Sunday, May 16, 2021

ಚುನಾವಣಾ ಫಲಿತಾಂಶದ ಬಳಿಕ ಹೊತ್ತಿ ಉರಿಯುತ್ತಿರುವ ಬಂಗಾಳ ; ಹಿಂಸಾಚಾರ-ನಾಲ್ವರ ಸಾವು..!

ಕೋಲ್ಕತ್ತಾ:ವಿಧಾನಸಭಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಿಂಸಾಚಾರದ ಕಿಚ್ಚಿಗೆ ಬಿಜೆಪಿ ಕಚೇರಿ ಧ್ವಂಸಗೊಂಡಿದ್ದು, ರಸ್ತೆ ಬದಿಯ ಅಂಗಡಿಗಳು ಬೆಂಕಿಗಾಹಿತಿಯಾಗಿವೆ.ಇತ್ತ ಮಮತಾ ಬ್ಯಾನರ್ಜಿ ಸ್ಪರ್ಧಿಸಿ ಸೋತಿದ್ದ ನಂದಿಗ್ರಾಮದಲ್ಲಿ ಬಿಜೆಪಿ ಮತ್ತು ಟಿ.ಎಂ.ಸಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು.ಇದೇ ವೇಳೆ ಬಿಜೆಪಿ ಕಚೇರಿಗೆ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸಲಾಯ್ತು, ಕೆಲ ಕಿಡಿಗೇಡಿಗಳು ಕಛೇರಿಗೆ  ಬೆಂಕಿ ಹಚ್ಚಲು ಮುಂದಾಗಿದ್ದರು ಎಂದು ವರದಿಯಾಗಿದೆ.ಇದೆಲ್ಲ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಕೆಲಸ. ಕೇವಲ ಬಿಜೆಪಿ ಕಚೇರಿ ಮಾತ್ರ ಧ್ವಂಸಗೊಳಿಸಲ್ಲ. ಇಲ್ಲಿಯ ಹಲವು ಮನೆ ಮತ್ತು ಅಂಗಡಿಗಳನ್ನು ಧ್ವಂಸಗೊಳಿಸಿದ್ದಾರೆ.ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಗಲಾಟೆ ಮಾಡುತ್ತಿದ್ದವರು ಪರಾರಿಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಘಟನೆ ಬಳಿಕ ನಂದಿಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಫಲಿತಾಂಶದ ಬಳಿಕ ನಡೆದ ಹಿಂಸಾಚಾರದಲ್ಲಿ ಇದುವರೆಗೂ ನಾಲ್ವರು ಸಾವನ್ನಪ್ಪಿದ್ದಾರೆ. ದಕ್ಷಿಣ 23 ಪರಗಣ, ನದಿಯಾದಲ್ಲಿ ಬಿಜೆಪಿ ಕಾರ್ಯಕರ್ತರು, ವರ್ಧಮಾನ್ ದಲ್ಲಿ ಟಿ.ಎಂ.ಸಿ ಮತ್ತು ಉತ್ತರ 24 ಪರಗಣದಲ್ಲಿ ಐ.ಎಸ್‍.ಎಫ್ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...