Connect with us

DAKSHINA KANNADA

ಮಹಿಳೆಗೆ ವಿದೇಶದಲ್ಲಿ ಕೆಲಸದ ಭರವಸೆ:ಲಕ್ಷಾಂತರ ರೂಪಾಯಿಗಳ ಪಂಗನಾಮ..! ಆರೋಪಿ ಬಂಧನ

Published

on

ಮಂಗಳೂರು: ವಿದೇಶದಲ್ಲಿ ಕೆಲಸದ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ ಮಾಡಿದ ಆರೋಪದ ಮೇಲೆ ಮಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

ನಗರದ ಬಲ್ಮಠ ನಿವಾಸಿ ಜೆರಿ ಇಥಿಯಲ್ ಶಿಖಾ(32) ಬಂಧಿತ ಆರೋಪಿಯಾಗಿದ್ದಾನೆ. ಕಾವೂರಿನ ಮಹಿಳೆಯೊಬ್ಬರು ವಿದೇಶದಲ್ಲಿ ಉದ್ಯೋಗ ಬಯಸಿ ಏಪ್ರಿಲ್ ತಿಂಗಳಲ್ಲಿ ನಗರದ ಜೆರಿ ಇಥಿಯಲ್ ಶಿಖಾ ಕಚೇರಿಗೆ ತೆರಳಿದ್ದರು.

ಆಗ ಆರೋಪಿ ಯುರೋಪಿನ ಲಿಥುವೇನಿಯಾ ದೇಶದಲ್ಲಿ ಕಚೇರಿ ಕೆಲಸಕ್ಕೆ ನೌಕರರು ಬೇಕಾಗಿದ್ದಾರೆ. ತಿಂಗಳಿಗೆ 3.50 ಲಕ್ಷ ರೂ. ವೇತನ ದೊರೆಯಲಿದೆ. ಆದರೆ, ಉದ್ಯೋಗ ದೊರೆಯಲು 5.5 ಲಕ್ಷ ರೂ. ವೆಚ್ಚ ತಗುಲುವುದಾಗಿ ಆರೋಪಿ ಮಹಿಳೆಗೆ ಹೇಳಿದ್ದನಂತೆ.

ಉದ್ಯೋಗ ದೊರೆಯುವ ಆಶಾಭಾವನೆಯಲ್ಲಿ‌ ಮಹಿಳೆ ತನ್ನ ಒಡವೆಗಳನ್ನು ಅಡವಿಟ್ಟು ಒಂದು ಲಕ್ಷ ರೂ. ನೇರವಾಗಿ ಹಾಗೂ ಒಂದು ಲಕ್ಷ ರೂ. ನೆಫ್ಟ್ ರೂಪದಲ್ಲಿ ನೀಡಿದ್ದರು.

ಈ ನಡುವೆ ಆರೋಪಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪರವಾನಗಿ ಪಡೆಯದಿರುವುದು ಮಹಿಳೆಗೆ ತಿಳಿದು ಬಂದಿದೆ.

ವಿಷಯ ತಿಳಿದು ಮಹಿಳೆ ಹಣ ವಾಪಸ್ ಮಾಡುವಂತೆ ಕೇಳಿಕೊಂಡರೂ ಆರೋಪಿ‌ ಹಣ ನೀಡದೇ ವಂಚಿಸಿದ್ದಾನೆ. ಈ ಸಂಬಂಧ ನೊಂದ ಮಹಿಳೆ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಳು.

ಈ ಬಗ್ಗೆ ಮಂಗಳೂರು ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು, ‌ಆತನನ್ನು ಬಂಧಿಸಿದ ಬಳಿಕ ವಂಚನೆಗೊಳಗಾದ ಮತ್ತಿಬ್ಬರು ಸಂತ್ರಸ್ತರು ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending