Connect with us

    LATEST NEWS

    ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಾಟ್..! ಬೆಳ್ಳಿ ಪದಕಕ್ಕಾಗಿ ನ್ಯಾಯಾಲಯದ ಮೊರೆ

    Published

    on

    OLYMPIC: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇನ್ನೇನು ಚಿನ್ನದ ಪದಕದ ಬೇಟೆಗೆ ಸಿದ್ಧರಾಗಿದ್ದ ಭಾರತದ ಗಟ್ಟಿಗಿತ್ತಿ ವಿನೇಶ್ ಫೋಗಾಟ್‌ ರವರನ್ನು ಪಂದ್ಯದಿಂದ ಅನರ್ಹಗೊಳಿಸಿದ್ದರು. ಈ ಬೆನ್ನಲ್ಲೇ ವಿನೇಶ್ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌ ಹಾಕುವುದರ ಮೂಲಕ ಕುಸ್ತಿ ಪಂದ್ಯಕ್ಕೆ ವಿದಾಯ ಹೇಳಿದ್ದಾರೆ.  ಸಾಮಾಜಿಕ ಮಾಧ್ಯಮ ಎಕ್ಸ್‌ ಖಾತೆಯಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು ‘ಅಮ್ಮಾ ನನ್ನ ವಿರುದ್ದ ಕುಸ್ತಿ ಗೆದ್ದಿದೆ, ನಾನು ಸೋಲನ್ನು ಅನುಭವಿಸಿದ್ದೇನೆ” ಎಂದಿದ್ದಾರೆ.

    ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ ನಲ್ಲಿ ಭಾರತದ ಮಹಿಳೆ ಕುಸ್ತಿ ಪಂದ್ಯದಲ್ಲಿ ಫೈನಲ್‌ಗೆ ತಲುಪಿರುವುದು. ಆದರೆ ಕೇವಲ 100 ಗ್ರಾಂ ತೂಕ ಹೆಚ್ಚಳದ ಕಾರಣಕ್ಕೆ ಸ್ಪರ್ಧೆಯಿಂದ ಅನರ್ಹಳನ್ನಾಗಿಸಿರುವುದು ಬೇಸರ ತಂದಿದೆ.  ಕುಸ್ತಿ ಪಂದ್ಯದ ಫೈನಲ್‌ಗೆ ಅನರ್ಹ ಎಂಬ ಘೋಷಣೆಯ ಬಳಿಕ ಒಂದೇ ದಿನದಲ್ಲಿ ವಿನೇಶ್ ಪೋಗಾಟ್‌ ಕುಸ್ತಿಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

    ಭಾರತಕ್ಕೆ ದೊಡ್ಡ ಆಘಾತ.. ವಿನೇಶ್ ಫೋಗಾಟ್ ಒಲಿಂಪಿಕ್ಸ್​ನಿಂದ ಅನರ್ಹ

    ವಿನೀಶ್‌ ಭಾವುಕ ಸಂದೇಶ..
    ‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಸಂಪೂರ್ಣ ಛಿದ್ರ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಭಾವುಕವಾಗಿ ಬರೆದುಕೊಂಡಿದ್ದಾರೆ. ‘ಕುಸ್ತಿಗೆ ವಿದಾಯ. ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ’ ಎಂದು ವಿನೇಶ್ ಫೋಗಟ್ ಎಕ್ಸ್ ಸಂದೇಶದಲ್ಲಿ ಉಲ್ಲೇಖ ಮಾಡಿದ್ದಾರೆ.

    ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ವಿನೀಶ್ ಫೋಗಾಟ್; ಮೋದಿ ಭಾವನಾತ್ಮಕ ಟ್ವೀಟ್

    ತೂಕ ಇಳಿಸಲು ರಾತ್ರಿ ಇಡೀ ವಿನೇಶ್ ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದಾರೆ. ತನ್ನ ಕೂದಲು, ಉಗುರುಗಳನ್ನು ಕತ್ತರಿಸಿದ್ದಾರೆ. ಅಲ್ಲದೇ ದೇಹದಲ್ಲಿದ್ದ ರಕ್ತವನ್ನು ಹೊರಗೆ ತೆಗೆದಿದ್ದಾರೆ. ರಾತ್ರಿ ಪೂರ್ತಿ ಒಂದು ತೊಟ್ಟು ನೀರೂ ಕುಡಿಯದೆ ಬೆವರು ಸುರಿಸಿ ವರ್ಕೌಟ್‌ ಮಾಡಿದ್ದಾರೆ. ಇದಾಗಿಯೂ ಕೇವಲ 2 ಕೆ ಜಿ ತೂಕ ಇಳಿಸಿದ್ದರು. ಕುಸ್ತಿ ಪಂದ್ಯಾಟಕ್ಕೆ 50 ಕೆ ಜಿ ಗಿಂತ ತೂಕ ಹೆಚ್ಚಾಗಿದ್ದರೆ ಪಂದ್ಯದಿಂದ ಅನರ್ಹ ಎಂಬ ನಿಯಮ ವಿದೆ. ಫೈನಲ್‌ ಪಂದ್ಯಕ್ಕಿಂತ ಮೊದಲು ಬೆಳಿಗ್ಗಿನ ವೇಳೆ ವಿನೇಶ್ ತೂಕ 100 ಗ್ರಾಂ ಹೆಚ್ಚಳವಿತ್ತು. ಹೀಗಾಗಿ ಅವರನ್ನು ಫೈನಲ್ ಪಂದ್ಯದಿಂದ ಅನರ್ಹಳನ್ನಾಗಿ ಘೋಷಣೆ ಮಾಡಿದ್ದಾರೆ. ವಿನೀಶ್ ಒಲಿಂಪಿಕ್ಸ್‌ ಚಿನ್ನದ ಪದಕದ ಕನಸು ನುಚ್ಚುನೂರಾಗಿದೆ. ಪದ್ಯದಿಂದಲೇ ಅನರ್ಹರಾಗಿದ್ದರಿಂದ ಇವರಿಗೆ ಯಾವುದೇ ಪದಕಗಳು ದೊರಕುವುದಿಲ್ಲ ಎಂದು ಹೇಳಲಾಗಿದೆ. ತೂಕ ಇಳಿಸಲು ನಡೆಸಿದ ಪ್ರಯತ್ನದ ಪರಿಣಾಮವಾಗಿ ನಿರ್ಜಲೀಕರಣದಿಂದ ವಿನೇಶ್ ಆಸ್ಪತ್ರೆಗೆ ದಾಖಲಾಗಿದ್ದರು.

    ಕ್ರೀಡಾ ನ್ಯಾಯಾಲಯಕ್ಕೆ ವಿನೇಶ್ ಮನವಿ
    ಪ್ಯಾರಿಸ್ ಒಲಿಂಪಿಕ್ಸ್‌ ಕುಸ್ತಿ ಪಂದ್ಯದಲ್ಲಿ ಅನರ್ಹತೆಯನ್ನು ಪ್ರಶ್ನಿಸಿ ವಿನೇಶ್ ಫೋಗಾಟ್‌ ಅಂತರಾಷ್ಟ್ರೀಯ ಮಧ್ಯವರ್ತಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. 100 ಗ್ರಾಂ ಹೆಚ್ಚಳ ಎಂಬ ಕಾರಣಕ್ಕೆ ಅನರ್ಹಗೊಳಿಸಲಾಗಿದೆ. ಹಾಗಾಗಿ ಜಂಟಿ ಬೆಳ್ಳಿ ಪದಕ ನೀಡಬೇಕು ಎಂದು ವಿನೇಶ್ ಫೋಗಾಟ್‌ ಮನವಿ ಸಲ್ಲಿಸಿದ್ದಾರೆ.

    LATEST NEWS

    ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಮೋದಿ

    Published

    on

    ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದ ಅವರು, ದಾಖಲೆಯ 29 ಪದಕಗಳನ್ನು ಗೆದ್ದ‌ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಶ್ಲಾಘಿಸಿದರು.

    ಜೂಡೋದಲ್ಲಿ ಪ್ಯಾರಾಲಿಂಪಿಕ್ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಕಪಿಲ್ ಪರ್ಮಾರ್ ಅವರು ಪ್ರಧಾನಿ ಮೋದಿಗೆ ಸ್ಮರಣಿಕೆಯನ್ನು ಉಡುಗೊರೆಯಾಗಿ ನೀಡಿದರು. ಬಳಿಕ ಪ್ರಧಾನಿ ಮೋದಿ ಕಪಿಲ್‌ಗೆ ಆಟೋಗ್ರಾಫ್‌ನ್ನು ಸಹ ನೀಡಿದರು. ಇದೇ ವೇಳೆ ಅವನಿ ಲೆಖರಾ ಅವರು ಪ್ರಧಾನಿ ಮೋದಿಯವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಅಲ್ಲದೇ ಪ್ರಧಾನಿ ಮೋದಿಯವರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

    ಮಂಗಳವಾರ ದೇಶಕ್ಕೆ ಮರಳಿದ್ದ ಭಾರತೀಯ ಅಥ್ಲೀಟ್‌ಗಳು, ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚು ಸೇರಿದಂತೆ 29 ಪದಕಗಳನ್ನು ಗೆದ್ದಿದೆ. ಈ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ 19 ಪದಕಗಳನ್ನು ಗೆದ್ದ ದಾಖಲೆಯನ್ನು ಮುರಿದಿದೆ. ಈ ಸಾಧನೆಯ ಮೂಲಕ ಪದಕ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದ ಭಾರತ 18 ನೇ ಸ್ಥಾನಕ್ಕೆ ಏರಿದೆ. ಈ ಬಾರಿ 25 ಪದಕ ಗೆಲ್ಲುವ ಗುರಿಯೊಂದಿಗೆ ಭಾರತ ಪ್ಯಾರಾಲಿಂಪಿಕ್ಸ್‌ಗೆ ತೆರಳಿತ್ತು.

    ಕ್ರೀಡಾಪಟುಗಳ ಜೊತೆ ಮೋದಿ ಮಾತುಕತೆ ನಡೆಸಿದ ವೇಳೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಪಿಸಿಐ ಅಧ್ಯಕ್ಷ ದೇವೇಂದ್ರ ಜಜಾರಿಯಾ ಇದ್ದರು.

    Continue Reading

    LATEST NEWS

    ಸಿಜೆಐ ಮನೆಯಲ್ಲಿ ಗಣಪತಿ ಪೂಜೆಯಲ್ಲಿ ಪ್ರಧಾನಿ ಮೋದಿ- ಸಂಜಯ್‌ ರಾವತ್‌ ಆಕ್ಷೇಪ

    Published

    on

    ನವದೆಹಲಿ: ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದಕ್ಕೆ ಶಿವಸೇನೆ ಉದ್ಧವ್‌ ಠಾಕ್ರೆ ಬಣದ ನಾಯಕ ಸಂಜಯ್‌ ರಾವತ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಗಣೇಶೋತ್ಸವ ಸಮಯದಲ್ಲಿ ಸಿಜೆಐ ನಿವಾಸಕ್ಕೆ ಆಗಮಿಸಿದ ಮೋದಿ ಗಣಪತಿಗೆ ಆರತಿ ಎತ್ತಿದ್ದರು. ಈ ವಿಚಾರವನ್ನು ರಾವತ್‌ ಪ್ರಸ್ತಾಪ ಮಾಡಿ ಹಲವು ಪ್ರಶ್ನೆ ಎತ್ತಿದ್ದಾರೆ. ಗಣಪತಿ ಹಬ್ಬ ನಡೆಯುತ್ತಿದೆ, ಜನರು ಪರಸ್ಪರರ ಮನೆಗೆ ಭೇಟಿ ನೀಡುತ್ತಾರೆ. ಪ್ರಧಾನಿ ಇದುವರೆಗೆ ಎಷ್ಟು ಮನೆಗಳಿಗೆ ಭೇಟಿ ನೀಡಿದ್ದಾರೆ ಎಂಬುದರ ಕುರಿತು ನನಗೆ ಮಾಹಿತಿ ಇಲ್ಲ. ಆದರೆ ಪ್ರಧಾನಮಂತ್ರಿಯವರು ಸಿಜೆಐ ಮನೆಗೆ ತೆರಳಿ ಆರತಿ ಬೆಳಗಿದ್ದಾರೆ ಎಂದು ಟೀಕಿಸಿದ್ದಾರೆ.

    ಸಂವಿಧಾನದ ಪಾಲಕರು ರಾಜಕಾರಣಿಗಳನ್ನು ಭೇಟಿ ಮಾಡಿದರೆ, ಅದು ಜನರ ಮನಸ್ಸಿನಲ್ಲಿ ಅನುಮಾನವನ್ನು ಉಂಟುಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ನಮ್ಮ ಪ್ರಕರಣದಲ್ಲಿ ಕೇಂದ್ರ ಸರ್ಕಾರವು ಪ್ರತಿವಾದಿಯಾಗಿದೆ. ಮುಖ್ಯ ನ್ಯಾಯಮೂರ್ತಿಗಳು ಪ್ರಕರಣದಿಂದ ದೂರವಿರಬೇಕು. ಪ್ರಕರಣದ ಪ್ರತಿವಾದಿಯ ಜೊತೆ ಅವರ ನಂಟು ಬಹಿರಂಗವಾಗಿ ಕಾಣುತ್ತಿದೆ. ಪ್ರಕರಣದಲ್ಲಿ ನಮಗೆ ಸಿಜೆಐ ನ್ಯಾಯ ನೀಡಲು ಸಾಧ್ಯವೇ ಎಂಬ ಪ್ರಶ್ನೆಯನ್ನು ಸಂಜಯ್‌ ರಾವತ್‌ ಕೇಳಿದ್ದಾರೆ.

    Continue Reading

    LATEST NEWS

    ಕಮ್ಯುನಿಸ್ಟ್‌ ನಾಯಕ ಸಿತಾರಾಮ್‌ ಯೆಚೂರಿ ಇನ್ನಿಲ್ಲ..!

    Published

    on

    ನವದೆಹಲಿ : ಕಮ್ಯುನಿಸ್ಟ್‌ ನಾಯಕ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಅಲ್ಪಕಾಲದ ಅಸೌಖ್ಯದಿಂದ ಇಹಲೋಕ ತ್ಯಜಿಸಿದ್ದಾರೆ. 72 ವರ್ಷ ವಯಸ್ಸಾಗಿದ್ದ ಯೆಚೂರಿ ಅವರು ಉಸಿರಾಟದ ತೊಂದರೆಗಾಗಿ ಆಗಸ್ಟ್‌ 19 ರಂದು ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಎರಡು ದಿನಗಳಿಂದ ಶ್ವಾಸಕೋಶದ ಸೋಂಕು ಉಲ್ಭಣವಾಗಿದ್ದು ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.


    1952 ರಲ್ಲಿ ಚೆನೈನಲ್ಲಿ ಜನಿಸಿದ್ದ ಇವರು ಶಾಲಾ ಶಿಕ್ಷಣವನ್ನು ಹೈದರಾಬಾದ್‌ನಲ್ಲಿ ಪೂರೈಸಿದ್ದರು. 1969 ರಲ್ಲಿ ತೆಲಂಗಾಣ ಪ್ರತ್ಯೇಕತಾ ಹೋರಾಟ ಆರಂಭವಾದ ಬಳಿಕ ದೆಹಲಿಗೆ ತೆರಳಿದ್ದ ಯೆಚೂರಿ ದೆಹಲಿಯ ಜೆಎನ್‌ಯುನಲ್ಲಿ ಎಂಎ ಪದವಿ ಮುಗಿಸಿದ್ದರು. ಪಿಹೆಚ್‌ಡಿ ಆರಂಭಿಸಿದ್ದರಾದ್ರೂ ತುರ್ತು ಪರಿಸ್ಥಿತಿಯ ಕಾರಣದಿಂದ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. 1970 ರಿಂದ ಜೆಎನ್‌ಯುನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಮೂರು ಭಾರಿ ಆಯ್ಕೆಯಾಗಿದ್ದರು. ಬಳಿಕ 1984 ರಲ್ಲಿ ಸಿಪಿಐಎಂನ ಕೇಂದ್ರ ಸಮಿತಿಗೆ ಆಯ್ಕೆಯಾಗಿ ಪಕ್ಷದಲ್ಲಿ ಇದುವರೆಗೂ ಸೇವೆ ಸಲ್ಲಿಸಿಕೊಂಡು ಬಂದಿದ್ದಾರೆ.

    Continue Reading

    LATEST NEWS

    Trending