Connect with us

DAKSHINA KANNADA

SDPI – PFI ನಿಷೇಧಿಸಿ ಹರ್ಷ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ : ಭುಜಂಗ ಕುಲಾಲ್

Published

on

ಮಂಗಳೂರು : ಶಿವಮೊಗ್ಗದ ಕೋಟೆ ಪ್ರಖಂಡ ಬಜರಂಗದಳ ದ ಸಹ ಸಂಯೋಜಕ ಹರ್ಷ ಅವರನ್ನು ಮತಾಂಧ ದುಷ್ಕರ್ಮಿಗಳು ನಿನ್ನೆ ರಾತ್ರಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ಸಂಗತಿ.

ಕಳೆದ ಹಲವಾರು ವರ್ಷಗಳಿಂದ ವ್ಯವಸ್ಥಿತವಾಗಿ ಹಿಂದೂಗಳ ಮಾರಣ ಹೋಮ ಮಾಡುತ್ತಿದ್ದಾರೆ.

ಕಳೆದ ಎರೆಡು ತಿಂಗಳ ಹಿಂದೆ ತುಮಕೂರು ಜಿಲ್ಲಾ ಬಜರಂಗದಳ ಸಂಯೋಜಕ ಮಂಜು ಭಾರ್ಗವ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು,

ಶಿವಮೊಗ್ಗದ ನಾಗೇಶ್ ಎನ್ನುವವರ ಮೇಲೆ ಹಲ್ಲೆ ಮಾಡಿದ್ದರು,ಪ್ರಶಾಂತ್ ಪೂಜಾರಿ, ಮಡಿಕೇರಿಯ ವಿಹಿಂಪ್ ಮುಖಂಡರಾದ ಕುಟ್ಟಪ್ಪ,ಬೆಂಗಳೂರಿನ ರುದ್ರೇಶ್ ಹೀಗೆ ಹಲವಾರು ಮುಗ್ದ ಹಿಂದೂಗಳ ಹತ್ಯೆ ಮಾಡಿದ್ದಾರೆ.

ಕೇರಳದಿಂದ ಬಂದು ಇಲ್ಲಿ ಹತ್ಯೆ ಮಾಡುತ್ತಿದ್ದಾರೆ. ಹಿಂದೂ ಸಮಾಜದಲ್ಲಿ ಸಾಮರಸ್ಯ ಕೆಡಿಸುತ್ತಾ ,ದೇಶದ್ರೋಹ,ಭಯೋತ್ಪಾದನೆ ಕೆಲಸ ಮಾಡುತ್ತಿರುವ SDPI ಮತ್ತು PFI ನ್ನು ನಿಷೇಧಿಸಬೇಕು.

ಈ ಒಂದು ಪ್ರಕರಣವನ್ನು ಸರ್ಕಾರ NIA ತನಿಖೆಗೆ ಒಪ್ಪಿಸಬೇಕು. ಆದಷ್ಟು ಬೇಗ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂದಳ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಉಡುಪಿ ಮತ್ತು ಕೊಡಗು ಜಿಲ್ಲಾ ಕೇಂದ್ರಗಳಲ್ಲಿ 23 ಫೆಬ್ರವರಿ ಬುಧವಾರ ಬೆಳಿಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷದ್ ಬಜರಂದಳ ಮಂಗಳೂರು  ವಿಭಾಗ ಸಂಯೋಜಕ್ ಭುಜಂಗ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending