Thursday, April 22, 2021

ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಬೈಂದೂರಿನ ಸಾಧಕಿ ವಿದ್ಯಾ..!

ಉಡುಪಿ:  ಭಾರತೀಯ ಗಡಿ ಭದ್ರತಾ ಪಡೆಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗ್ರಾಮೀಣ ಭಾಗದ ಯುವತಿಯೊಬ್ಬರು ಆಯ್ಕೆಯಾಗಿದ್ದಾರೆ.ಈ ಭಾಗದಿಂದ ಇದೇ ಮೊದಲ ಬಾರಿಗೆ ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಗೆ ಯುವತಿಯೊಬ್ಬರು  ಆಯ್ಕೆಯಾಗುವ ಮೂಲಕ ಕರಾವಳಿಗರ ಹೆಮ್ಮೆಗೂ ಪಾತ್ರರಾಗಿದ್ದಾರೆ.ಬೈಂದೂರಿನ ಯಳಜಿತ ಗ್ರಾಮದ ಹುಣಸೆಮಕ್ಕಿ ನಿವಾಸಿಯಾದ ವಿದ್ಯಾ, ದೇಶ ಸೇವೆಗೆ ಮುಂದಾದ ಸಾಧಕಿ. ಕೃಷಿ ಕುಟುಂಬದ ರಮೇಶಗೌಡ ಮತ್ತು ಪಾರ್ವತಿ ದಂಪತಿಗಳ ಪುತ್ರಿಯಾದ ಈಕೆ ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆಗಳಿಂದ ಗುರುತಿಸಿಕೊಂಡಿದ್ದರು. ಕುಗ್ರಾಮದಲ್ಲಿ ಹುಟ್ಟಿ ಕ್ರೀಡಾ ತಾರೆಯಾಗಿದ್ದ ವಿದ್ಯಾ ನೆಟ್ಬಾಲ್ ವಿಭಾಗದಲ್ಲಿ 5 ಬಾರಿ ರಾಜ್ಯ ಹಾಗೂ ಒಂದು ಬಾರಿ ರಾಷ್ಟ್ರ ಮಟ್ಟವನ್ನು ಈಕೆ ಪ್ರತಿನಿಧಿಸಿದ್ದರು. ಅಥ್ಲೆಟಿಕ್ಸ್ ನಲ್ಲಿ 6 ಬಾರಿ ರಾಜ್ಯ ಮಟ್ಟದಲ್ಲಿ ಭಾಗವಹಿಸಿದ್ದು, ಅನೇಕ ಪದಕವನ್ನು ಪಡೆದಿದ್ದಾರೆ. ಇದೀಗ  ಆಯ್ಕೆ ಪ್ರಕ್ರಿಯೆ ಮುಗಿಸಿರುವ   ವಿದ್ಯಾ ರವರು ತರಬೇತಿಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದಾರೆ…

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...