Wednesday, October 20, 2021

 ವಿಟ್ಲ: ಒಂಟಿ ಮಹಿಳೆ ಮೇಲೆ ಹಲ್ಲೆ ಚಿನ್ನಾಭರಣ ದೋಚಿ ಪರಾರಿಯಾದ  ದುಷ್ಕರ್ಮಿಗಳು..!

 ವಿಟ್ಲ: ಒಂಟಿ ಮಹಿಳೆ ಮೇಲೆ ಹಲ್ಲೆ ಚಿನ್ನಾಭರಣ ದೋಚಿ ಪರಾರಿಯಾದ  ದುಷ್ಕರ್ಮಿಗಳು

ವಿಟ್ಲ: ಒಂಟಿ ಮಹಿಳೆ ಮನೆಯಲ್ಲಿದ್ದ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿ, ಚಿನ್ನಾಭರಣಗಳನ್ನು ದೋಚಿದ ಘಟನೆ ಇಂದು ಮಧ್ಯಾಹ್ನ ವಿಟ್ಲ ಸಮೀಪದ ಕಾಂತಡ್ಕದಲ್ಲಿ ನಡೆದಿದೆ.

ಕಾಂತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಆಟೋ ಚಾಲಕ ರಫೀಕ್ ಇಂದು ಶುಕ್ರವಾರವಾದ ಹಿನ್ನೆಲೆ ಮಸೀದಿಗೆ ತೆರಳಿದ್ದರು.

ಅವರ ಜೊತೆಗೆ 10 ವರ್ಷದ ಅವರ ಮಗ ಕೂಡ ತೆರಳಿದ್ದ. ಅವರ ಪತ್ನಿ ಜೈನಾಬಿ ಅವರು ಒಬ್ಬರೇ ಮನೆಯಲ್ಲಿದ್ದರು. ಈ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರನ್ನು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ ದರೋಡೆ ಮಾಡಿದ್ದಾರೆ. ಅಲ್ಲದೇ ಹಲ್ಲೆ ಕೂಡ ನಡೆಸಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...