Connect with us

    LATEST NEWS

    ಅರಣ್ಯ ಅಧಿಕಾರಿಗಳಿಗೆ ಶಾಸಕನಿಂದ ಅವಾಚ್ಯ ನಿಂದನೆ-ಕ್ರಮಕ್ಕೆ ಒತ್ತಾಯ

    Published

    on

    ಮಂಡ್ಯ: ನಾಗಮಂಗಲ ತಾಲೂಕು ಹಾಲತಿ ಗ್ರಾಮದಲ್ಲಿ 374 ಎಕರೆ ಪರಿಭಾವಿತ ಅರಣ್ಯ ಪ್ರದೇಶವಿದೆ. ಈ ಪ್ರದೇಶವನ್ನು ಯಾವುದೇ ಇಲಾಖೆಗೂ ವರ್ಗಾವಣೆ ಮಾಡಿಲ್ಲ. ಅರಣ್ಯ ಪ್ರದೇಶವಾಗಿಯೇ ಉಳಿದುಕೊಂಡಿದೆ.

    ವಿವಾದವೇ ಇಲ್ಲದ ಅರಣ್ಯ ಜಮೀನಿಗೆ ಜಂಟಿ ಸರ್ವೆ ಮಾಡಿಸುವ ಅಗತ್ಯವೇನಿದೆ ಎನ್ನುವುದು ಅರಣ್ಯಾಧಿಕಾರಿಗಳ ಪ್ರಶ್ನೆಯಾಗಿದೆ. ಸುಪ್ರೀಂಕೋರ್ಟ್ ಆದೇಶಾನುಸಾರ ಅರಣ್ಯ ಪ್ರದೇಶ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ.

    ಜನಪ್ರತಿನಿಧಿಗಳಾದವರು ಇದನ್ನು ಅರ್ಥ ಮಾಡಿಕೊಳ್ಳಬೇಕೇ ವಿನಃ ಅರಣ್ಯಾಧಿಕಾರಿಗಳಿಗೆ ಧಮ್ಕಿ ಹಾಕುವಂತಹ ಕೆಳಮಟ್ಟಕ್ಕೆ ಇಳಿಯಬಾರದು. ಜನರಿಗೆ ದಿಕ್ಕು ತಪ್ಪಿಸಿ ಪ್ರಚೋದನಕಾರಿಯಾಗಿ ಮಾತನಾಡುವುದು ಸರಿಯಲ್ಲ.

    ಅರಣ್ಯಭೂಮಿ, ಸಾಗುವಳಿ ಭೂಮಿಗಳಿಗಿರುವ ವ್ಯತ್ಯಾಸಗಳನ್ನು ಜನರಿಗೆ ಅರ್ಥೈಸಿಕೊಡದೆ ಜನಪ್ರತಿನಿಧಿ ಎನ್ನುವುದನ್ನು ಮರೆತು ಗೂಂಡಾವರ್ತನೆ ಪ್ರದರ್ಶಿಸಿರುವುದಕ್ಕೆ ಅಧಿಕಾರಿ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

    ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ ಅರಣ್ಯ ಸಂರಕ್ಷಣೆಗೆ ಮುಂದಾಗಿದ್ದ ಅಧಿಕಾರಿಗಳಿಗೆ ಶಾಸಕ ಕೆ.ಸುರೇಶ್‌ಗೌಡರು ತುಚ್ಛ ಮಾತುಗಳಿಂದ ಹೀನಾಯವಾಗಿ ನಿಂದಿಸುತ್ತಾ, ಗುಂಡು ಹೊಡೆಯುವ, ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕುತ್ತಿದ್ದಾರೆ.

    ಅರಣ್ಯ ಇಲಾಖೆ ಅಧಿಕಾರಿಗಳನ್ನು ತಮ್ಮ ಗ್ರಾಮಕ್ಕೆ ಬಿಡಬೇಡಿ, ರೈತರಿಗೆ ತೊಂದರೆ ನೀಡುವ ಯಾವುದೇ ಅಧಿಕಾರಿಗೆ ಬೆಂಕಿ ಹಚ್ಚುವಂತೆ ಸುರೇಶ್ ಗೌಡ ಸ್ಥಳೀಯ ನಿವಾಸಿಗಳಿಗೆ ಸೂಚಿಸಿದ್ದಾರೆ.

    ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಶಾಸಕರು ದೌರ್ಜನ್ಯ ಎಸಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಾಸಕರ ವಿರುದ್ಧ ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪರಿಸರವಾದಿಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ಮೈಲಾರಪಟ್ಟಣ, ಹಂದೇನಹಳ್ಳಿ, ದೇವರ ಮಲ್ಲನಾಯಕನಹಳ್ಳಿ ಗ್ರಾಮಗಳಲ್ಲಿಯೂ ಇಂತಹ ಘಟನೆಗಳು ವರದಿಯಾಗುತ್ತಿದ್ದು, ಅರಣ್ಯ ಪ್ರದೇಶದಲ್ಲಿ ಗ್ರಾಮಸ್ಥರು ಮರಗಳನ್ನು ಕಡಿದು ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಅರಣ್ಯ ಸಿಬ್ಬಂದಿ ತಡೆಯಲು ಮುಂದಾದಾಗ ಸುರೇಶ್ ಗೌಡರು ಗ್ರಾಮಸ್ಥರಿಗೆ ಅಟ್ರಾಸಿಟಿ ಪ್ರಕರಣ ದಾಖಲಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

    ಶನಿವಾರ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಸಿದ್ದರಾಜು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು, ಅದನ್ನು ರಕ್ಷಿಸುವುದು ಅರಣ್ಯಾಧಿಕಾರಿಗಳ ಕರ್ತವ್ಯ. ಹೀಗಾಗಿ ಶಾಸಕರ ವಿರುದ್ಧ ದೂರು ದಾಖಲಿಸುತ್ತೇವೆ ಎಂದು ಹೇಳಿದ್ದಾರೆ.

    ಜೆಡಿಎಸ್ ಶಾಸಕರೊಬ್ಬರು ಅರಣ್ಯ ಸಿಬ್ಬಂದಿಯನ್ನು ನಿಂದಿಸಿರುವುದು ಕೇವಲ ಇದೊಂದು ಘಟನೆ ಮಾತ್ರವಲ್ಲ. ರಾಜ್ಯದಾದ್ಯಂತ ಅರಣ್ಯ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಪ್ರತಿದಿನವೂ ಕಿರುಕುಳ ಅಥವಾ ದೌರ್ಜನ್ಯವನ್ನು ಎದುರಿಸುತ್ತಾರೆ ಎಂದು ಹೇಳಿದ್ದಾರೆ.

    ಒಂದು ತಿಂಗಳಲ್ಲಿ ರಾಜಕಾರಣಿಗಳು ಮತ್ತು ಪ್ರಭಾವಿ ವ್ಯಕ್ತಿಗಳಿಂದ ಕನಿಷ್ಠ ಮೂರು ಕಿರುಕುಳ, ನಿಂದನೆ, ಸಾವು ಮತ್ತು ಅತ್ಯಾಚಾರ ಬೆದರಿಕೆ ಪ್ರಕರಣಗಳು ಬರುತ್ತವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸರ್ಕಾರಿ ನೌಕರರನ್ನು ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಿಬ್ಬಂದಿ ಆಗ್ರಹಿಸಿದ್ದಾರೆ.

    ಅರಣ್ಯ ಸೇವೆಗಳನ್ನು ಕೇಂದ್ರ ಸೇವೆಗಳ ಪಟ್ಟಿಯ ಭಾಗವನ್ನಾಗಿ ಮಾಡಬೇಕು ಎಂದು ಪಿಸಿಸಿಎಫ್‌ಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಒತ್ತಾಯಿಸಿದೆ.

    ಹೆಚ್ಚುತ್ತಿರುವ ಪ್ರಕರಣಗಳಿಂದ ಬೇಸರಗೊಂಡಿರುವ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಅರಣ್ಯ ಕರ್ತವ್ಯದ ಸಿಬ್ಬಂದಿಗೆ ತರಬೇತಿ ನೀಡುವುದರೊಂದಿಗೆ, ಅಂತಹ ಸಂದರ್ಭಗಳನ್ನು ನಿಭಾಯಿಸುವ ಬಗ್ಗೆ ನೇಮಕಾತಿ ತರಬೇತಿಯನ್ನು ಪ್ರಾರಂಭಿಸಿದ್ದಾರೆ.

    ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್‌ಎಫ್‌ಒ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸುರೇಶ್ ಗೌಡ ಸೇರಿ 10 ಜನರ ವಿರುದ್ಧ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ಅವಾಚ್ಯ ಶಬ್ಧಗಳಿಂದ ನಿಂದಿಸಿದ ವೀಡಿಯೋ ವೈರಲ್ ಆಗಿತ್ತು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending