ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಹೃದಯಾಘಾತದಿಂದ ತಡರಾತ್ರಿ ಬೆಂಗಳೂರಿನ ಕಾವಲ್ಭೈರಸಂಧ್ರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಅವರಿಗೆ 73 ವರ್ಷ ವಯಸ್ಸಾಗಿತ್ತು. ಸುಮಾರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಮನ್ದೀಪ್ ಅವರು ಮೂಲತಃ ಮುಂಬೈಯವರು.
ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದ ಅವರನ್ನು ಶಂಕರ್ ನಾಗ್ ಮತ್ತು ಅನಂತ್ ನಾಗ್ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು.
ಶಂಕರ್ ನಾಗ್ ರ ‘ಮಿಂಚಿನ ಓಟ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ಬಣ್ಣಹಚ್ಚಿದ ಅವರು ಮಿಂಚಿದ್ದರು. ಡಾ.ರಾಜ್ಕುಮಾರ್ ಸೇರಿದಂತೆ ಅನೇಕ ದಿಗ್ಗಜ ನಟರ ಸಿನೆಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ.
ಕಳೆದ ಡಿಸೆಂಬರ್ನಲ್ಲಿ ಹೃದಯಾಘಾತವಾಗಿತ್ತು, ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್ ತಪ್ಪಾ, ಏಳು ಸುತ್ತಿನ ಕೋಟೆ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ ಸೇರಿದಂತೆ ಅನೇಕ ಸಿನೆಮಾಗಳಲ್ಲಿ ಮನ್ದೀಪ್ ರಾಯ್ ನಟಿಸಿದ್ದಾರೆ.