Connect with us

    LATEST NEWS

    ಮಂಗಳೂರಲ್ಲಿ ಏಸುವಿನ ಕೈ ತುಂಡಾದಾಗ ಇದ್ದ ಕನಿಕರ ಹಿಂದೂ ಮೇಲೆ ದಾಳಿಯಾದಾಗ ಏಕಿಲ್ಲ?: ಜಗದೀಶ ಶೇಣವ ಪ್ರಶ್ನೆ

    Published

    on

    ಮಂಗಳೂರು: ಬಾಂಗ್ಲದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ನಗರದ ಕದ್ರಿ ದ್ವಾರದ ಬಳಿ ವಿಶ್ವಹಿಂದು ಪರಿಷತ್ ಬಜರಂಗದಳ ರಸ್ತೆ ತಡೆದು ಇಂದು ಪ್ರತಿಭಟನೆ ನಡೆಸಿತು. ಇದೇ ವೇಳೆ ಮಾಜಿ ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜ ಮನೆಗೆ ಮುತ್ತಿಗೆ ಹಾಕುವ ಯತ್ನ ನಡೆಯಿತು.


    ಈ ವೇಳೆ ಬಿಜೆಪಿ ಮುಖಂಡ ಜಗದೀಶ ಶೇಣವ ಮಾತನಾಡಿ, ಎನ್‌ಆರ್‌ಸಿ ಬರುವಾಗ ಎಲ್ಲಾ ಅಲ್ಪಸಂಖ್ಯಾತರು, ಬುದ್ದಿವಂತರು, ಮಾನವ ಹಕ್ಕು ಹೋರಾಟಗಾರರು ಸರಕಾರದ ಮೇಲೆ ಬಿದ್ದರು. ಈಗಿನ ಪರಿಸ್ಥಿತಿಯಲ್ಲಿ ಬಾಂಗ್ಲಾ ದೇಶದಲ್ಲಿ 8 ಶೇಕಡಾ ಇದ್ದ ಹಿಂದೂಗಳ ಪರಿಸ್ಥಿತಿ ಏನಾಗಬೇಡ?. 11 ವರ್ಷದ ಹಿಂದೆ ಇಲ್ಲಿ ಯಾವುದೋ ಒಂದು ಚರ್ಚ್‌ ದಾಳಿ ಅಂತ ಆಯ್ತು ಈ ವೇಳೆ ಏಸುವಿನ ಕೈ ಒಂದು ತುಂಡಾಯ್ತು.

    ಈ ದೇವರೇ, ಪ್ರಪಂಚದ ಮೀಡಿಯಾಗಳೆಲ್ಲ ನಮ್ಮಲ್ಲಿಗೆ ಬಂದವು. ಆಯ್ತು ಏಸು ಕ್ರಿಸ್ತ ಹೋದ. ನಮ್ಮ ಕ್ರಿಶ್ಚಿಯಾನಿಟಿಯನ್ನು ಲಗಾಡಿ ತೆಗೆದಿದ್ದೀರಿ. ಎಲ್ಲಿಯವರೆಗೆ ಅಂದರೆ ಆಗಿನ ಪ್ರಧಾನಿ ಫ್ರಾನ್ಸ್‌ಗೆ ಹೋದಾಗ ಮಾಧ್ಯಮಗಳು ನಿಲ್ಲಿಸಿ ಕೇಳಿದವು.

    ನಿಮ್ಮ ದೇಶದಲ್ಲಿ ಏನು ನಡೆಯುತ್ತಿದೆ. ಒಂದು ಏಸುವಿನ ಕೈ ತುಂಡಾಗಿದ್ದು, ಆದರೆ ನಮ್ಮ ಆರಾಧ್ಯ ದೈವ ಕಾಳಿಯ ಮೂರ್ತಿಯನ್ನು ಭಂಗ ಮಾಡಿದ್ದು ನೋಡಿದರೆ ನಮಗೆ ಕಣ್ಣಿರು ಬರುತ್ತದೆ. ಅಲ್ಲಿ ಪೆಂಡಾಲ್‌ಗೆ ಬೆಂಕಿ ಕೊಟ್ಟು, ಬೆನ್ನಟ್ಟಿ ಮೂವರನ್ನು ಕೊಂದಿದ್ದು ನೋಡಿದಾಗ ನಮಗೆ ಹೊಟ್ಟೆ ಚುರುಕ್‌ ಅನ್ನುತ್ತಿದೆ.


    ಕಿಸೆಯಲ್ಲಿ ಒಂದೂ ಪೈಸೆಗೆ ಗತಿ ಇಲ್ಲದವ ಬಾಂಗ್ಲಾದವರು ಹಿಂದೂಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಅಂದರೆ ನಾವು ಅವರಿಗೆ ಪಾಠ ಕಲಿಸಬಾರದೇ.

    ಮಂಗಳೂರಿನಲ್ಲಿ ಕೆಲಸ ಮಾಡುವವರು ಬಾಂಗ್ಲಾದೇಶದವರು. ನಾವು ಅವರನ್ನು ಪುನಃ ಕಳಿಸಿದರೆ ಅವರು ಭಿಕ್ಷೆ ಬೇಡುವ ಪರಿಸ್ಥಿತಿ. ಆದ್ದರಿಂದ ಕೇಂದ್ರ ಸರ್ಕಾರ ಅವರಿಗೆ ಎಚ್ಚರಿಕೆ ಕೊಟ್ಟರೆ ಅವರು ಉಚ್ಛೆ ಉಯ್ಯುವಂತಿರಬೇಕು ಎಂದು ವಾಗ್ದಾಳಿ ನಡೆಸಿದರು
    ವಿಹಿಂಪ ನ ಮುಖಂಡ ಶರಣ್‌ ಪಂಪ್‌ವೆಲ್‌ ಮಾತನಾಡಿ, ಬಾಂಗ್ಲಾದೇಶದಲ್ಲಿ ಪ್ರತಿನಿತ್ಯ ಹಿಂದೂಗಳ ಕಗ್ಗೊಲೆಯಾಗುತ್ತಿದೆ. ಈ ಬಗ್ಗೆ ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು. ಇಲ್ಲವಾದಲ್ಲಿ  ಮತ್ತೆ ಮತ್ತೆ ರಸ್ತೆ ತಡೆದು ಪ್ರತಿಭಟನೆ‌ ಮಾಡುತ್ತೇವೆ ಎಂದರು.


    ಈ ಬಗ್ಗೆ ಭಾರತ ಬಾಂಗ್ಲ ಸರ್ಕಾರಕ್ಕೆ ಇವತ್ತೇ ಎಚ್ಚರಿಕೆ ಕೊಡಬೇಕು. ಈ ಎಚ್ಚರಿಕೆಯ ನಂತರ ಹಿಂದೂಗಳ ಹತ್ಯೆ ನಡೆಯಬಾರದು. ಆ ರೀತಿಯಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆ ಕೊಡಬೇಕು ಎಂದು ಆಗ್ರಹಿಸಿದರು.

    ನಂತರ ಮಾಜಿ ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜ ಮನೆಗೆ ಮುತ್ತಿಗೆ ಹಾಕುವ ಯತ್ನ ನಡೆಯಿತು. ಆದರೆ ದಾರಿ ಮಧ್ಯೆ ಬಜರಂಗದಳ ಸಹಸಂಚಾಲಕ ಪುನೀತ್‌ ಅತ್ತಾವರ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending