Connect with us

BANTWAL

ವಿಟ್ಲ ಪೊಲೀಸ್ ಠಾಣೆ ಮೇಲ್ದರ್ಜೆಗೇರಿದ ಬಳಿಕ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ: ಮಾಜಿ ಸಚಿವ ಬಿ.ರಮಾನಾಥ ರೈ ಆರೋಪ

Published

on

ವಿಟ್ಲ: ವಿಟ್ಲ ಪೊಲೀಸ್ ಠಾಣೆ ಮೇಲ್ದಾರ್ಜೆಗೇರಿದ ಬಳಿಕ ವಿಟ್ಲ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕರ್ತವ್ಯ ಲೋಪ ಎಸಗುತ್ತಿದ್ದು, ಇತ್ತೀಚೆಗೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಅಪರಾಧ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆರೋಪಿಸಿದ್ದಾರೆ.

ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮತನಾಡಿದ ಅವರು ವಿಟ್ಲ ದೇವಸ್ಥಾನ ರಸ್ತೆಯ ನಿವಾಸಿ ನಿಶ್ಮಿತಾ ಅವರು ಮಾನಸಿಕವಾಗಿ ಮನನೊಂದು ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಈ ಬಗ್ಗೆ ಆಕೆಯ ಹೆತ್ತವರು ಡೆತ್ ನೋಟಿನಲ್ಲಿ ಯುವತಿ ಉಲ್ಲೇಖಿಸಿದ ಮೂವರು ವಿರುದ್ಧ ಕ್ರಮ ಜರುಗಿಸಬೇಕೆಂದು ದೂರು ನೀಡಿದ್ದರೂ 50 ದಿನಗಳ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ಇದುವರೆಗೂ ತನಿಖೆ ಕೈಗೊಂಡಿಲ್ಲ.

ಬಡಕುಟುಂಬದ ಹೆಣ್ಮಗಳು ಪ್ರಾಣ ಕಳೆದುಕೊಂಡರೂ ಅವಳಿಗೆ ನ್ಯಾಯ ಒದಗಿಸಿಕೊಡದ ಇಂತಹ ಪೊಲೀಸ್ ಠಾಣೆ ಜನರಿಗೆ ಅಗತ್ಯವಿದೀಯಾ? ಎಂದು ಪ್ರಶ್ನಿಸಿದರು.

ಬಡ ಕುಟುಂಬದ ನಿಶ್ಮಿತಾ ಅವರು ಡೆಂಟಲ್ ಕ್ಲಿನಿಕ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವರ ತಾಯಿ ಕೂಲಿ ಮಾಡಿ ಜೀವನ ನಡೆಸುತ್ತಿದ್ದರು. ಅವರಿಗೆ ನ್ಯಾಯ ನೀಡದ ವಿಟ್ಲ ಪೊಲೀಸರು ಕೆಲವು ರಾಜಕೀಯ ಒತ್ತಡದಿಂದ ಕ್ರಮಕೈಗೊಳ್ಳುತ್ತಿಲ್ಲ.

ವಿಟ್ಲ ನಿವಾಸಿಗಳಾದ ಪ್ರಶಾಂತ್, ದಿನೇಶ್, ಯಶವಂತ, ಕೇಪು ನಿವಾಸಿ ರಕ್ಷಿತ್ ಮೇಲೆ ಪ್ರಕರಣ ದಾಖಲಾಗಿದೆ. ರಕ್ಷಿತ್ ಉದ್ದೇಶಪೂರ್ವಕವಾಗಿ ಯುವತಿಯಲ್ಲಿ ಮಾತನಾಡಿದ್ದನ್ನು ಪ್ರಶಾಂತ್ ಸಹೋದರ ದಿನೇಶ್ ಹಾಗೂ ಯಶವಂತ ಅವರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಪ್ರೀತಿ ಮಾಡುತ್ತಿದ್ದ ಪ್ರಶಾಂತ್‌ಗೆ ಕಳುಹಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕಾರಣ ಗೊತ್ತಿದ್ದರೂ ಪ್ರಕರಣ ದಾಖಲಿಸಿದ ಬಳಿಕವೂ ಆರೋಪಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿಲ್ಲ. ಹೀಗಾದರೆ ಠಾಣೆ ಮೇಲ್ದರ್ಜೆಗೇರಿ ಪ್ರಯೋಜನವೇನು ? ತನಿಖೆ ಬೇಡ, ನಿರ್ಲಕ್ಷ್ಯ ಮಾಡಿ ಎಂಬ ಒತ್ತಡ ಬಂದಿದೆಯೇ?

ಈ ಬಗ್ಗೆ ಮೇಲಧಿಕಾರಿಗಳ ಜತೆ ಮಾತನಾಡಿದ ಬಳಿಕವೂ ಯಾವುದೇ ಪ್ರಯೋಜನವಾಗಲಿಲ್ಲ. ಪತ್ರಿಕೆ, ಮಾಧ್ಯಮಗಳ ಮೂಲಕ ಈ ಪ್ರಕರಣದ ನೈಜ ಮಾಹಿತಿಯನ್ನು ಸಮಾಜಕ್ಕೆ ತಿಳಿಸಬಯಸುತ್ತೇನೆ. ಈ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಆಗ್ರಹಿಸಿದರು.

ಅದಲ್ಲದೇ ಸೂರಿಕುಮೇರು ಕಾರು ಅಪಘಾತದ ಬಳಿಕ ನಡೆದ ಗಲಾಟೆಯಲ್ಲಿ ನಿರಪರಾಧಿಗಳನ್ನು ವಿಟ್ಲ ಠಾಣೆಗೆ ಕರೆ ತರಲಾಗಿದೆ.

ಅವರಿಬ್ಬರೂ ಪೊಲೀಸ್ ಠಾಣೆಯಲ್ಲಿ ನಮ್ಮಿಬ್ಬರನ್ನು ಇವರು ಕರೆದುಕೊಂಡು ಬಂದ ಉದ್ದೇಶವೇನು ಎಂದು ಮಾತನಾಡಿಕೊಂಡಿದ್ದರು.

ಆದರೆ ಅಲ್ಲಿ ಚೂರಿ ಹಿಡಿದು ಓಡಾಡುತ್ತಿದ್ದ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಕರೆತರಲಿಲ್ಲ. ಅಪಘಾತಕ್ಕೆ ಕೋಮು ಬಣ್ಣ ಬಳಿಯುವುದು ಯಾಕೆ ? ಎಂದು ವ್ಯಂಗ್ಯವಾಡಿದ ಅವರು ಮತ್ತೊಂದು ಪ್ರಕರಣದಲ್ಲಿ ಧ್ವಜವನ್ನು ಅಳವಡಿಸುವ ವಿಚಾರದಲ್ಲಿ ಸಂಬಂಧಪಡದವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಇದೆಲ್ಲ ಅನ್ಯಾಯ. ಈ ಎಲ್ಲಾ ಘಟನೆಗಳನ್ನು ನಾನು ಖಂಡಿಸುತ್ತೇನೆ ಮತ್ತು ಸೂಕ್ತ ತನಿಖೆ ನಡೆಸಿ ಬಡ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವ ಜವಾಬ್ದಾರಿ ಪೊಲೀಸರಿಗಿದೆ ಎಂದು ಉಲ್ಲೇಖಿಸುತ್ತೇನೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿ.ಪಂ.ಮಾಜಿ ಸದಸ್ಯ ಎಂ.ಎಸ್.ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಮಾಜಿ ಅಧ್ಯಕ್ಷ ಪ್ರವೀಣಚಂದ್ರ ಆಳ್ವ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ನಗರ ಅಧ್ಯಕ್ಷ ವಿ.ಕೆ.ಎಂ.ಅಶ್ರಫ್, ನಿಶ್ಮಿತಾ ಅವರ ತಾಯಿ ಉಮಾವತಿ, ಮತ್ತಿತರರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending