DAKSHINA KANNADA
ಗೋಶಾಲೆಗಳ ನಿರ್ವಹಣೆಗೆ ಮುಖ್ಯಮಂತ್ರಿಗಳಲ್ಲಿ ಅನುದಾನದ ಬೇಡಿಕೆ ಇಟ್ಟ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದ ನಿಯೋಗ
ಮಂಗಳೂರು: ಗೋಶಾಲೆಗಳ ನಿರ್ವಹಣೆಗೆ ಅನುದಾನ ಹೆಚ್ಚಿಸಬೇಕು ಹಾಗೂ ಇತರ ಬೇಡಿಕೆಗಳ ಉದ್ದೇಶದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಹಾಗೂ ವಿಹಿಂಪ ನಿಯೋಗ ಮುಖಂಡರು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯಾ ನಿಷೇಧ ಕಾನೂನನ್ನು ಪೊಲೀಸ್ ಇಲಾಖೆ ಸಮರ್ಪಕವಾಗಿ ಅನುಷ್ಟಾನಕ್ಕೆ ತರಬೇಕು. ಅಕ್ರಮ ಗೋಸಾಗಾಟ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು.
ಗೋಮಾಳದ ಜಾಗವನ್ನು ಅದೇ ಉದ್ದೇಶಕ್ಕೆ ಬಳಸಬೇಕು ಎಂದು ಸಿಎಂಗೆ ಮನವಿಯನ್ನು ಸಲ್ಲಿಸಲಾಯಿತು.
ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಯವರು ಆದಷ್ಟು ಶೀಘ್ರವಾಗಿ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದರು.
ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ್ಯ ಕಾರ್ಯಾಧ್ಯಕ್ಷ ಪ್ರೊ. ಎಂ ಬಿ ಪುರಾಣಿಕ್, ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.
DAKSHINA KANNADA
‘ನಾಟು ನಾಟು’ ರೀತಿಯ ಸಾಂಗ್..! ಕುತೂಹಲ ಮೂಡಿಸಿದ ‘ವಾರ್ 2’
2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್ಟಿಆರ್ ಜೊತೆಯಾಗಿದ್ದಾರೆ.
ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್ ರಾಜ್ ಫಿಲಂಸ್ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್ಟಿಆರ್ ಅವರ ಆಸ್ಕರ್ ಅವಾರ್ಡ್ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್ಟಿಆರ್ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.
ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!