Connect with us

bangalore

ರಾತ್ರಿ ಹೊತ್ತು ಬೊಗಳುತ್ತವೆ ಎಂದು 10 ಶ್ವಾನಗಳನ್ನು ವಿಷವಿಟ್ಟು ಸಾಯಿಸಿದ ದುರುಳರು….

Published

on

ಬೆಂಗಳೂರು: ರಾತ್ರಿ ಹೊತ್ತು ನಾಯಿಗಳು ಬೊಗಳುತ್ತವೆ, ಇದರಿಂದ ಕಿರಿಕಿರಿಯಾಗುತ್ತದೆ ಎಂದು ಅಪಾರ್ಟ್ ಮೆಂಟ್ ಬಳಿ ಇದ್ದ ಹತ್ತು ಶ್ವಾನಗಳಿಗೆ ವಿಷವಿಟ್ಟು ಸಾಯಿಸಿದ ಅಮಾನವೀಯ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ನಡೆದಿದೆ.


ಈ ಸಂದರ್ಭದಲ್ಲಿ ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಅನಿಮಲ್ ಅಸೋಸಿಯೇಷನ್‌ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೂ ಪ್ರಯೋಜನವಾಗಲಿಲ್ಲ.

ಇದೇ ವೇಳೆ, ಕಟುಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ಸಾಮಾಜಿಕ ಹೋರಾಟಗಾರ ಅರುಣ್ ‘ಪ್ರಾಣಿಗಳಿಗೆ ವಿಷ ಹಾಕಿ ಕೊಲ್ಲುವುದು ವನ್ಯಜೀವಿ ಸಂರಕ್ಷಣೆ​ ಕಾಯ್ದೆ 1972 ಅಡಿಯಲ್ಲಿ ಅಪರಾಧ. ನಾಯಿಗಳಿಗೆ ಆಹಾರದಲ್ಲಿ ವಿಷ ಹಾಕುವುದರಿಂದ ಇತರ ಪ್ರಾಣಿಗಳೂ ಸಾಯುವ ಸಾಧ್ಯತೆ ಇರುತ್ತದೆ.

ಎಲ್ಲಾ ಪ್ರಾಣಿಗಳಿಗೂ ಬದುಕುವ ಹಕ್ಕಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದೇವೆ’ ಎಂದು ಹೇಳಿದರು.

bangalore

ಸ್ನೇಹಿತ್ ಔಟ್- ನಮ್ರತಾ- ಸ್ನೇಹಿತ್ ಲವ್ ಸ್ಟೋರಿಗೆ ಬ್ರೇಕ್..!

Published

on

ಬಿಗ್ ಬಾಸ್: ಬಿಗ್ ಬಾಸ್ ಮನೆ ಆಟ ಇದೀಗ 60 ದಿನಗಳ ಪೂರೈಸಿದೆ. ಪ್ರತಿ ವಾರವು ಸ್ಪರ್ಧೆಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಎಲಿಮಿನೆಟ್ ಆಗುತ್ತಿದ್ದಾರೆ. ಈ ವಾರವು ಸ್ನೇಹಿತ್ ಔಟ್ ಆಗಿದ್ದಾರೆ.

ಹಿಂದಿನ ವಾರದಲ್ಲಿ ಸ್ನೇಹಿತ್ ನಮ್ರತಾ ಜೊತೆ ಲವ್ವಿ-ಡವ್ವಿ ವಿಷಯಗಳನ್ನು ಮಾತನಾಡುತ್ತಿದ್ದರು. ನಮ್ರತಾ ಜೊತೆ ಬೆಸ್ಟ್ ಫ್ರೇಂಡ್ ಆಗಿದ್ದ ಸ್ನೇಹಿತ್ ಟಾಸ್ಕ್ ಗಳಲ್ಲಿ ಗೆಲ್ಲುತ್ತಿದ್ದರೂ, ಕೊನೆ ಕೊನೆಗೆ ಆಟದ ವಿಚಾರದಲ್ಲಿ ಬಹಳಷ್ಟು ಕಡೆ ಎಡವಿದ್ದರು. ಸ್ನೇಹಿತ್ ಕ್ಯಾಪ್ಟನ್ಸಿ ಆಗಿದ್ದಾಗ ಎರಡು ತಂಡಗಳ ಜೊತೆ ಪಕ್ಷಪಾತ ಮಾಡುತ್ತಿದ್ದರು. ಒಂದು ಟೀಮ್ ಗೆ ಮಾತ್ರ ಸಪೋರ್ಟ್ ಮಾಡುತ್ತಿದ್ದರು.

ಸ್ನೇಹಿತ್ ನಿರ್ಧಾರದಿಂದ ಕ್ಯಾಪ್ಟನ್ ಆಗಿ ಮುಂದೆ ಬರಬೇಕಿದ್ದ ಕಡೆಯಲ್ಲಾ ಎಡವಿದ್ದೇ ಜಾಸ್ತಿ. ಹಾಗಾಗಿ ಗಂಧರ್ವರು- ರಾಕ್ಷಸರು ಎಂಬ ತಂಡಗಳ ನಡುವೆ ಜಗಳಗಳು ಹೆಚ್ಚಾಗಿತ್ತು. ಇದೇ ಟಾಸ್ಕ್ ನಲ್ಲಿ ಡ್ರೋನ್ ಪ್ರತಾಪ್ ಸಂಗೀತಾ ಕಣ್ಣಿಗೆ ಪೆಟ್ಟಾಗಿದ್ದು, ಇದಕ್ಕೆ ಪರೋಕ್ಷವಾಗಿ ಸ್ನೇಹಿತೇ ಕಾರಣರಾದರು. ಟಾಸ್ಕ್ ನಿಲ್ಲಿಸುವ ಅಧಿಕಾರ ಕೈಯಲ್ಲಿತ್ತು. ಆದರೆ ಏನೂ ಮಾತನಾಡಲೂ ಮುಂದೆ ಹೋಗಿಲ್ಲ. ಸ್ನೇಹಿತ್ ನಿರ್ಧಾರಕ್ಕೆ ಪ್ರೇಕ್ಷಕರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ಸ್ನೇಹಿತ್ ನ ನಡೆತೆಯಿಂದ ಇದೀಗ ಅವರ ಬಿಗ್ ಬಾಸ್ ನಿಂದ ಹೊರ ಹೋಗಿದ್ದಾರೆ.

ವಿನಯ್ ಗೌಡ ಮತ್ತು ನಮೃತಾ ಗೌಡ ಜೊತೆಯಷ್ಟೇ ಕಂಫರ್ಟ್ ಝೋನ್ ಕ್ರಿಯೇಟ್ ಮಾಡಿಕೊಂಡು, ಕ್ಯಾಪ್ಟನ್ ಆಗಿದ್ರೂ ಅವರ ಪರವಾಗೇ ಆಡುತ್ತಿದ್ದ ಸ್ನೇಹಿತ್ ಎಲಿಮಿನೇಟ್ ಆಗಿದ್ದಾರೆ. ಸದ್ಯ ಸ್ನೇಹಿತ್ ಎಲಿಮಿನೇಷನ್ ನಿಂದ ವಿನಯ್ & ಟೀಮ್ ಶಾಕ್ ಆಗಿದೆ. ನಮ್ರತಾ ಗೌಡ ಜೊತೆ ಲವ್ವಿ ಡವ್ವಿ ಅಂತ ಹಿಂದೆ ಬೀಳತ್ತಿದ್ದ ಸ್ನೇಹಿತ್ ಮುಂದಿನ ನಡೆಯೇನು? ಬಿಗ್ ಬಾಸ್ ಆಟದ ನಂತರ ಮುಂದಿನ ದಿನಗಳಲ್ಲಿ ನಮ್ರತಾ ಮೆಚ್ಚಿ ಸ್ನೇಹಿತ್ ಒಪ್ಪಿಕೊಳ್ತಾರಾ ಕಾಯಬೇಕಿದೆ.

ಅಂತೂ ಬಿಗ್ ಬಾಸ್ ನಿಂದ ಸ್ನೇಹಿತ್ ಔಟ್ ಆದಾಗ ನಮ್ರತಾ ಬಿಕ್ಕಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇವರ ಲವ್ ಸ್ಟೋರಿ ಬ್ರೇಕ್ ಆಗುತ್ತಾ ಅಲ್ಲ ಬಿಗ್ ಮನೆಯಿಂದ ಹೊರ ಹೋದ ಬಳಿಕ ಮುಂದುವರಿಯುತ್ತಾ ಅನ್ನೋದು ಕಾದು ನೋಡಬೇಕಷ್ಟೇ.

Continue Reading

bangalore

ಬಿಗ್ ಬಾಸ್ ಮನೆಯಲ್ಲಿ ನಮ್ರತಾ-ಸ್ನೇಹಿತ್ ಲವ್ವಿ-ಡವ್ವಿ

Published

on

Bigboss: ಬಿಗ್ ಬಾಸ್ ಮನೆಯಲ್ಲಿ ಕಾರ್ತಿಕ್- ಸಂಗೀತಾ ಇಬ್ಬರ ಒಂದು ಜೋಡಿ ಆದರೆ ಇತ್ತ ಸ್ನೇಹಿತ್ ಮತ್ತು ನಮ್ರತಾ ಇವರಿಬ್ಬರ ಪ್ರೇಮ ಕತೆ ಶುರುವಾಗಿದೆ.

ಕ್ಯಾಪ್ಟೆನ್ಸಿ ವಿಚಾರದಲ್ಲಿ ನಮ್ರತಾ ಹಾಗೂ ಸ್ನೇಹಿತ್ ಮುನಿಸಿಕೊಂಡಿದ್ದು, ಇದೀಗ ಮತ್ತೇ ಅವರ ಫ್ರೆಂಡ್‌ಶಿಪ್‌ ಶುರುವಾಗಿದೆ. ‘ ನಾನು ನಿಮ್ಮ ಪ್ರೀತಿನ ಒಪ್ಪಿಕೊಂಡ್ರೆ ಏನು ಮಾಡ್ತೀರಾ ಎಂದು ಸ್ನೇಹಿತ್ ಗೆ ನಮ್ರತಾ ಹೇಳಿದ್ದಾರೆ. ಅವರ ಮಾತಿಗೆ ಸ್ನೇಹಿತ್ ನಾಚಿ ನೀರಾಗಿದ್ದಾರೆ. ಇದೀಗ ಇವರಿಬ್ಬರ ಲವ್ವಿ-ಡವ್ವಿಯಲ್ಲಿ ಹೊಸ ಟ್ವಿಸ್ಟ್‌ ಸಿಕ್ಕಿದೆ. ಸ್ನೇಹಿತ್ ಕ್ಯಾಪ್ಟನ್ ಆಗಿದ್ದಾಗ ಟಾಸ್ಕ್‌ನಿಂದ ನಮ್ರತಾ ಅವರನ್ನು ಹೊರಗೆ ಹಾಕಿದ್ದರು. ಬಳಿಕ ನಮ್ರತಾ ಅವರ ಜೊತೆ ಮಾತನಾಡುವುದನ್ನೇ ನಿಲ್ಲಿಸಿದ್ದರು.


ಕಳೆದ 60 ದಿನಗಳಿಂದ ನಡೆಯುತ್ತಿರೋ ಸೀನ್ ಅಂದರೆ ನಮ್ರತಾ ಹಿಂದೆ ಹೋಗೋದನ್ನ ಸ್ನೇಹಿತ್ ಬಿಟ್ಟಿಲ್ಲ. ನಮ್ರತಾಗೆ ಆಗಾಗ ಪ್ರೇಮ ನಿವೇದನೆ ಮಾಡುತ್ತಲೇ ಬಂದಿದ್ದಾರೆ. ನಮ್ರತಾ ಬೀಳಲ್ಲ, ಸ್ನೇಹಿತ್ ಬಿಡಲ್ಲ. ಇದೀಗ ಇದೆನ್ನೆಲ್ಲಾ ಗಮನಿಸಿ ನಮ್ರತಾ, ಸರಿ ನಾನು ನಿಮ್ಮ ಪ್ರೀತಿಯನ್ನ ಒಪ್ಪಿಕೊಂಡರೆ ಮುಂದೇನು? ಫ್ಯೂಚರ್ ಪ್ಲ್ಯಾನ್ ಏನು ಎಂದು ಕೇಳಿದ್ದಾರೆ. ಹೇಳಿ ಈಗ ನಾನು ಪ್ರೀತಿ ಮಾಡ್ತೀನಿ ಅಂದ್ರೆ ಏನು ಮಾಡ್ತೀರಿ ಎಂದು ನೇರವಾಗಿ ಪ್ರಶ್ನೆ ಎಸೆದರು.

ಆದರೆ, ಈ ಪ್ರಶ್ನೆಗೆ ಏನು ಉತ್ತರಿಸಬೇಕು ಎಂಬುದೇ ಸ್ನೇಹಿತ್‌ಗೆ ತಿಳಿಯಲಿಲ್ಲ. ಅವರು ನಕ್ಕು ಸುಮ್ಮನಾದರು. ಹೇಳಿ ಈಗ ನಾನು ಪ್ರೀತಿಸುತ್ತೇನೆ ಎಂದರೆ ಏನು ಮಾಡ್ತೀರಾ. ಇಷ್ಟು ದಿನ ಸುಮ್ಮನೆ ಕಾಳು ಹಾಕಿದ್ರಾ ಎಂದು ಮರು ಪ್ರಶ್ನೆ ಹಾಕಿದರು. ಬಿಗ್ ಬಾಸ್‌ನಿಂದ ಹೊರಗೆ ಹೋದ ಬಳಿಕ ಮನೆಯವರ ಜೊತೆ ಮಾತನಾಡೋಣ.

ಒಂದು ವರ್ಷ ಮದುವೆ ಆಗೋದು ಬೇಡ. ನಿಮ್ಮಿಷ್ಟದ ಜಾಗಕ್ಕೆ ಹೊಗೋಣ. ಸ್ವಿಜರ್‌ಲೆಂಡ್‌ಗೆ ಮೊದಲು ಹೋಗೋಣ ಎಂದರು ಸ್ನೇಹಿತ್. ಅವರ ಮಾತನ್ನು ಕೇಳಿ ನಮ್ರತಾ ನಕ್ಕರು. ನಮ್ರತಾ ನಗುತ್ತಲೇ ಪ್ರೀತಿಗೆ ಗ್ರೀನ್ ಸಿಗ್ನಲ್ ಕೊಟ್ರಾ? ಈ ಬಗ್ಗೆ ಕ್ಲ್ಯಾರಿಟಿ ಇಲ್ಲ. ಆದರೆ ನಮ್ರತಾ ನಗುವಿಗೆ ಸ್ನೇಹಿತ್ ಮಾತ್ರ ನಾಚಿ ನೀರಾಗಿದ್ದಾರೆ. ಅಂತೂ ಇಂತೂ ಕೋಪ ಮಾತನಾಡುತ್ತಿದ್ದಲ್ಲಾ ಅಂತ ಸಮಾಧಾನದಲ್ಲಿದ್ದಾರೆ ಸ್ನೇಹಿತ್.

Continue Reading

bangalore

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅಮ್ಮ ನಿಧನ..!

Published

on

ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅಮ್ಮ ವಯೋಸಹಜದ ಕಾಯಿಲೆಯಿಂದ ಇಂದು ನಿಧನ ಹೊಂದಿದರು.

ಲೀಲಾವತಿ ಅವರು ಕೆಲವು ಸಮಯದ ಹಿಂದೆ ಆರೋಗ್ಯ ಸಮಸ್ಯೆಯಿಂದ ಬಳಳುತ್ತಿದ್ದರು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.

ಸಿನಿಮಾ ರಂಗಕ್ಕೆ ಕಾಲಿಟ್ಟ ಲೀಲಾವತಿ ಅಮ್ಮ ತಮಿಳು, ತೆಲುಗು, ಕನ್ನಡ, ಮಲೆಯಾಳಂ ಸೇರಿದಂತೆ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಹುಟ್ಟಿದ್ದ ಅವರು ಕಿರಿಯ ವಯಸ್ಸಿನಲ್ಲೇ ಸಿನಿಮಾ ರಂಗಕ್ಕೆ ಕಾಲಿಟ್ಟು ಸುಮಾರು ಸಾಧನೆ ಮಾಡಿದ್ದಾರೆ. ಅವರ ಸಾಧನೆಗೆ ಹಲವಾರು ಪುರಸ್ಕಾರಗಳೂ ಸಂದಿವೆ. ಕರ್ನಾಟಕ ಸರಕಾರ ಕೊಡಮಾಡುವ ಜೀವಮಾನ ಸಾಧನೆಗಾಗಿ ಡಾ. ರಾಜ್ ಕುಮಾರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ತುಮಕೂರ ವಿಶ್ವವಿದ್ಯಾಲಯ ಇವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

 

Continue Reading

LATEST NEWS

Trending