Connect with us

BANTWAL

ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿ ವರ್ಗಾವಣೆ

Published

on

ವಿಟ್ಲ: ವಿಟ್ಲ ಠಾಣಾ ಎಸ್.ಐ ವಿನೋದ್ ಎಸ್. ರೆಡ್ಡಿಯವರನ್ನು ಉತ್ತರಕನ್ನಡ ಜಿಲ್ಲೆಯ ರಾಮನಗರ ಠಾಣೆಗೆ ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ರವರು ಆದೇಶ ಹೊರಡಿಸಿದ್ದಾರೆ.

2012ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ವಿನೋದ್ ಎಸ್. ರೆಡ್ಡಿಯವರು ಆ ಬಳಿಕ ಮಂಗಳೂರು ಕೇಂದ್ರ ಸ್ಥಾನದಲ್ಲಿ ಪ್ರೊಬೆಷನರಿ ಎಸ್.ಐ. ಆಗಿ ಕರ್ತವ್ಯ ಆರಂಭಿಸಿದರು. ಬಳಿಕ ಉಡುಪಿ ಜೆಲ್ಲೆಯ ಹೆಜಮಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ 2019ರಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಪ್ರೊಬೆಷನರಿ ಎಸ್.ಐ ಆಗಿ ವರ್ಗಾವಣೆಗೊಂಡು ಬಂದಿದ್ದರು.ವಿಟ್ಲ ಠಾಣಾ ಎಸ್ ಐ ಆಗಿದ್ದ ಯಲ್ಲಪ್ಪರವರ ವರ್ಗಾವಣೆಗೊಂಡ ಬಳಿಕ ವಿನೋದ್ ಎಸ್. ರೆಡ್ಡಿರವರನ್ನು ವಿಟ್ಲ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ವಿನೋದ್ ಎಸ್. ರೆಡ್ಡಿ ರವರು ಮೂಲತಃ ಬಾಗಲಕೋಟೆಯವರಾಗಿದ್ದು ಮೆಕ್ಯಾನಿಕಲ್ ಇಂಜಿನಿಯರ್ ಮುಗಿಸಿದ್ದಾರೆ. ಇತ್ತೀಚೆಗಷ್ಟೇ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

Click to comment

Leave a Reply

Your email address will not be published. Required fields are marked *

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

BANTWAL

ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕ ಸಾ*ವು

Published

on

ಬಂಟ್ವಾಳ: ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃ*ತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ ಬಾಲಕ.

died

ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃ*ತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

Continue Reading

BANTWAL

ಮಂಗಳೂರು, ಬಂಟ್ವಾಳಗಳಲ್ಲಿ ಮತದಾನ ಜಾಗೃತಿ; ತಪ್ಪದೇ ವೋಟ್ ಮಾಡಿ ಎಂದ ಅರವಿಂದ ಬೋಳಾರ್..!

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ವೀಪ್‌ ಸಮಿತಿ (ಸಿಸ್ಟಮೆಟಿಕ್‌ ವೋಟರ್ಸ್‌ ಎಜ್ಯುಕೇಶನ್‌ ಆಂಡ್‌ ಇಲೆಕ್ಟ್ರೋರಲ್‌ ಪಾರ್ಟಿಸಿಪೇಶನ್‌ ಪ್ರೋಗ್ರಾಮ್‌ ಕಮಿಟಿ) ವತಿಯಿಂದ ಜಿಲ್ಲಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ.

ಕಡಿಮೆ ಮತದಾನ ದಾಖಲಿಸಿರುವ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಂಗಳೂರು ತಾಲೂಕು ಸ್ವೀಪ್‌ ಸಮಿತಿ ವತಿಯಿಂದ ನಿನ್ನೆ(ಎ.1) ನಡೆಯಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಅಪ್ಪಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಡಿಮೆ ಮತದಾನ ದಾಖಲಿಸಿರುವ ಮಂಗಳೂರು ನಗರದ ಮತಗಟ್ಟೆಗಳ ವ್ಯಾಪ್ತಿಗೆ ಬರುವಂತಹ ಆಶ್ರಮಗಳು ,ಸಂಘ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಮತದಾನದ ಪ್ರಾಮುಖ್ಯತೆಯನ್ನು ತಿಳಿಸಲಾಯಿತು.

ತಾಲೂಕು ಸ್ವೀಪ್‌   ಸಮಿತಿ ಸದಸ್ಯರು, ತರಬೇತುದಾರರಾದ ಒ.ಆರ್‌. ಪ್ರಕಾಶ್ ಮತ್ತು ತಹಸೀನ್ ಹಾಜರಿದ್ದರು. ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳು ಸಹಕರಿಸಿದರು.

ಇದನ್ನೂ ಓದಿ..; ಪಕ್ಷ ಬಿಡಿ ಬಿಲ್ಲವರನ್ನು ಗೆಲ್ಲಿಸಿ ಎಂದ ಸತ್ಯಜಿತ್ ಸುರತ್ಕಲ್!

ಬಂಟ್ವಾಳ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಸ್ವೀಪ್ ಸಮಿತಿಯಿಂದ ಸಂಗಬೆಟ್ಟು, ಕುಕ್ಕಿಪಾಡಿ, ಪಿಲಾತಬೆಟ್ಟು, ಇರುವತ್ತೂರು, ಬಡಗ ಕಜೆಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾವಿಧಿ ಬೋಧನೆ ಮತ್ತು ಜಾಥಾ ಹಮ್ಮಿಕೊಳ್ಳಲಾಗಿತ್ತು.

ಚಿತ್ರ ನಟ ಹಾಗೂ ರಂಗಭೂಮಿ ಕಲಾವಿದ ಅರವಿಂದ ಬೋಳಾರ್ ಅವರು ಕೂಡಾ ತಪ್ಪದೆ  ವೋಟ್‌ ಮಾಡಿ ಎಂಬುದಾಗಿ ಇನ್‌ ಸ್ಟಾ ಗ್ರಾಂ ಮೂಲಕ ಮನವಿ ಮಾಡಿದ್ದಾರೆ.

 

 

Continue Reading

LATEST NEWS

Trending