Connect with us

BANTWAL

ವಿಟ್ಲ: ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ಆಟಿ ತಿನಿಸುಗಳ ಸಂಭ್ರಮ

Published

on

ವಿಟ್ಲ:  ಜಾನಪದ ವೈಶಿಷ್ಟ್ಯಗಳಿಂದಲೇ ವಿಭಿನ್ನವಾಗಿ ಗುರುತಿಸಿಕೊಂಡಿರುವ ತುಳುನಾಡಿನಲ್ಲಿ ಇದೀಗ ಅಷಾಢಮಾಸ. ಅಂದರೆ ಆಟಿ ತಿಂಗಳು. ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪೆರುವಾಯಿಯ ಫಾತಿಮಾ ಮಾತೆಯ ದೇವಾಲಯದಲ್ಲಿ ಕಥೊಲಿಕ್ ಸಭಾ ಘಟಕದ ಸಹಭಾಗಿತ್ವದಲ್ಲಿ ಸ್ತ್ರಿ ಸಂಘಟನೆಯ ಸದಸ್ಯರು ಸುಮಾರು 25ಕ್ಕೂ ಹೆಚ್ಚು ಬಗೆಯ ಆಟಿಯ ತಿನಿಸುಗಳನ್ನು ಉಣಬಡಿಸಿದರು.


ಮುಖ್ಯ ಅತಿಥಿಯಾಗಿದ್ದ ನಿವೃತ್ತ ಉಪನ್ಯಾಸಕಿ, ಲೇಖಕಿ ಹಾಗೂ ಅಂಕಣಕಾರ್ತಿ ನಳಿನಾಕ್ಷಿ ಉದಯಾ ರಾಜ್ ಮಾತನಾಡಿ, ಆಟಿ ತಿಂಗಳ ವಿಶೇಷತೆ ಹಾಗೂ ಆಟಿ ತಿಂಡಿ-ತಿನಿಸುಗಳ ಮಹತ್ವತೆ ಬಗ್ಗೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಫಾತಿಮಾ ಮಾತೆಯ ದೇವಾಲಯ ಧರ್ಮಗುರು ವಂದನೀಯ ಸೈಮನ್ ಡಿಸೋಜಾ ಅವರು ಮಾತನಾಡಿ, ಇಂತಹ ವಿಶಿಷ್ಟ ಹಾಗೂ ವಿನೂತನ ಸಂಪ್ರದಾಯಗಳು ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕೆಂದು ಹೇಳಿದರು.


ಕಾರ್ಯಕ್ರಮದಲ್ಲಿ ಸ್ತ್ರಿ ಸಂಘಟನೆಯ ಸದಸ್ಯರು ಪತ್ರೋಡೆ, ಕಣಿಲೆ, ಕೆಸುವಿನ ಎಲೆಯ ಪದಾರ್ಥ, ಗಟ್ಟಿ, ಮೂಡೆ, ಕಡುಬು, ಹಲಸಿನ ಹಣ್ಣಿನ ಹಪ್ಪಳ, ರಾಗಿ ಪಾಯಸ ಸೇರಿದ 25ಕ್ಕೂ ಅಧಿಕ ಖಾದ್ಯಗಳನ್ನು ಉಣಬಡಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಪರಿಷತ್ತಿನ ಉಪಾಧ್ಯಕ್ಷ ಡೇನಿಸ್ ಮೊಂತೆರೋ, ಕಾರ್ಯದರ್ಶಿ ಶ್ರೀಮತಿ ವೈಲೆಟ್ ಕುವೆಲ್ಲೋ ಹಾಗೂ ಕಥೊಲಿಕ್ ಸಭಾ ಪೆರುವಾಯಿ ಘಟಕದ ಅಧ್ಯಕ್ಷ ರಾಲ್ಫ್ ಡಿಸೋಜಾ, ಸ್ತ್ರೀ ಸಂಘಟನೆ ಅಧ್ಯಕ್ಷೆ ವೀಣಾ ಮೊಂತೆರೋ ಉಪಸ್ಥಿತರಿದ್ದರು.

ಕುಮಾರಿ ದೀಕ್ಷಿತಾ ಡಿಸೋಜ ಸ್ವಾಗತಿಸಿದರು. ಶ್ರೀಮತಿ ವೈಲೆಟ್ ಕುವೆಲ್ಲೊ ವಂದಾನಾರ್ಪಣೆಗೈದರು. ಲ್ಯಾನ್ವಿನ್ ಡಿಸೋಜ ನಿರೂಪಿಸಿದರು.

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

BANTWAL

Bantwala: ಕಾರುಗಳ ನಡುವೆ ಸರಣಿ ಅಪಘಾತ..!

Published

on

ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಢಿಕ್ಕಿ ಯಾಗಿದೆ.

ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.

ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.

ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು.

ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು.

ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು.

ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ‌ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು.

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.

ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ.

ಪೊಲೀಸ್ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.

Continue Reading

LATEST NEWS

Trending