ಕನ್ನಡ ಹಿರಿಯ ನಟ ಅನಂತ ನಾಗ್ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯನ್ನು ಸೇರಲಿದ್ದಾರೆ.
ಬೆಂಗಳೂರು: ಕನ್ನಡ ಹಿರಿಯ ನಟ ಅನಂತ ನಾಗ್ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯನ್ನು ಸೇರಲಿದ್ದಾರೆ.
ಸಂಜೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಸಚಿವ ಮುನಿರತ್ನ, ಡಾ. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ.
ಇವರ ಜೊತೆಗೆ ಇಂದು ಕೆಲವರು ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಜೆ.ಎಚ್. ಪಟೇಲ್ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ, ಶಾಸಕ, ಪರಿಷತ್ ಸದಸ್ಯರಾಗಿ ಅನಂತನಾಗ್ ಅವರು ಕಾರ್ಯನಿರ್ವಹಿಸಿದ್ದರು.
ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಖ್ಯಾತನಾಮರು, ಗಣ್ಯರು, ಕಲಾವಿದರು, ಮತ್ತು ಬೇರೆ ಪಕ್ಷದ ಅಸಂತುಷ್ಟ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ರಾಜ್ಯದ ಮೂರು ಪ್ರಮುಖ ಪಕ್ಷಗಳು ಪ್ರಯತ್ನಿಸುತ್ತಿವೆ.