ್ದಾರೆ.
ಈ ಬಗ್ಗೆ ಕಳೆದ ಮಾರ್ಚ್ ತಿಂಗಳಲ್ಲಿ ಲಿಯೋ ಪಾಯಸ್‌ರವರ ಮೊಬೈಲ್‌ಗೆ ಮೆಸೇಜ್ ಮಾಡಿ ನಿಮ್ಮ ಪುತ್ರನ ಟಿಕೆಟ್ ಕ್ಯಾನ್ಸಲ್ ಆಗಿದೆ.
ಹಣ ಮತ್ತು ಪಾಸ್‌ಪೋರ್ಟನ್ನು ಕೊರಿಯರ್ ಮೂಲಕ ಕಳುಹಿಸುವುದಾಗಿ ತಿಳಿಸಿ ಪಾಸ್‌ಪೋರ್ಟ್ ಮಾತ್ರ ಕಳುಹಿಸಿ ವಂಚಿಸಿದ್ದರು.
ಪ್ರಕರಣದ ಓರ್ವ ಆರೋಪಿ ತಲೆಮರೆಸಿಕೊಂಡಿದ್ದು, ಮತ್ತೋರ್ವ ಆರೋಪಿಯನ್ನು ಮಂಗಳೂರಿನ ಸುಧೀರ್ ಎಂದು ಗುರುತಿಸಲಾಗಿದ್ದು, ಈತನ ಮೇಲೇ ಈಗಾಗಲೇ ಬಂಟ್ವಾಳ ನಗರ, ಗ್ರಾಮಾಂತರ, ಮೂಡುಬಿದಿರೆ, ಮಂಗಳೂರು ಸೇರಿದಂತೆ ಹಲವು ಠಾಣೆಗಳಲ್ಲಿ ಕೇಸುಗಳಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.
ಪ್ರಕರಣದ ಓರ್ವ ಆರೋಪಿ ಈಗಾಗಲೇ ಬಂಧನ ದಲ್ಲಿದ್ದು, ಮತ್ತೋರ್ವ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Baindooru
ಹೊಸ ಟ್ರೆಂಡ್‌ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Published
16 hours agoon
22/11/2024By
NEWS DESK2ಬೆಳ್ತಂಗಡಿ: ಯುವಕನೊಬ್ಬತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರಿಂದ ನೋಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.22ರ ಶುಕ್ರವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್(21) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದ ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ ಎಂದು ತಿಳಿದು ಬಂದಿದೆ.
ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಹರಿದ ರೀತಿಯಲ್ಲಿತ್ತು. ಅದನ್ನು ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಮಾರುಕಟ್ಟೆಯಲ್ಲಿದ್ದ ಪಡ್ಡೆ ಹುಡುಗರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬಿರ್, ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರದ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ.
ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು, ತಕ್ಷಣ ಮನೆಯವರು ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟಣೆ ಬಗ್ಗೆ ಸಾರ್ವಜನಿಕರು ಈ ಮೂವರನ್ನು ಪುಂಡರ ವಿರುದ್ಧ ಕಠಿನ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು ಕುಟುಂಬದವರು ನ.21ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸಚಿವರ ಜತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮೈಸೂರಿನ ಉದ್ಯಮಿ ಎಂ.ಕೆ.ಪೋತ್‌ರಾಜ್, ಉದ್ಯಮಿ ಕಲಬುರಗಿಯ ಸಂತೋಷ್ ಗುತ್ತೆದಾರ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಉಜಿರೆ, ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ನವೀನ್ ಗೌಡ ಸವಣಾಲು, ಕಾಂಗ್ರೆಸ್ ಮುಖಂಡ ರಾಘವೇಂದ್ರ ಪೂಜಾರಿ ಮತ್ತಿತರಿದ್ದರು.
BELTHANGADY
ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ
Published
1 week agoon
13/11/2024By
NEWS DESK2ಬೆಳ್ತಂಗಡಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಮೊದಲಿಗೆ ಶ್ರೀ ಮಂಜುನಾಥನ ದರ್ಶನ ಪಡೆದು, ನಂತರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರಿಗೆ 600 ಕೋಟಿ ರೂ. ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್‌ತಿಳಿಸಿದ್ದಾರೆ.
ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನಬಾರ್ಡ್ ಅಧ್ಯಕ್ಷ ಶಾಜಿ, ಕೆ.ವಿ. ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಶುಭಾಶಂಸನೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್‌ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ