Home ಪ್ರಮುಖ ಸುದ್ದಿ ಕನ್ನಡದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಇನ್ನಿಲ್ಲ

ಕನ್ನಡದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಇನ್ನಿಲ್ಲ

ಕನ್ನಡದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಇನ್ನಿಲ್ಲ

ಕನ್ನಡದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವಾರು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿರಿಯ ನಟಿ ಬೆಂಗಳೂರಿನ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ಜನವರಿ 18ರಂದು ಕೊನೆಯುಸಿರೆಳೆದಿದ್ದಾರೆ. ಮೂಲತಃ ರಂಗಭೂಮಿ ಕಲಾವಿದೆಯಾಗಿದ್ದ ಕಿಶೋರಿ ಬಲ್ಲಾಳ್ ಅವರು, ಹಲವಾರು ಭಾಷೆಯ ಸಿನಿಮಾ ಹಾಗೂ ಜಾಹೀರಾತುಗಳಲ್ಲಿ ಅಭಿನಯಿಸಿದ್ದರು.

1960ರಲ್ಲಿ ‘ಇವಳೆಂಥಾ ಹೆಂಡತಿ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪ್ರವೇಶ ಮಾಡಿದ್ದ ಕಿಶೋರಿ ಬಲ್ಲಾಳ್, ಸುಮಾರು 75ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ಹೆಸರಾಂತ ನಿರ್ದೇಶಕರು ಮತ್ತು ನಟರ ಜೊತೆಗೆ ಕೆಲಸ ಮಾಡಿದ್ದಾರೆ. ವೀರಬಾಹು, ಹನಿ ಹನಿ, ಶಿವಗಾಮಿ, ಸೂರ್ಯಕಾಂತಿ, ನಾನಿ, ಕಹಿ, ಅಕ್ಕ ತಂಗಿ, ನನ್ನುಸಿರೇ, ಹಿಂದಿ ಸಿನಿಮಾ ‘ಸ್ವದೇಶ್’ ಸೇರಿದಂತೆ ಸುಮಾರು ಚಿತ್ರಗಳಲ್ಲಿ ನಟಿಸಿದ್ದಾರೆ.

ಕಿಶೋರಿ ಬಲ್ಲಾಳ್ ಅವರು ಮೂಲತಃ ಉಡುಪಿಯವರಾಗಿದ್ದು, ಮುಂದೆ 1950ರಲ್ಲಿ ಭರತನಾಟ್ಯ ಕಲಾವಿದ ರಂಗಕರ್ಮಿ ಶ್ರೀಪತಿ ಬಲ್ಲಾಳರ ಜೊತೆ ಮದುವೆಯಾದರು. ಇವರ ಪತಿ ಶ್ರೀಪತಿ ಬಲ್ಲಾಳ್ ಅವರು ಈ ಹಿಂದೆಯೇ ನಿಧನರಾಗಿದ್ದರು.

 

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...