DAKSHINA KANNADA
ಹಿಂದೂ ದೇವಾಲಯಗಳ ಸರಕಾರೀಕರಣಕ್ಕೆ ಹುನ್ನಾರ;ಸರ್ಕಾರದ ವಿರುದ್ಧ ತಿರುಗಿಬಿದ್ದ ವಿಶ್ವಹಿಂದೂ ಪರಿಷತ್ ..!
ಹಿಂದೂ ದೇವಾಲಯಗಳ ಸರಕಾರೀಕರಣಕ್ಕೆ ಹುನ್ನಾರ;ಸರ್ಕಾರದ ವಿರುದ್ಧ ತಿರುಗಿಬಿದ್ದ ವಿಶ್ವಹಿಂದೂ ಪರಿಷತ್ ..!
Vishwa Hindu Parishad Against Govt.
ಮಂಗಳೂರು : ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಉದ್ದೇಶಿಸಿರುವ ಖಾಸಗಿ ಹಿಂದೂ ದೇವಾಲಯಗಳ ಸರಕಾರೀಕರಣಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಆಗ್ರಹಿಸಿದೆ.
ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತದ ಕಾರ್ಯಾಧ್ಯಕ್ಷರಾದ ಪ್ರೊ.ಎಂ.ಬಿ. ಪುರಾಣಿಕ್ ಅವರು ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ಆದೇಶ ಹಿಂದೂ ವಿರೋಧಿಯಾಗಿದೆ.
ಖಾಸಗಿ ದೇವಾಲಯಗಳಿಗೆ ಅಂಕುಶ ಹಾಕುವ ಪ್ರಯತ್ನದಲ್ಲಿ ದೇವಸ್ಥಾನಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ.ರಾಜ್ಯದಲ್ಲಿ ಸಾವಿರಾರು ಖಾಸಾಗಿ ಹಿಂದೂ ದೇವಸ್ಥಾನಗಳಿದ್ದು ಧಾರ್ಮಿಕ, ಶೈಕ್ಷಣಿಕ, ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ.
ಜೊತೆಗೆ ನಿರಂತರ ಅನ್ನದಾನ, ವಿದ್ಯಾ ದಾನ ಇನ್ನಿತರ ಅನೇಕಸೇವಾ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿದೆ. ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ದೇವಸ್ಥಾನಗಳಿಗಿಂತ ಚೆನ್ನಾಗಿ ಖಾಸಗಿ ದೇವಸ್ಥಾನಗಳು ಆಡಳಿತ ನಡೆಸುತ್ತಿದ್ದು,
ಈ ಆದೇಶದ ಮೂಲಕ ಮುಂದಿನ ದಿನಗಳಲ್ಲಿ ಖಾಸಗಿ ದೇವಾಲಯಗಳನ್ನು ಸರ್ಕಾರ ವಶ ಪಡಿಸುವ ಹುನ್ನಾರವಾಗಿದೆ ಎಂದು ಆರೋಪಿಸಿದ್ದಲ್ಲದೆ. ಸರ್ಕಾರ ಈ ಆದೇಶವನ್ನು ಪುನರ್ ಪರಿಶೀಲಿಸಿ ಕೂಡಲೇ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ
ರಾಜ್ಯದಲ್ಲಿ ಖಾಸಗಿ ದೇವಸ್ಥಾನಗಳನ್ನು ಸರ್ಕಾರ ಸ್ವಾಯತ್ತ ಪಡೆಯುವ ಯಾವುದೇ ಪ್ರಸಂಗ ಇಲ್ಲ.
ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಹಾಗಾಗಿ ಯಾವುದೇ ಆತಂಕ ಬೇಡ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ದೇವಸ್ಥಾನಗಳನ್ನ ನೋಂದಣಿ ಮಾಡಿಕೊಳ್ಳಬೇಕು ಅಂತ 2015ರಲ್ಲಿ ಧಾರ್ಮಿಕ ದತ್ತಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.
ಇದರ ಅರ್ಥ ಸರ್ಕಾರ ಖಾಸಗಿ ದೇವಸ್ಥಾನಗಳ ಮೇಲೆ ಹಕ್ಕು ಚಲಾಯಿಸುವುದು, ನಿಗಾ ಇಡೋದು. ಸ್ವಾಯತ್ತ ತೆಗೆದುಕೊಳ್ಳುವುದಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.