Wednesday, December 1, 2021

ಎತ್ತಿನಗಾಡಿ ಮೂಲಕ ವಿಧಾನಸೌಧಕ್ಕೆ ಸಿದ್ದರಾಮಯ್ಯ, ಡಿಕೆಶಿ ಆಗಮನ

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇಂದು ವಿಧಾನಸೌಧಕ್ಕೆ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ. ಮೊದಲ ದಿನವೇ ಅವರಿಗೆ ಪ್ರತಿಪಕ್ಷ ಮತ್ತು ರೈತರ ಕಡೆಯಿಂದ ಪ್ರತಿಭಟನೆ, ಧರಣಿಗಳನ್ನು ಎದುರಿಸುವಂತಾಗಿದೆ.

ಬೆಲೆ ಏರಿಕೆಯನ್ನು ಖಂಡಿಸಿ ಕೈ ನಾಯಕರು ಎತ್ತಿನ ಬಂಡಿಯನ್ನು ಏರಿ ವಿಧಾನಸಭೆ ಕಲಾಪಕ್ಕೆ ಹೊರಟಿದ್ದಾರೆ.

ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾನು ದೇಶದ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇನೆ. ಸರ್ಕಾರ ಪ್ರತಿದಿನ ಜನರ ಪಿಕ್ಪಾಕೆಟ್ ಮಾಡುತ್ತಿದೆ ಎಂದು ಹೇಳಿದರು.
ತೈಲ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ.

ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ. ಈ ಸರ್ಕಾರ ಕೆಳಗಿಳಿಸುವವರೆಗೂ ನಾವು ಹೋರಾಡುತ್ತೇವೆ ಎಂದು ಹೇಳಿಕೆ ನೀಡಿದ ಡಿಕೆಶಿ, ಪೆಟ್ರೋಲ್, ಡೀಸೆಲ್ ದರ 75 ರೂ.ಗೆ ಇಳಿಕೆಯಾಗಬೇಕು ಎಂದರು.
ಬೆಲೆ ಏರಿಕೆಯಿಂದ ಭವಿಷ್ಯದಲ್ಲಿ ಎತ್ತಿನಗಾಡಿಯೇ ಗಟ್ಟಿ ಎಂಬ ಸಂದೇಶವನ್ನು ರವಾನಿಸುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಎತ್ತಿನಗಾಡಿಯನ್ನು ಏರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತಮ್ಮ ಅಧಿಕೃತ ನಿವಾಸದಿಂದ ವಿಧಾನಸೌಧದತ್ತ ತೆರಳಿದ ಸಿದ್ದರಾಮಯ್ಯಗೆ ಎಸ್.ಆರ್.ಪಾಟೀಲ್. ಎಂ‌.ಬಿ.ಪಾಟೀಲ್ ಮತ್ತು ಪರಿಷತ್ ಸದಸ್ಯ ನಜಿರ್ ಅಹಮದ್ ಸಾಥ್ ನೀಡುತ್ತಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...