Connect with us

    FILM

    ತಂದೆಯ ಬಂಧನದ ಬಗ್ಗೆ ವಿನೀಶ್ ಭಾವುಕ ಪೋಸ್ಟ್; ನಿಂದಿಸಿದವರಿಗೆ ಧನ್ಯವಾದ ಎಂದ ದರ್ಶನ್ ಪುತ್ರ

    Published

    on

    ಮಂಗಳೂರು/ ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧಿತರಾಗಿದ್ದಾರೆ. ಈ ಘಟನೆಯಿಂದ ಅವರ ಕುಟುಂಬ ನೋವಿನಲ್ಲಿದೆ. ದರ್ಶನ್ ಬಂಧನದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಪ್ರೊಫೈಲ್ ಫೋಟೋ ಡಿಲೀಟ್ ಮಾಡಿಕೊಂಡಿದ್ದರು. ಅಲ್ಲದೇ, ತಾವು ಫಾಲೋ ಮಾಡುತ್ತಿದ್ದವರನ್ನೆಲ್ಲಾ ಅನ್ ಫಾಲೋ ಕೂಡಾ ಮಾಡಿದ್ದರು. ಬಳಿಕ, ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳನ್ನೇ ಡಿಲೀಟ್ ಮಾಡಿಬಿಟ್ಟಿದ್ದರು.

    ದರ್ಶನ್ ಪ್ರಕರಣದ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಮೌನಕ್ಕೆ ಶರಣಾಗಿದ್ದಾರೆ. ಆದರೆ, ಈಗ ಮಗ ವಿನೀಶ್ ತಂದೆಯ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಭಾವುಕ ಪೋಸ್ಟ್ ಕೂಡ ಮಾಡಿದ್ದಾರೆ.

    ಧನ್ಯವಾದ ಎಂದ ವಿನೀಶ್ :

    ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಭಾವುಕ ಪೋಸ್ಟ್ ವೊಂದನ್ನು ವಿನೀಶ್ ಹಂಚಿಕೊಂಡಿದ್ದಾರೆ. ತಂದೆಯನ್ನು ನಿಂದಿಸಿದವರಿಗೆ ಧನ್ಯವಾದ ಎಂದು ಅವರು ಬರೆದುಕೊಂಡಿದ್ದಾರೆ.


    “ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಹಾಗೂ ಅಸಭ್ಯ ಭಾಷೆಯಲ್ಲಿ ನಿಂದಿಸುತ್ತಿರುವವರಿಗೆ ಧನ್ಯವಾದ. ನನಗೀಗ 15 ವರ್ಷ. ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ.  ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲ ಬೇಕಾಗಿದೆ. ನನಗೆ ಶಾಪ ಹಾಕುವುದರಿಂದ ಯಾವ ಪ್ರಯೋಜನವಿಲ್ಲ” ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

    ಇದನ್ನೂ ಓದಿ : ದುನಿಯಾ ವಿಜಯ್ ಡಿವೋರ್ಸ್ ಅರ್ಜಿ ವಜಾ..!

    ಸದ್ಯ ದರ್ಶನ್, ಪವಿತ್ರಾ ಗೌಡ ಸೇರಿ ಬಂಧಿತರನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

    FILM

    ದರ್ಶನ್ ಭೇಟಿ ಮಾಡಲು ಸ್ಟೇಷನ್‌ಗೆ ಬಂದ ಪತ್ನಿ..!

    Published

    on

    ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್ ಬಂಧನವಾಗಿ ಇಂದಿಗೆ 8 ದಿನವಾಗಿದೆ. ಇಂದು (ಜೂನ್ 19) ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಬಂದಿದ್ದು, ಪ್ರಕರಣದ ಬಗ್ಗೆ ಹೇಳಿಕೆ ನೀಡಲಿದ್ದಾರೆ.

    ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಕೊಲೆ ಪ್ರಕರಣವಾದ ಮರುದಿನ ನಟಿ ವಿಜಯಲಕ್ಷ್ಮಿ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ಡಿಲೀಟ್ ಮಾಡಿದ್ದರು. ವಿಜಯಲಕ್ಷ್ಮಿ, ಕೊಲೆ ಆರೋಪಿ ಪತಿಯಿಂದ ಅಂತರ ಕಾಯ್ದುಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೊರಗಿನಿಂದ ಹೋರಾಟ ಆರಂಭಿಸಿದ್ದರು. ಅಂತಿಮವಾಗಿ ಇಂದು ಪೊಲೀಸರ ಮುಂದೆ ಹೇಳಿಕೆ ನೀಡಲಿದ್ದಾರೆ.

    ರೇಣುಕಾ ಸ್ವಾಮಿ ಕೊಲೆ ನಡೆದ ಬಳಿಕ ವಿಜಯಲಕ್ಷ್ಮಿ ವಾಸವಿರುವ ಅಪಾರ್ಟ್​ಮೆಂಟ್​ಗೆ ದರ್ಶನ್ ಹೋಗಿದ್ದರು. ಅಲ್ಲಿ ತಮ್ಮ ಬಟ್ಟೆಗಳನ್ನು ಬದಲಿಸಿದ್ದರು. ಶೂಗಳನ್ನು ಸಹ ಅಲ್ಲಿಯೇ ಬಿಟ್ಟಿದ್ದರು. ಅದೇ ಕಾರಣಕ್ಕೆ ವಿಜಯಲಕ್ಷ್ಮಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆದಿದ್ದರು. ವಿಜಯಲಕ್ಷ್ಮಿ ಮಾತ್ರವೇ ಠಾಣೆಗೆ ಆಗಮಿಸಿದ್ದಾರೆ, ಪುತ್ರ ವಿನೀಶ್ ಬಂದಿಲ್ಲ ಎನ್ನಲಾಗುತ್ತಿದೆ. ದರ್ಶನ್​ಗೆ ಬಟ್ಟೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳನ್ನು ಸಹ ವಿಜಯಲಕ್ಷ್ಮಿ ತಂದಿದ್ದಾರೆ ಎಂಬ ಮಾಹಿತಿಯೂ ಇದೆ. ದರ್ಶನ್ ಬಂಧನ ಆದಾಗಿನಿಂದಲೂ ವಿಜಯಲಕ್ಷ್ಮಿ ಅವರು ಬೇರೊಬ್ಬರಿಂದ ದರ್ಶನ್​ಗೆ ಬೇಕಾದ ಬಟ್ಟೆ ಮತ್ತು ಕೆಲ ಅಗತ್ಯ ವಸ್ತುಗಳನ್ನು ಕಳಿಸುತ್ತಿದ್ದರು.

    ಘಟನೆ ನಡೆದ ದಿನ ದರ್ಶನ್ ಮನೆಗೆ ಬಂದಾಗ ನಡೆದ ಘಟನೆಗಳು, ಆಡಿದ ಮಾತು, ನಡೆದುಕೊಂಡ ರೀತಿ ಸೇರಿದಂತೆ ದರ್ಶನ್​ರ ಇತರೆ ಕೆಲವು ವಿಷಯಗಳ ಬಗ್ಗೆಯೂ ಪೊಲೀಸರು ವಿಜಯಲಕ್ಷ್ಮಿ ಅವರನ್ನು ಪ್ರಶ್ನಿಸಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

    ಪವಿತ್ರಾ ಜೊತೆಗಿನ ದರ್ಶನ್​ ಸಂಬಂಧವನ್ನು ಕಠುವಾಗಿ ವಿರೋಧಿಸುತ್ತಲೇ ಬಂದಿದ್ದರು ವಿಜಯಲಕ್ಷ್ಮಿ. ಆದರೆ ದರ್ಶನ್ ಈಗ ಪವಿತ್ರಾ ಗೌಡಗೆ ಸಂಬಂಧಿಸಿದ ಪ್ರಕರಣದಲ್ಲಿಯೇ ಕೊಲೆ ಆರೋಪ ಹೊತ್ತುಕೊಂಡಿದ್ದಾರೆ. ಆದರೂ ಸಹ ವಿಜಯಲಕ್ಷ್ಮಿ ಮತ್ತೊಮ್ಮೆ ದರ್ಶನ್ ಮಾಡಿರುವ ತಪ್ಪನ್ನು ಮನ್ನಿಸಿ, ಪತಿಗಾಗಿ ಠಾಣೆ ಮೆಟ್ಟಿಲೇರಿದ್ದಾರೆ.

    Continue Reading

    FILM

    ದರ್ಶನ್ ಸರ್ ನನಗೆ ಗುರು ಸಮಾನರು…ಧರ್ಮೋ ರಕ್ಷತಿ ರಕ್ಷಿತಃ… ಎಂದ ನಟಿ ರಚಿತಾ ರಾಮ್; ಹೇಳಿದ್ದೇನು?

    Published

    on

    ಬೆಂಗಳೂರು : ರೇಣುಕಾಸ್ವಾಮಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಬಂಧನವಾಗಿದೆ. ಇತ್ತ ನಟ, ನಟಿಯರು ಪ್ರತಿಕ್ರಿಯೆ ನೀಡಲು ಆರಂಭಿಸಿದ್ದಾರೆ. ಇದೀಗ ರಚಿತಾ ರಾಮ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಇನ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


    “ಧರ್ಮೋ ರಕ್ಷತಿ ರಕ್ಷಿತಃ” ಎಂದು ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ನಮಸ್ಕಾರ..ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..! ಎಂದಿದ್ದಾರೆ.

    ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು.

    ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ.

    ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್‌ ಸರ್‌ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

    ಇದನ್ನೂ ಓದಿ : ನಟ ದರ್ಶನ್ ಮತ್ತೊಬ್ಬ ಮ್ಯಾನೇಜರ್ ಆತ್ಮಹ*ತ್ಯೆ!? ಡೆ*ತ್ ನೋಟ್ ನಲ್ಲಿ ಏನಿದೆ!?

    ದರ್ಶನ್ ಹಾಗೂ ರಚಿತಾ ರಾಮ್ ಜೊತೆಯಾಗಿ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ. ಡಿಂಪಲ್ ಕ್ವೀನ್ ತನ್ನ ಸಿನಿ ಜರ್ನಿ ಆರಂಭಿಸಿದ್ದೇ ದರ್ಶನ್ ಜೊತೆಗೆ, ಅದೂ ‘ಬುಲ್ ಬುಲ್’ ಚಿತ್ರದ ಮೂಲಕ. ಅಂಬರೀಶ, ಜಗ್ಗುದಾದಾ, ಕ್ರಾಂತಿ ಚಿತ್ರಗಳಲ್ಲಿ ಇವರಿಬ್ಬರು ಜೊತೆಯಾಗಿ ನಟಿಸಿದ್ದರು.

    Continue Reading

    FILM

    ನಟ ದರ್ಶನ್ ಮತ್ತೊಬ್ಬ ಮ್ಯಾನೇಜರ್ ಆತ್ಮಹ*ತ್ಯೆ!? ಡೆ*ತ್ ನೋಟ್ ನಲ್ಲಿ ಏನಿದೆ!?

    Published

    on

    ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಮ್ಯಾನೇಜರ್ ಮಾನಸಿಕ ಖಿನ್ನತೆಗೆ ಒಳಗಾಗಿ ಡೆ*ತ್ ನೋಟ್ ಬರೆದಿಟ್ಟು ಆತ್ಮಹ*ತ್ಯೆಗೆ ಶರಣಾಗಿದ್ದಾರೆ ಎಂಬುದು ತಿಳಿದುಬಂದಿದೆ.


    ಶ್ರೀಧರ್ ಮೃತ ಮ್ಯಾನೇಜರ್. ಕಳೆದ ಏಪ್ರಿಲ್ ತಿಂಗಳಿನಲ್ಲಿ ಮ್ಯಾನೇಜರ್ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್‌ನಲ್ಲಿ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದರು. ಆತ, ಡೆತ್ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಶ್ರೀಧರ್ ಮೃ*ತದೇಹವನ್ನು ನೋಡಿದ್ದ ಆತನ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ.

    ಪೊಲೀಸರು ಸ್ಥಳ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಮ್ಯಾನೇಜರ್ ಶ್ರೀಧರ್ ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಮೃ*ತಪಟ್ಟಿರುವುದು ಕಂಡು ಬಂದಿದೆ. ಒಂದು ವರ್ಷಗಳ ಕಾಲ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದರು, ಸುಮಾರು 2 ಎಕರೆ 36 ಗುಂಟೆ ಪ್ರದೇಶದಲ್ಲಿರುವ ಫಾರ್ಮ್ ಹೌಸ್ ನಿರ್ಮಾಣವಾಗುತ್ತಿದೆ. ಫಾರ್ಮ್‌ಹೌಸ್ ಪಕ್ಕದ ಕಲ್ಲು ಬಂಡೆ ಮೇಲೆ ಶ*ವವಾಗಿ ಪತ್ತೆಯಾಗಿದ್ದಾರೆ.
    ಡೆತ್ ನೋಟ್ ಪತ್ತೆಯಾಗಿದ್ದು, ಈ ಘಟನೆಯ ಬೆನ್ನಲ್ಲೇ ಆನೇಕಲ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲು ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ : WATCH : ಕಾರು ಚಲಾಯಿಸುವಾಗ ರೀಲ್ಸ್ ಮಾಡಲು ಹೋಗಿ ಪ್ರಾ*ಣ ಕಳೆದುಕೊಂಡ ಯುವತಿ

    ಡೆತ್ ನೋಟ್ ನಲ್ಲಿ ಏನಿದೆ?

    ದರ್ಶನ್ ಫಾರ್ಮ್‌ಹೌಸ್ ಮ್ಯಾನೇಜರ್ ಸಾವಿಗೂ ಮುನ್ನ ಬರೆದಿಟ್ಟಿರುವ ಡೆ*ತ್‌ನೋಟ್ ಪತ್ತೆಯಾಗಿದೆ. ಡೆತ್ ನೋಟ್ ಅನ್ನು ಸ್ವತಃ ತಾನೇ ಬರೆದಿಟ್ಟಿರುವ ಮ್ಯಾನೇಜರ್ ಶ್ರೀಧರ್ ಡೆ*ತ್ ನೋಟ್ ನಲ್ಲಿ ಹೆಬ್ಬೆಟ್ಟು ಕೂಡಾ ಒತ್ತಿದ್ದಾರೆ.

    ಅದರಲ್ಲಿ ಯಾವುದೋ ಕಾರಣದಿಂದ ನನ್ನ ಪರ್ಸನಲ್ ಒಂಟಿತನ ಕಾಡುತ್ತಿದೆ. ಬದುಕುವ ಆಸೆಯಿಲ್ಲ, ನನ್ನ ಸಾವಿಗೆ ನಾನೇ ಕಾರಣ. ನನ್ನ ಸಾ*ವಿನ ಕಾರಣ ಹಾಗೂ ಹಿನ್ನೆಲೆಯನ್ನು ಇಟ್ಟುಕೊಂಡು ಸ್ನೇಹಿತರು, ಕುಟುಂಬ ಸದಸ್ಯರು ಸೇರಿದಂತೆ ಯಾರೊಬ್ಬರಿಗೂ ತೊಂದರೆ ಕೊಡಬೇಡಿ. ನಾನು ಯಾರಿಗೆ ಫೋನ್ ಮಾಡಿದ್ದೆ, ಅದು ಇದು ಎಂದು ಯಾರಿಗೂ ಪೊಲೀಸರು ತೊಂದರೆ ಕೊಡಬೇಡಿ. ನಮ್ಮ ಮನೆಯಲ್ಲಿ ಅಪ್ಪ, ಅಮ್ಮ, ಸಹೋದರಿಯರು ಸೇರಿ ಎಲ್ಲರಿಗೂ ಹೇಳುತ್ತಿದ್ದೇನೆ, ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದಾರೆ.

    Continue Reading

    LATEST NEWS

    Trending