LATEST NEWS
ವಿಧಾನ ಪರಿಷತ್ ಉಪ ಚುನಾವಣೆ: ಅ.24ರಂದು ಮತ ಎಣಿಕೆ; ನಿಷೇಧಾಜ್ಞೆ ಜಾರಿ
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದು, ಮೆರವಣಿಗೆ ಅಥವಾ ಸಭೆ/ಸಮಾರಂಭ ಮಾಡುವುದನ್ನು ನಿಷೇಧಿಸಲಾಗಿದೆ.ಮತ ಎಣಿಕೆ ಕೇಂದ್ರದ ಆವರಣದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ಪಾದಚಾರಿ ವಲಯ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳಿಗೆ ಪ್ರವೇಶ ಮತ್ತು ಪಾರ್ಕಿಂಗ್ ಮಾಡಲು ಅವಕಾಶ ಇರುವುದಿಲ್ಲ. ಮತ ಎಣಿಕೆ ಕೇಂದ್ರದ 200 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ.
ಚುನಾವಣೆಯ ಮತ ಎಣಿಕೆ ಫಲಿತಾಂಶದ ಸಮಯದಲ್ಲಿ ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿದೆ. ಈ ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಮಾರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಯಾವುದೇ ಕ್ಷಾರಕ ಅಥವಾ ಸ್ಫೋಟ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ. ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಕ್ಷಿಪಣಿಗಳ ಅಥವಾ ಕ್ಷಿಪಣಿಯಾಗಿ ಉಪಯೋಗಿಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಗ್ರಿಗಳನ್ನು ಧರಿಸುವುದನ್ನು ನಿಷೇಧಿಸಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕ ಅಥವಾ ಉದ್ರಿಕ ಕಾರ್ಯ ಹಾಡುಗಳು ಕೂಗಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿ ಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶ ಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವುದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಹಾಗೂ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಈ ಆದೇಶವು ಚುನಾವಣಾ ಕಾರ್ಯನಿರತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿದೆ.
DAKSHINA KANNADA
ಕಡಬ: ಅಲಂಕಾರಿನಲ್ಲಿ ಹುಲಿ ಹೆಜ್ಜೆ
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಪರಿಸರದಲ್ಲಿ ಮಂಗಳವಾರ (ಅ.22) ಬೆಳಗ್ಗೆ ಹುಲಿಯೊಂದು ಕಂಡುಬಂದಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.
ಅಲಂಕಾರು ಗ್ರಾಮದ ನೆಕ್ಕಿಲಾಡಿ ಬೈಲು ನೈಯಲ್ಗ ನಿವಾಸಿ ಜನಾರ್ದನ ಬಂಗೇರ ಎಂಬವರ ಮನೆಯ ಸಮೀಪ ಹುಲಿ ಕಂಡುಬಂದಿದೆ ಎನ್ನಲಾಗಿದೆ.
ಕೂಡಲೇ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಜಯಕುಮಾರ್, ಗಸ್ತು ಅರಣ್ಯ ಪಾಲಕ ರವಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸ್ಥಳ ಪರಿಶೀಲನೆ ವೇಳೆ ಸ್ಥಳದಲ್ಲಿ ಕಾಡುಪ್ರಾಣಿಯ ಹೆಜ್ಜೆ ಗುರುತು ಕಂಡುಬಂದಿದ್ದು ಅದು ಚಿರತೆಯದ್ದೋ ಅಥವಾ ಹುಲಿಯದ್ದೋ ಅನ್ನುವುದು ಪರಿಶೀಲನೆಯ ಬಳಿಕ ತಿಳಿದು ಬರಬೇಕಿದೆ ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
LATEST NEWS
ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಈ ಪರಿಣಾಮ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದಂತ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು ನಗರದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಮಲ್ಲೇಶ್ವರಂ ಸುತ್ತಾಮುತ್ತ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಮಳೆಯಿಂದಾಗಿ ಮರವೊಂದು ಮುರಿದು ಬಿದ್ದ ಪರಿಣಾಮ ಆಟೋ, ಬೈಕ್ ಜಖಂಗೊಂಡಿದ್ದಾವೆ. ರಸ್ತೆಗಳು ಜಲಾವೃತಗೊಂಡು ಎಲ್ಲೆಲ್ಲೂ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುತ್ತಿದ್ದಾರೆ.
ಮತ್ತೊಂದೆಡೆ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಮೊದಲ ಮಹಡಿಯವರೆಗೆ ನಿರ್ಮಿಸಿದ್ದಂತ ಕಟ್ಟದ ಕುಸಿದು ಬಿದ್ದ ಪರಿಣಾಮ, ಅವಶೇಷಗಳ ಅಡಿಯಲ್ಲಿ ಕೆಲ ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವಂತ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಸಿಲುಕಿರುವಂತ ಕಾರ್ಮಿಕರನ್ನು ರಕ್ಷಣೆ ಮಾಡುವಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
LATEST NEWS
ರಾತ್ರಿ ಮಲಗಿದಾಗ ತುಂಬಾ ಬೆವರುತ್ತಿದೆಯಾ ? ಯಾಕೆ ಗೊತ್ತಾ ?
ಮಂಗಳೂರು: ರಾತ್ರಿ ನಿದ್ರಿಸುತ್ತಿರುವಾಗ ಬೆವರುವುದು ಸಾಮಾನ್ಯ ಸಮಸ್ಯೆ ಆದರೂ, ಇದಕ್ಕೆ ಒಂದಲ್ಲ ಹಲವು ಕಾರಣಗಳಿರುತ್ತದೆ. ಅತಿಯಾದ ಬೆವರುವಿಕೆ ಇದ್ದರೆ ಜಾಗರೂಕರಾಗಿರಬೇಕು, ಏಕೆಂದರೆ ಇದು ಅನಾರೋಗ್ಯದ ಸಂಕೇತವಾಗಿದೆ. ರಾತ್ರಿಯಲ್ಲಿ ಅತಿಯಾದ ಬೆವರುವಿಕೆಗೆ ಕಾರಣಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.
ರಾತ್ರಿಯಲ್ಲಿ ಬೆವರಿಕೆಯ ಮುಖ್ಯ ಕಾರಣಗಳು:
1. ಹಾರ್ಮೋನ್ ಬದಲಾವಣೆ:
ದೇಹದಲ್ಲಿನ ಹಾರ್ಮೋನುಗಳ ಬದಲಾವಣೆಯಿಂದಾಗಿ, ರಾತ್ರಿಯಲ್ಲಿ ಅತಿಯಾದ ಬೆವರುವಿಕೆ ಸಂಭವಿಸಬಹುದು. ಇದು 45-55 ವರ್ಷ ವಯಸ್ಸಿನ ಮಹಿಳೆಯರಲ್ಲಿ ಋತುಬಂಧದ ಚಿಹ್ನೆಯಾಗಿರಬಹುದು. ಇದಲ್ಲದೆ, ಥೈರಾಯ್ಡ್ನಂತಹ ಸಮಸ್ಯೆಗಳು ಬೆವರುವಿಕೆಗೆ ಕಾರಣವಾಗಬಹುದು.
2. ಒತ್ತಡ ಮತ್ತು ಆತಂಕ:
ಅತಿಯಾದ ಒತ್ತಡ ಮತ್ತು ಆತಂಕದಿಂದಾಗಿ, ದೇಹದಲ್ಲಿ ಅಡ್ರಿನಾಲಿನ್ ಹಾರ್ಮೋನ್ ಮಟ್ಟವು ಹೆಚ್ಚಾಗುತ್ತದೆ, ಇದು ಬೆವರುವಿಕೆಯ ಸಮಸ್ಯೆಯನ್ನು ಉಂಟುಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಒತ್ತಡವನ್ನು ಕಡಿಮೆ ಮಾಡುವ ಅವಶ್ಯಕತೆಯಿದೆ.
3. ನಿದ್ರೆಯ ಕೊರತೆ:
ನೀವು ರಾತ್ರಿಯಿಡೀ ಎಚ್ಚರವಾಗಿದ್ದರೆ ಅಥವಾ ಕೆಲವು ಕಾರಣಗಳಿಂದ ನಿದ್ರೆ ಮಾಡಲು ಸಾಧ್ಯವಾಗದಿದ್ದರೆ, ಅತಿಯಾಗಿ ಬೆವರು ಬರಬಹುದು. ವಾಸ್ತವವಾಗಿ, ನಿದ್ರೆಯ ಕೊರತೆಯಿಂದಾಗಿ ದೇಹದ ಉಷ್ಣತೆಯು ಹೆಚ್ಚಾಗುತ್ತದೆ, ಇದು ಬೆವರುವಿಕೆಯ ಸಮಸ್ಯೆಯನ್ನು ಉಂಟುಮಾಡುತ್ತದೆ.
4. ಕಡಿಮೆ ರಕ್ತದ ಸಕ್ಕರೆ:
ಹೈಪೊಗ್ಲಿಸಿಮಿಯಾ , ಕಡಿಮೆ ರಕ್ತದ ಸಕ್ಕರೆ ಅಥವಾ ಕಡಿಮೆ ರಕ್ತದ ಗ್ಲೂಕೋಸ್ ಎಂದೂ ಕರೆಯಲ್ಪಡುತ್ತದೆ. ಕಡಿಮೆ ರಕ್ತದ ಸಕ್ಕರೆಯ ಸಂದರ್ಭದಲ್ಲಿ ಸಹ, ಬಹಳಷ್ಟು ಬೆವರು ಸಾಮಾನ್ಯ. ಕಡಿಮೆ ರಕ್ತದ ಸಕ್ಕರೆಯ ಮಟ್ಟದಿಂದಾಗಿ, ಅಡ್ರಿನಾಲಿನ್ ಹಾರ್ಮೋನ್ ಬಿಡುಗಡೆಯಾಗುವುದರಿಂದ ದೇಹವು ರಾತ್ರಿಯಲ್ಲಿ ಹೆಚ್ಚು ಬೆವರುತ್ತದೆ, ಏಕೆಂದರೆ ಈ ಕಾರಣದಿಂದಾಗಿ ಬೆವರು ಗ್ರಂಥಿಗಳು ತುಂಬಾ ಸಕ್ರಿಯವಾಗುತ್ತವೆ.
5. ಕ್ಯಾನ್ಸರ್ ನಂತಹ ರೋಗದ ಲಕ್ಷಣ:
ಕೆಲವು ವಿಧದ ಕ್ಯಾನ್ಸರ್ಗಳಲ್ಲಿ ರಾತ್ರಿ ಬೆವರುವಿಕೆ ಸಂಭವಿಸಬಹುದು. ಇದು ಹೆಚ್ಚಾಗಿ ಲಿಂಫೋಮಾ ಅಂದರೆ ರಕ್ತದ ಕ್ಯಾನ್ಸರ್ ನಲ್ಲಿ ಸಂಭವಿಸುತ್ತದೆ. ಇದಲ್ಲದೇ ಮಧುಮೇಹ, ಹೃದ್ರೋಗದಂತಹ ಗಂಭೀರ ಕಾಯಿಲೆಗಳಲ್ಲಿ ರಾತ್ರಿ ವೇಳೆ ದೇಹ ಹೆಚ್ಚು ಬೆವರುತ್ತದೆ.
- BIG BOSS6 days ago
ಲಾಯರ್ ಜಗದೀಶ್ ಹೊರಗೆ, ಪತ್ನಿ ಒಳಗೆ: ಕಲರ್ಸ್ ಶೋನಲ್ಲಿ ಜಗದೀಶ್ ಪತ್ನಿ
- BIG BOSS4 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- BIG BOSS5 days ago
ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು ?
- LATEST NEWS5 days ago
ಕೀಬೋರ್ಡ್ನಲ್ಲಿ ಎಫ್ ಮತ್ತು ಜೆ ಅಕ್ಷರಗಳ ಕೆಳಗೆ ಗೆರೆ ಏಕೆ ಇರುತ್ತದೆ ಗೊತ್ತಾ?