DAKSHINA KANNADA
ಯಕ್ಷಗಾನದ ಹಿರಿಯ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನ..!
ಮಂಗಳೂರು : ಯಕ್ಷಗಾನದ ಹಿರಿಯ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ ಇಂದು ಬೆಳಿಗ್ಗೆ ನಿಧನರಾದರು.
ಕರ್ನಾಟಕ ಮೇಳದಲ್ಲಿ ಮಂಡೆಚ್ಚ,ಅಳಿಕೆ, ಬೋಳಾರ,ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದ ಅವರು ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ ಇತ್ಯಾದಿಗಳನ್ನು ಪಡೆದಿರುವುದಲ್ಲದೆ ಇತ್ತೀಚೆಗಷ್ಟೇ ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನೂ ಸ್ವೀಕರಿಸಿದ್ದರು.
ಯಕ್ಷಗಾನದ ಈ ಮೇರು ಕಲಾವಿದನ ನಿಧನಕ್ಕೆ ಯಕ್ಷಾಂಗಣ ಮಂಗಳೂರು ಮತ್ತು ಪುಳಿಂಚ ಪ್ರತಿಷ್ಠಾನ ಶ್ರದ್ಧಾಂಜಲಿ ಸಲ್ಲಿಸುತ್ತದೆ.
ಬೆಳ್ಳಾರೆ ಸುಬ್ಬಯ್ಯ ರೈ ಮತ್ತು ಮಂಜಕ್ಕೆ ಇವರ ನಾಲ್ವರು ಮಕ್ಕಳಲ್ಲಿ ವಿಶ್ವನಾಥ ರೈ ಒಬ್ಬರು ಇವರು 28-2-1949 ರಲ್ಲಿ
ಬೆಳ್ಳಾರೆಯಲ್ಲಿ ಜನಿಸಿದರು.
ಶಿಕ್ಷಣ 2 ನೇ ತರಗತಿ ಇಬ್ಬರು ಅಕ್ಕಂದಿರು ಒಬ್ಬಾಕೆ ತಂಗಿ. ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ ರಂಗಪ್ರವೇಶ ಮಾಡಿದರು ರಾಜನ್ ಅಯ್ಯರ್ ಮತ್ತು ಕೇಶವ ಮಾಸ್ತರ್ ಅವರಿಂದ ಭರತನಾಟ್ಯವನ್ನೂ ಅಭ್ಯಾಸ ಮಾಡಿದರು.
ಬಾಲಕನಿದ್ದಾಗಲೇ ತನ್ನ ಅಭಿನಯಕ್ಕೆ ಮಾಸ್ಟರ್ ಹಿರಣ್ಣಯ್ಯರಿಂದ ಚಿನ್ನದ ಉಂಗುರದ ಸನ್ಮಾನ ಸ್ವೀಕರಿಸಿದ್ದಾರೆ.
ಕರ್ನಾಟಕ ಮೇಳ ಒಂದರಲ್ಲೇ 35 ವರುಷಗಳ ತಿರುಗಾಟ ಮಾಡಿದ್ದಾರೆ.
ಉಳಿದಂತೆ ಮಧೂರು ಮೇಳ 1 ವರುಷ ಸುರತ್ಕಲ್ ಮೇಳ 5 ವರುಷ. ಕದ್ರಿ ಮೇಳ 2 ವರುಷ. ಬಪ್ಪನಾಡು 1 ವರುಷ. ಕುಂಟಾರು ಮೇಳ 2 ವರುಷ. ಎಡನೀರು 1 ವರುಷ ಕಟೀಲು ಮೇಳ 3 ವರುಷ ತಿರುಗಾಟ ಮಾಡಿದ್ದಾರೆ.
ಇವರು ಅಲ್ಪ ಕಾಲದ ಅನಾರೋಗ್ಯದಿಂದ ಕಳೆದ ರಾತ್ರಿ ಬೆಳ್ಳಾರೆಯ ಸ್ವಗ್ರಹದಲ್ಲಿ ಇಹಲೋಕ ತ್ಯಜಿಸಿದರು ಇಂದು ಮದ್ಯಾಹ್ನ ಅವರ ಪಾರ್ಥಿವ ಶರೀರದ ಅಂತ್ಯ ಕ್ರಿಯೆ ಬೆಳ್ಳಾರೆಯಲ್ಲಿ ಜರಗಲಿದೆ..
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!