Home ಕರ್ನಾಟಕ ವಾರ್ತೆ ಗೋಕಳ್ಳತನ ಪ್ರಕರಣ ಭೇದಿಸಿದ ಪೊಲೀಸರಿಗೆ ಎದುರಾಯ್ತು ಬಿಗ್ ಶಾಕ್..!!

ಗೋಕಳ್ಳತನ ಪ್ರಕರಣ ಭೇದಿಸಿದ ಪೊಲೀಸರಿಗೆ ಎದುರಾಯ್ತು ಬಿಗ್ ಶಾಕ್..!!

ಗೋಕಳ್ಳತನ ಪ್ರಕರಣ ಭೇದಿಸಿದ ಪೊಲೀಸರಿಗೆ ಎದುರಾಯ್ತು ಬಿಗ್ ಶಾಕ್..!!

ಪುತ್ತೂರು: ಲಾಕ್ ಡೌನ್ ಆದ್ಮೆಲೆ ಕಸಾಯಿಖಾನೆ ದಂಧೆಗಳು ಹೆಚ್ಚಾಗಿದ್ದು, ಅಲ್ಲಲ್ಲಿ ಪೊಲೀಸರು ಧಾಳಿ ನಡೆಸುತ್ತಿದ್ದಾರೆ.

ಆದ್ರೆ ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ಧಾಳಿ ನಡೆಸಿದ್ದು, ಅಲ್ಲಿನ ವ್ಯವಸ್ಥೆ ನೋಡಿ ಸ್ವತಃ ಪೊಲೀಸರೇ ಶಾಕ್ ಗೆ ಒಳಗಾಗಿದ್ದಾರೆ.

ಹೌದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ‌ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ವಿಟ್ಲ ಪೋಲೀಸರು ದಾಳಿ ನಡೆಸಿ ಒರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ ಅಕ್ರಮ ಕಸಾಯಿಖಾನೆಗೆ ದಾಳಿ ನಡೆದಿರುವುದು ಇದೇ ಮೊದಲ ಬಾರಿಯಾಗಿದ್ದು, ದಾಳಿ ನಡೆಸಿದ ಪೋಲೀಸರಿಗೆ ಅಲ್ಲಿನ ವ್ಯವಸ್ಥೆ ಕಂಡು ಒಂದು ಕ್ಷಣ ಶಾಕ್ ಆಗಿದೆ.

ಸುಮಾರು 200ಕ್ಕೂ ಹೆಚ್ಚು ದನದ ಚರ್ಮಗಳು, ವಧೆ ಮಾಡಲೆಂದು ತಂದಿಟ್ಟಿದ್ದ 8 ಗೋವುಗಳು, ಗೋ ಸಾಗಾಟಕ್ಕೆ ಬಳಸುತ್ತಿದ್ದ ವಾಹನಗಳನ್ನು ಪೋಲೀಸರು ಸೀಝ್ ಮಾಡಿದ್ದಾರೆ.

ದಕ್ಷಿಣ ಕನ್ನಡ ಹಾಗೂ ಕೇರಳ ಗಡಿಭಾಗವಾದ ಸಾಲೆತ್ತೂರಿನ ಐತಕುಮೇರು ಎಂಬಲ್ಲಿ ಮೊಯ್ದೀನ್ ಕುಂಞ ಎಂಬಾತನ ತೋಟದಲ್ಲಿ ಈ ಅಕ್ರಮ‌ ಕಸಾಯಿ ಖಾನೆ ನಡೆಯುತ್ತಿದ್ದ ಕುರಿತು ಸುಳಿವು ಪಡೆದ ವಿಟ್ಲ ಎಸ್.ಐ ವಿನೋದ್ .ಕೆ.ಎಸ್ ನೇತೃತ್ವದ ತಂಡ ದಾಳಿ ನಡೆಸಿದೆ.

ಸ್ಥಳದಲ್ಲಿ ಕಸಾಯಿಖಾನೆ ನಡೆಸುತ್ತಿದ್ದ ಪ್ರಮುಖ ಆರೋಪಿ ಕೊಳ್ನಾಡು‌ ಕಟ್ಟತ್ತಿಲ ನಿವಾಸಿ ಹ್ಯಾರೀಸ್ ಎಂಬವನನ್ನು ಪೋಲೀಸರು ಬಂಧಿಸಿದ್ದಾರೆ.

ಇನ್ನು ಅಕ್ರಮ ಕಸಾಯಿಖಾನೆ ಸ್ಥಾಪನೆ ಸೇರಿ ದನಗಳ ಕಳ್ಳತನ ಕೃತ್ಯದಲ್ಲಿ ಹಲವು ಘಟಾನುಘಟಿಗಳು ಇದ್ದಾರೆ ಎನ್ನಲಾಗಿದೆ.

ಹಲವು ಸಮಯದಿಂದ ಗಡಿ ಭಾಗದ ನೆಪ ಹೇಳಿಕೊಂಡು ಎಲ್ಲರಿಂದ ತಪ್ಪಿಸಿಕೊಳ್ಳುತ್ತಿದ್ದ ಮಾಹಿತಿ ಕೂಡ ಲಭ್ಯವಾಗಿದೆ.

ಜಿಲ್ಲೆಯ ಹಲವು ಕಡೆಗಳಿಂದ ಗೋವುಗಳನ್ನು ಕದ್ದು ತಂದು‌ ಇಲ್ಲಿ ವಧೆ ಮಾಡಲಾಗುತ್ತಿತ್ತಲ್ಲದೇ, ಮಾಂಸವನ್ನು ಕೇರಳ ಹಾಗೂ ಇತರ ಭಾಗಗಳಿಗೆ ಸಾಗಾಟ ಮಾಡಲಾಗುತ್ತಿತ್ತು ಎನ್ನುವ ಶಾಕಿಂಗ್ ಮಾಹಿತಿ ಕೂಡ ಲಭ್ಯವಾಗಿದೆ.

ಸ್ಥಳಕ್ಕೆ ಎಸ್.ಪಿ.ಲಕ್ಷ್ಮೀ ಪ್ರಸಾದ್ ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

- Advertisment -

RECENT NEWS

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ ಉಳ್ಳಾಲ: ಕಳೆದೆರಡು ದಿನಗಳಿಂದ ಮುಂಗಾರು ಮಳೆ ತೀವ್ರವಾಗಿ ಕರಾವಳಿ ತೀರದಲ್ಲಿ ಸುರಿಯತೊಡಗಿದ್ದು, ಕಡಲ ತೀರದಲ್ಲೂ ಕಡಲ ಅಬ್ಬರ ಜೋರಾಗಿದೆ. ಪ್ರತೀ ವರ್ಷ ಕಡಲಕೊರೆತ ತೀವ್ರವಾಗಿರುವ ಮಂಗಳೂರು ಕ್ಷೇತ್ರದ ಉಳ್ಳಾಲ...

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ..

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ.. ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ...

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ.. ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು...

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ ಬೆಳ್ತಂಗಡಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟುವಿನಲ್ಲಿ ನಿರ್ಮಿಸಲಾದ ಮನೆಯ ಕೀಲಿ ಕೈ ಹಸ್ತಾಂತರ...