Connect with us

    LATEST NEWS

    ಹಿರಿಯ ಪತ್ರಕರ್ತ ಜಯಕರ ಸುವರ್ಣ ಇನ್ನಿಲ್ಲ

    Published

    on

    ಉಡುಪಿ : ಹಿರಿಯ ಪತ್ರಕರ್ತ ಜಯಕರ ಸುವರ್ಣ ಹೃದಯಾ*ಘಾತದಿಂದ ನಿನ್ನೆ ಇಹಲೋಕ ತ್ಯಜಿಸಿದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಅವರು ಕಲ್ಮಾಡಿಯಲ್ಲಿರುವ ಸ್ವಗೃಹದಲ್ಲಿ ನಿಧ*ನರಾದರು.

    ಜಯಕರ ಸುವರ್ಣ ದೂರದರ್ಶನ ಉಡುಪಿ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ಯುತ್ತಮ ಛಾಯಾಗ್ರಾಹಕರಾಗಿದ್ದ ಅವರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

    ಎಲ್ಲರ ನೆಚ್ಚಿನ ‘ಜಯಣ್ಣ’ ಆಗಿದ್ದ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಆರ್‌ಬಿಐ ಗವರ್ನರ್‌ ಶಕ್ತಿದಾಸ್‌ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    Published

    on

    ಚೆನ್ನೈ: ಭಾರತೀಯ ರಿಸರ್ವ್​ ಬ್ಯಾಂಕ್​ನ ಗವರ್ನರ್ ಶಕ್ತಿಕಾಂತ್​ ದಾಸ್​ಗೆ ಅನಾರೋಗ್ಯ ಉಂಟಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಶಕ್ತಿಕಾಂತ್ ದಾಸ್​ ಅವರಿಗೆ ಆ್ಯಸಿಡಿಟಿ ಸಮಸ್ಯೆಯಾಗಿದ್ದು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 23 ಗಂಟೆಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    1960 ರ ನಂತರ ಸುದೀರ್ಘ ಸೇವೆ ಸಲ್ಲಿಸಿದ RBI ಮುಖ್ಯಸ್ಥರೆಂಬ ಖ್ಯಾತಿ ಗಳಿಸಿದ್ದಾರೆ. ಅವರ ನಾಯಕತ್ವದಲ್ಲಿ, RBI ಹಣದುಬ್ಬರದ ಒತ್ತಡಗಳು ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಗಳು ಸೇರಿದಂತೆ ವಿವಿಧ ಆರ್ಥಿಕ ಸವಾಲುಗಳನ್ನು ನ್ಯಾವಿಗೇಟ್ ಮಾಡಿದೆ.

    ಶಕ್ತಿಕಾಂತ್​ ದಾಸ್​ ಅವರನ್ನು RBI ಗವರ್ನರ್‌ ಆಗಿ ಮೂರು ವರ್ಷದ ಅವಧಿಗೆ ಕೇಂದ್ರ ಸರ್ಕಾರ 2021ರಲ್ಲಿ ಮರು ನೇಮಕ ಮಾಡಿತ್ತು.ಶಕ್ತಿಕಾಂತ ದಾಸ್‌ರವರು 2018ರ ಡಿಸೆಂಬರ್‌ನಲ್ಲಿ RBI ಗವರ್ನರ್‌ ಆಗಿ ನೇಮಕಗೊಂಡಿದ್ದರು. ಇದೇ ಡಿಸೆಂಬರ್‌ಗೆ ಅವರ ಅಧಿಕಾರವಧಿ ಮುಕ್ತಾಯವಾಗಲಿದ್ದ ಹಿನ್ನೆಲೆಯಲ್ಲಿ ಅವರನ್ನು ಮರುನೇಮಕ ಮಾಡಲಾಗಿತ್ತು.ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿಗೆ RBI ಗವರ್ನರ್‌ ಆಗಿ ನೇಮಕಗೊಂಡ ಮೊದಲ ವ್ಯಕ್ತಿ ಶಕ್ತಿಕಾಂತ ದಾಸ್ ಆಗಿದ್ದಾರೆ.

    Continue Reading

    LATEST NEWS

    ಮಧ್ಯಪ್ರದೇಶದಲ್ಲಿ ಸ್ಫೋಟ – 3 ಮನೆಗಳು ಕುಸಿದು ಇಬ್ಬರು ಸಾ*ವು

    Published

    on

    ಮೊರೆನಾ: ಮಧ್ಯಪ್ರದೇಶದ ಮೊರೆನಾ ನಗರದಲ್ಲಿ ಮಧ್ಯರಾತ್ರಿಯ ಸುಮಾರಿಗೆ ಮೂರು ಮನೆಗಳು ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ರಾಥೋಡ್ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಹೇಳಿದ್ದಾರೆ.

    ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಫೋರೆನ್ಸಿಕ್ ತಂಡವೂ ಸ್ಥಳದಲ್ಲಿದೆ ಎಂದು ಅವರು ಹೇಳಿದ್ದಾರೆ.

    Continue Reading

    BIG BOSS

    BBK 11: ಮೋಕ್ಷಿತಾ ಎರಡು ತಲೆ ನಾಗರಹಾವು: ಗುಡುಗಿದ ತ್ರಿವಿಕ್ರಮ್

    Published

    on

    ದೊಡ್ಮನೆ ಇದೀಗ ಬಿಗ್ ಬಾಸ್ ಸಾಮ್ರಾಜ್ಯವಾಗಿ ಬದಲಾಗಿದೆ. ಉಗ್ರಂ ಮಂಜು ರಾಜನಾಗಿ ಮನೆಯನ್ನು ಆಳುತ್ತಿದ್ದಾರೆ. ಮಂಜು ಸಾಮ್ರಾಜ್ಯದಲ್ಲಿ ಬಿಗ್ ಬಾಸ್ ನಾಮಿನೇಷನ್ ವಿಭಿನ್ನವಾಗಿದೆ ನಡೆದಿದೆ. ಈ ವೇಳೆ, ಮೋಕ್ಷಿತಾಗೆ ತ್ರಿವಿಕ್ರಮ್ ಎರಡು ತಲೆ ನಾಗರಹಾವು ಎಂದು ಗುಡುಗಿದ್ದಾರೆ.

    ಬಿಗ್ ಬಾಸ್ ಮನೆಯಲ್ಲಿರುವ ಪ್ರಜೆಯ ಫೋಟೋವನ್ನು ಬಾಣದಿಂದ ಚುಚ್ಚಿ ಮನೆಯ ಮುಖ್ಯದ್ವಾರದಿಂದ ಹೊರಹೋಗುವಂತೆ ಹೊಡೆದು ನಾಮಿನೇಟ್ ಮಾಡಬೇಕು ಎಂದು ಬಿಗ್ ಬಾಸ್ ನಿಯಮ ಹೇಳಿರುತ್ತಾರೆ. ಅದರಂತೆ ಮೋಕ್ಷಿತಾ ಪೈ ಅವರು ನಾಮಿನೇಷನ್‌ಗೆ ಭವ್ಯ ಗೌಡ ಹಾಗೂ ತ್ರಿವಿಕ್ರಮ್ ಹೆಸರನ್ನು ಹೇಳುತ್ತಾರೆ. ಮಂಜು ಮುಂದೆ ತ್ರಿವಿಕ್ರಮ್ ಬಿಲ್ಡಪ್ ಕೊಡುತ್ತಾರೆ. ಆಚೆ ಬಂದ್ಮೇಲೆ ಅದೇ ಮಂಜು ಬಗ್ಗೆ ಏನೂ ಅಲ್ಲ ಎನ್ನುತ್ತಾರೆ ಎಂದು ಮೋಕ್ಷಿತಾ ಕಾರಣ ಹೇಳ್ತಾರೆ. ಅದಕ್ಕೆ, ಉಗ್ರಂ ಮಂಜು, ಅದು ನಂಬಿಕೆ ದ್ರೋಹ ಎಂದು ಕೂಗಾಡಿದ್ದಾರೆ.

    ನಂತರ ತ್ರಿವಿಕ್ರಮ್ ತಮ್ಮನ್ನು ಸಮರ್ಥಿಸಿಕೊಂಡು, ನಾನು ಇವರನ್ನು ಮ್ಯಾನಿಪುಲೇಟ್ ಮಾಡುತ್ತಿಲ್ಲ. ನಿಜವಾಗಿಯೂ ಮಾಡ್ತಿರೋದು ಇವರು. ಅದಕ್ಕೆ ಸಿಟ್ಟಿಗೆದ್ದ ಉಗ್ರಂ ಮಂಜು, ಮಾತು ಬರುತ್ತದೆ ಎಂದು ನೀವು ಮಾತನಾಡಬೇಡಿ ಎನ್ನುತ್ತಾರೆ. ಆಗ ನನ್ನನ್ನು ಗೋಮುಖ ವ್ಯಾಘ್ರ ಎನ್ನುತ್ತಾರೆ. ನಿಜವಾಗಿಯೂ ಇವರು ಎರಡು ತಲೆ ನಾಗರಹಾವು ಎಂದು ಮೋಕ್ಷಿತಾ ವಿರುದ್ಧ ತ್ರಿವಿಕ್ರಮ್ ರೊಚ್ಚಿಗೆದ್ದಿದ್ದಾರೆ.

    Continue Reading

    LATEST NEWS

    Trending