Connect with us

LATEST NEWS

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡಿಂಗ್ ಪ್ರಕರಣ- ಸ್ವಯಂ ಪ್ರೇರಿತ ದೂರು ದಾಖಲಿಸಿದ ಮಲ್ಪೆ ಪೊಲೀಸರು.!

Published

on

ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ.ಬಿ. ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಕಲಂ: 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆನ್ನಲಾದ ಪ್ರಕರಣ ದಿನಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ.

ಭಿನ್ನ ಕೋಮಿನ ವಿದ್ಯಾರ್ಥಿನಿಯರು ಇದರಲ್ಲಿ ಶಾಮೀಲಾದ ಕಾರಣ ಮುಂದಿನ ದಿನಗಳಲ್ಲಿ ಇನ್ನೂ ವಿಕೋಪಕ್ಕೆ ತಿರುಗುವ ಲಕ್ಷಣಗಳು ಗೋಚರಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕೊನೆಗೂ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ.ಬಿ. ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಕಲಂ: 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿಯರ ಹಾಗೂ ಆಡಳಿತ ಮಂಡಳಿಯ ವಿರುದ್ಧ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವ ಉದ್ದೇಶದಿಂದ ಈ ದೂರನ್ನು ನೀಡುತ್ತಿದ್ದು, ಇದನ್ನು ಸ್ವೀಕರಿಸಿ, ದೂರು ದಾಖಲಿಸಿ ಸೂಕ್ತ ತನಿಖೆ ನಡೆಸಬೇಕೆಂದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು ತನಿಖೆ ಆರಂಭವಾಗಿದೆ.

DAKSHINA KANNADA

Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!

Published

on

ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.

ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.

ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.

ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.

ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.

 

 

Continue Reading

DAKSHINA KANNADA

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ

Published

on

ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ  ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ  ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.

ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.

ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.

 

Continue Reading

DAKSHINA KANNADA

ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!

Published

on

ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.

ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.

ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

LATEST NEWS

Trending