ವಿಟ್ಲ: ಕೋಳಿ ಮರಿಯನ್ನು ರಕ್ಷಿಸಲು ಹೋಗಿ ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದ ಮದರಮೂಲೆಯಲ್ಲಿ ನಡೆದಿದೆ.
ಕರೋಪಾಡಿ ಗ್ರಾಮದ ಮದರಮೂಲೆ ನಿವಾಸಿ ದಿ. ಮುದ್ದ ಮುಗೇರರ ಪುತ್ರ ವಸಂತ ಮುಗೇರ (37) ಮೃತಪಟ್ಟ ದುರ್ದೈವಿ.
ಉಪ್ಪಳದ ವಿದ್ಯುತ್ ಗುತ್ತಿಗೆದಾರರ ಕಾರ್ಮಿಕನಾಗಿದ್ದ ವಸಂತ ಕೇರಳದಲ್ಲಿ ನಡೆಯುತ್ತಿರುವ ಖಾಸಗಿ ಬಸ್ ಮುಷ್ಕರದಿಂದಾಗಿ ರಜೆಯಲ್ಲಿದ್ದರು.
ನಿನ್ನೆ ಸಂಜೆ ಮನೆ ಮುಂದಿನ 70ಅಡಿ ಆಳದ ಬಾವಿಗೆ ಬಿದ್ದ ಕೋಳಿ ಮರಿಯನ್ನು ರಕ್ಷಿಸಲು ಇವರು ಹಗ್ಗ ಕಟ್ಟಿದ ಬುಟ್ಟಿಯನ್ನು ಬಾವಿಗೆ ಇಳಿಸುತ್ತಿದ್ದ ಸಂದರ್ಭ ಬಾವಿಯ ಕಟ್ಟೆ ಕುಸಿದು ವಸಂತ ಅದೇ 70ಅಡಿ ಆಳದ ಬಾವಿಗೆ ಬಿದ್ದಿದ್ದು,
ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ಸ್ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದೆ.