Connect with us

    DAKSHINA KANNADA

    ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಹೃದಯಾಘಾ*ತದಿಂದ ನಿ*ಧನ

    Published

    on

    ಮಂಗಳೂರು : ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಇಂದು(ಜುಲೈ 5) ಹೃದಯಘಾ*ತದಿಂದ ಇಹಲೋಕ ತ್ಯಜಿಸಿದ್ದಾರೆ.
    ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ನಾಯ್ಕಾಪು ಕುಂಬಳೆ ಶ್ರೀಧರ ರಾಯರ ಹುಟ್ಟೂರು. 1948ನೇ ಜುಲೈ 23 ರಂದು ಮಾಲಿಂಗ ಮುಕಾರಿ ಮತ್ತು ಕಾವೇರಿ ಅಮ್ಮ ದಂಪತಿ ಮಗನಾಗಿ ಜನಿಸಿದರು.


    ತೆ೦ಕುತಿಟ್ಟಿನ ಅಪ್ರತಿಮ ಸ್ತ್ರೀವೇಷಧಾರಿಯಾಗಿ ಜನಪ್ರಿಯರಾಗಿದ್ದ ಕುಂಬಳೆ ಶ್ರೀಧರ್ ರಾವ್ ಅವರು ದಮಯಂತಿ, ದಾಕ್ಷಾಯಿಣಿ, ಅಮ್ಮು ಬಲ್ಲಾಳ್ತಿ, ಲಕ್ಷ್ಮಿ, ಸುಭದ್ರೆ, ಸತ್ಯಭಾಮೆ ಅಲ್ಲದೆ ಪ್ರಮೀಳೆ, ಶಶಿಪ್ರಭೆ ಮೊದಲಾದ ಪಾತ್ರಗಳ ಮೂಲಕ ಜನಮನಸೂರೆಗೊಂಡಿದ್ದರು. ಪುರುಷ ವೇಷಧಾರಿಯಾಗಿಯೂ ಪ್ರಸಿದ್ಧರಾಗಿದ್ದರು. ಇರಾ, ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಶ್ರೀಧರ್ ರಾವ್ ಸೇವೆ ಸಲ್ಲಿಸಿದ್ದು, ಧರ್ಮಸ್ಥಳ ಮೇಳದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ತಿರುಗಾಟ ಮಾಡಿದ್ದರು.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!

    ಮೃ*ತರು ಪತ್ನಿ, ನಿವೃತ್ತ ಶಿಕ್ಷಕಿ ಸುಲೋಚನಾ, ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

    DAKSHINA KANNADA

    ಅಲ್ಪಕಾಲದ ಅಸೌಖ್ಯದಿಂದ ಉಳ್ಳಾಲ ಖಾಝಿ ಸ್ವರ್ಗಸ್ಥ

    Published

    on

    ಮಂಗಳೂರು : ಉಳ್ಳಾಲದ ಖಾಝಿ ಸಯ್ಯದ ಫಝಲ್ ಕೋಯಮ್ಮ ತಂಙಳ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಹಲೋಕ ತ್ಯಜಿಸಿದಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ಕಣ್ಣೂರಿನ ತಮ್ಮ ನಿವಾಸದಲ್ಲಿ ಇಂದು(ಜು.8) ಮುಂಜಾನೆ ಖಾಝಿ ಅವರು ಸ್ವರ್ಗಸ್ಥರಾಗಿದ್ದಾರೆ ಎಂದು ಕುಟುಂಬ ವಲಯ ಮಾಹಿತಿ ನೀಡಿದೆ.

    ಮೂಲತಃ ಕಣ್ಣೂರಿನ ಇಟ್ಟಿಕುಳಂ ನಿವಾಸಿಯಾಗಿದ್ದ ಖಾಝಿಯವರು ಕೂರ ತಂಙಳ್‌ ಎಂದೇ ಪ್ರಸಿದ್ಧಿಯನ್ನು ಪಡೆದುಕೊಂಡಿದ್ದರು. ಬಹಳಷ್ಟು ವರ್ಷಗಳ ಹಿಂದೆ ಕಾಣಿಯೂರು ಸಮೀಪದ ಕೂರ ಎಂಬಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ‘ಕೂರ ತಂಙಳ್‌’ ಎಂದು ಹೆಸರು ಪಡೆದುಕೊಂಡಿದ್ದರು. ಬಳಿಕ ಉಳ್ಳಾಲ ಖಾಝಿಯಾಗಿ ನೇಮಕವಾದ ಬಳಿಕ ಉಳ್ಳಾಲದಲ್ಲಿ ನೆಲೆಸಲು ಆರಂಭಿಸಿದ ಅವರು ಕೆಲ ಸಮಯದ ಹಿಂದೆ ಅಸ್ವ*ಸ್ಥರಾಗಿದ್ದರು.

    ಇದನ್ನು ಓದಿ : ಚಿರತೆ ಸೆರೆ ಹಿಡಿಯುವಲ್ಲಿ ವಿಫಲವಾದ ಅರಣ್ಯ ಇಲಾಖೆ; ಗ್ರಾಮಸ್ಥರು ಏನು ಮಾಡಿದ್ರು ಗೊತ್ತಾ!?

    ಸ್ವರ್ಗಸ್ಥರಾದ ಖಾಝಿ ಅವರು ಪತ್ನಿ ಹಾಗೂ ಮಕ್ಕಳು ಸೇರಿದಂತೆ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇಂದು ರಾತ್ರಿ 9 ಗಂಟೆಗೆ ಕೂರ ಮಸೀದಿಯ ವಠಾರದಲ್ಲಿ ದಫನ ಕಾರ್ಯ ನಡೆಯಲಿದ್ದು, ಸಂಜೆ 5 ಗಂಟೆಗೆ ಮಸೀದಿಯಲ್ಲಿ ಸ್ವರ್ಗಸ್ಥರ ಸದ್ಗತಿಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ. ಈ ಪ್ರಾರ್ಥನೆಯಲ್ಲಿ ಸುಲ್ತಾನುಲ್ ಉಲೇಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಭಾಗವಹಿಸುವ ನಿರೀಕ್ಷೆ ಇದೆ.

     

     

     

    Continue Reading

    DAKSHINA KANNADA

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ : ಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರ

    Published

    on

    ಉಪ್ಪಿನಂಗಡಿ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಉಪ್ಪಿನಂಗಡಿ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ (ರಿ), ಜೇಸಿಐ ಉಪ್ಪಿನಂಗಡಿ ಇವರ ಜಂಟಿ ಸಹಯೋಗದೊಂದಿಗೆ ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್, ದೇರಳಕಟ್ಟೆ ಇವರ ವೈದರ ತಂಡದವರಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉಪ್ಪಿನಂಗಡಿ ಎಚ್. ಎಮ್.ಆಡಿಟೋರಿಯಂನಲ್ಲಿ ಜರುಗಿತು.

    ಈ ಕಾರ್ಯಕ್ರಮವನ್ನು ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ನಿ. ಇದರ ಅಧ್ಯಕ್ಷ ಕೆ.ವಿ.ಪ್ರಸಾದ್‌ರವರು ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರ ಆರೋಗ್ಯದ ದೃಷ್ಟಿಯಿಂದ ಇಂತಹ ಶಿಬಿರಗಳನ್ನು ಆಯೋಜಿಸಿ ಕಾಳಜಿ ಮಾಡುತ್ತಿರುವುದು ಶ್ಲಾಘನೀಯ ಎಂದರು.

    ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಮಾತನಾಡಿ, ಹಲಸು ಹಬ್ಬದ ಕಾರ್ಯಕ್ರಮದ ಜೊತೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇದರ ಸಹಭಾಗಿತ್ವದೊಂದಿಗೆ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರ ಜನರಿಗೆ ಅನುಕೂಲವಾಗಲಿ. ಇದು ಜೇಸಿಐ ಸಂಸ್ಥೆಗೂ ಕೂಡ ಹೆಮ್ಮೆ ಎಂದು ತಿಳಿಸಿದರು.

    ಈ ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಇದರ ಅಧ್ಯಕ್ಷ ಲವೀನ ಪಿಂಟೋ ಮಾತನಾಡಿ, ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಗ್ರಾಮೀಣ ಭಾಗದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಸಂಘವು ಇನ್ನು ಹೆಚ್ಚು ಹೆಚ್ಚು ಶಿಬಿರ ಗ್ರಾಮೀಣ ಪ್ರದೇಶಗಳಲ್ಲಿ ನಡೆಸಲಿ ಹಾಗೂ ಇನ್ನಷ್ಟು ಜನರು ಇದರ ಪ್ರಯೋಜನ ಪಡೆಯುವಂತಗಲಿ ಎಂದು ಶುಭ ಹಾರೈಸಿದರು.

    ಅದ್ವಿಕ್ ದಂತ ಕ್ಲಿನಿಕ್ ಇದರ ದಂತ ವೈದ್ಯ ಡಾ|| ಆಶಿತ್ ಎಮ್.ವಿ. ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರ ವಲ್ಲದೆ, ಉಚಿತ ವೈದ್ಯಕೀಯ ಶಿಬಿರದ ಜೊತೆಗೆ ಇಂತಹುದೇ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದು ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್, ದೇರಳಕಟ್ಟೆ ಇದರ ವೈದ್ಯರಾದ ಡಾ|| ಜೈನುದ್ದೀನ್ ಮಾತನಾಡಿ, ಕಣಚೂರು ಆಯುರ್ವೇದ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ಯನ್ನು ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದೆ. ಗ್ರಾಮೀಣ ಭಾಗದಲ್ಲಿ ಕೃಷಿ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಘವು ಕೃಷಿ ಮೇಳ ಹಾಗೂ ಹಲಸಿನ ಹಬ್ಬದಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಉಪ್ಪಿನಂಗಡಿ ಪರಿಸರದ ಸದಸ್ಯರ ಸಹಕಾರದಿಂದಾಗಿ ಉಪ್ಪಿನಂಗಡಿ ಶಾಖೆಯು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ಸಹಕಾರವಿರಲಿ ಹಾಗೆಯೇ ಇಂದಿನ ಈ ಶಿಬಿರವು ಸಾರ್ವಜನಿಕರಿಗೆ ಉಪಯುಕ್ತವಾಗಲಿ ಎಂದು ಹೇಳಿದರು.

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಶಿಬಿರಾರ್ಥಿಗಳಿಗೆ ಉಚಿತ ಔಷದಿ ವಿತರಣೆ, ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಶಿಬಿರಗಳಲ್ಲಿ ಒಟ್ಟು ೧೫೦೦೦ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಸಂಘದ ಸ್ವಂತ ಮಾಲಿಕತ್ವದ ನೂತನ ೩೩ನೇ ಶಾಖೆಯು ಜುಲೈ ೧೫ರಂದು ಕೃಷ್ಣಾಪುರದಲ್ಲಿ ಸಾರ್ವಜನಿಕ ಸೇವೆಗಾಗಿ ಶುಭಾರಂಭಗೊಳ್ಳಲಿದೆ.

    ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮನಾಥ್ ಸನಿಲ್, ಗೋಪಾಲ್ ಎಂ, ಚಂದ್ರಾವತಿ, ಮೂರ್ತೆದಾರರ ಸೇವಾ ಸಹಕಾರಿ ಸಂಘ, ಉಪ್ಪಿನಂಗಡಿ ಇದರ ಅಧ್ಯಕ್ಷ ಅಜಿತ್ ಪಾಲೇರಿ, ಜೇಸಿಐ ವಲಯ ನಿರ್ದೇಶಕ ಭರತ್ ಶೆಟ್ಟಿ ಮತ್ತಿತರರು ಉಪಸ್ಧಿತರಿದ್ದರು.

    ಇದನ್ನೂ ಓದಿ : ಕೇರಳದಲ್ಲಿ ಅಮೀಬಾ ಸೋಂಕಿಗೆ ನಾಲ್ಕು ಮಕ್ಕಳು ಬಲಿ..! ದ.ಕ ಜಿಲ್ಲೆಯಲ್ಲೂ ಹೈ ಅಲರ್ಟ್..!

    ಕಾರ್ಯಕ್ರಮದಲ್ಲಿ ಸುಮಾರು ೧೬೦ ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ಇವರು ಸ್ವಾಗತಿಸಿ, ಶಾಖಾಧಿಕಾರಿ ಭವ್ಯ ವಂದಿಸಿದರು. ಶಾಖಾಧಿಕಾರಿ ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ ಕವಿತಾ.ಐ ನಡೆಸಿದರು.

    Continue Reading

    DAKSHINA KANNADA

    ಕಡಬ: ಕುಮಾರಧಾರ ನದಿ ಮಧ್ಯೆ ಸಿಲುಕಿದ್ದ ಯುವಕನ ರಕ್ಷಣೆ

    Published

    on

    ಕಡಬ: ಯುವಕನೋರ್ವ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಸಿಲುಕಿ, ಸಹಾಯಕ್ಕಾಗಿ ಬೊಬ್ಬೆ ಹಾಕುತ್ತಿರುವ ದೃಶ್ಯ ಇಲ್ಲಿನ ಪುಳಿಕುಕ್ಕು ಎಂಬಲ್ಲಿ ಸೋಮವಾರ ಬೆಳಗ್ಗೆ ಕಂಡುಬಂದಿತ್ತು. ಬಳಿಕ ಅಗ್ನಿಶಾಮಕ ದಳ ಆತನನ್ನು ರಕ್ಷಿಸಿದೆ.

    ಪುಳಿಕುಕ್ಕುವಿನಲ್ಲಿ ಕುಮಾರಧಾರ ನದಿ ಬಹುತೇಕ ತುಂಬಿ ಹರಿಯುತ್ತಿದೆ. ಈ ಮಧ್ಯೆ ಇಂದು ಬೆಳಗ್ಗೆ ಯುವಕನೋರ್ವ ನದಿಯಲ್ಲಿ ಪೊದೆಗಳನ್ನು ಹಿಡಿದು ರಕ್ಷಿಸುವಂತೆ ಬೊಬ್ಬೆ ಹಾಕುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

    ಅದರಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗೆ ಯುವಕನನ್ನು ನದಿಯಿಂದ ಮೇಲೆತ್ತಿ ರಕ್ಷಿಸಿದ್ದಾರೆ. ಬಳಿಕ ಆತನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ನದಿಯಲ್ಲಿ ಸಿಲುಕಿದ್ದ ಯುವಕನನ್ನು ಮೂಲತಃ ಬೆಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಆತನಿಗೆ ಸೇರಿದ್ದೆನ್ನಲಾದ ಬ್ಯಾಗ್ ಪುಳಿಕುಕ್ಕು ಬಸ್ ನಿಲ್ದಾಣದ ಬಳಿ ದೊರೆತಿದೆ.

    ಆತ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

    Continue Reading

    LATEST NEWS

    Trending