Thursday, October 21, 2021

ವಿಟ್ಲ: ಆಕ್ಟೀವಾಗೆ ಅಪರಿಚಿತ ವಾಹನ ಢಿಕ್ಕಿ-ಸವಾರ ಸಾವು

ವಿಟ್ಲ: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ.


ನಿಡ್ಪಳ್ಳಿ ಗ್ರಾಮದ ಸುರೇಶ್ ನಾಯ್ಕ್ ಮೃತ ದುರ್ದೈವಿ.
ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು ತರುತ್ತಿದ್ದ ವೇಳೆ ಮಿತ್ತೂರು ಮಸೀದಿ ಸಮೀಪದದ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸಹಿತ ಸುರೇಶ್ ರವರು ಬಿದ್ದಿರುವುದನ್ನು ನೋಡಿದ್ದರು.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುರೇಶ್ ರವರನ್ನು ಕೂಡಲೇ ಆ ದಾರಿಯಾಗಿ‌ ಬಂದ‌ ವಾಹನದ‌ ಮೂಲಕ ಮಂಗಳೂರಿನ ಆಸ್ಪತ್ರೆಗೆ‌ ಸಾಗಿಸಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ‌ ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ನೀಡಿದೆ. ಘಟನೆ ಹೇಗೆ ನಡೆದಿದೆ ಎನ್ನುವ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...