ಉಡುಪಿ : ಕೊಲ್ಲೂರು ಪ್ರಾಥಮಿಕ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಡಾ. ವಿವೇಕಾನಂದ ಶೆಟ್ಟಿ (57) ಪಶು ಚಿಕಿತ್ಸಾಲಯದಲ್ಲೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾರೆ.
ಡಾ. ವಿವೇಕಾನಂದ ಶೆಟ್ಟಿ ಕೊಲ್ಲೂರು ಪ್ರಾಥಮಿಕ ಪಶು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿದ್ದರು.
ವಿಪರೀತ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರು. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ.
ವೈಯಕ್ತಿಕ ಕಾರಣಗಳಿಂದ ಅಥವಾ ಇತರ ಯಾವುದೋ ವಿಷಯಗಳಿಗೆ ಆತ್ಮಹತ್ಯೆ ಮಾಡಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕೊಲ್ಲೂರು ಪ್ರಾಥಮಿಕ ಪಶು ಆಸ್ಪತ್ರೆಯಲ್ಲಿ ಯಾರೂ ಇಲ್ಲದ ಸಮಯ ಒಳಗಿನಿಂದ ಚಿಲಕ ಹಾಕಿಕೊಂಡು ಆಸ್ಪತ್ರೆಯ ಸ್ಟಾಕ್ ರೂಂ ನಲ್ಲಿ ಬ್ಲೆಡ್‌ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.