BANTWAL
ವಿಟ್ಲ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
Published
1 year agoon
By
Adminಬಂಟ್ವಾಳ: ಇಲ್ಲಿನ ವಿಟ್ಲ – ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ. 5 ರಂದು ಶಿಕ್ಷಕರ ದಿನವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸ್ಕಾಲರ್ ಶಿಪ್ ಮಾಸ್ಟರ್ ಎಂದೇ ಖ್ಯಾತರಾದ ನಿವೃತ್ತ ಸರಕಾರಿ ಶಿಕ್ಷಕ ನಾರಾಯಣ ನಾಯ್ಕ್ ಅವರು ಮಾತನಾಡಿ, ” ಎರಡು ರೀತಿಯ ದೇವರು ಕಾಣಸಿಗುವ ಪವಿತ್ರ ಸ್ಥಳವೆಂದರೆ ಅದು ಶಾಲೆ.
ಶಿಕ್ಷಕ ವೃತ್ತಿ ಎನ್ನುವುದು ಬಿಳಿ ಬಟ್ಟೆ ಇದ್ದಂತೆ. ಅಂತಹ ಶುಭ್ರ ಬಟ್ಟೆಯಲ್ಲಿ ಒಂದು ಕಲೆಯೂ ಆಗದ ರೀತಿಯಲ್ಲಿ ಶಿಕ್ಷಕರು ತಮ್ಮ ವೃತ್ತಿಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ಹೇಳುವ ಮೊದಲು ಶಿಕ್ಷಕರು ಅದನ್ನು ಪಾಲಿಸುವಂತಿರಬೇಕು.
ಬಾಲವಿಕಾಸದ ಶಿಕ್ಷಕರು ಇಂತಹ ಗುಣಗಳಿಗೆ ಉತ್ತಮ ನಿದರ್ಶನವಾಗಿ ಕಾಣುತ್ತಾರೆ. ಇಲ್ಲಿನ ಶಿಕ್ಷಕರ ಸಂಸ್ಕಾರ ವಿದ್ಯಾರ್ಥಿಗಳ ಶಿಸ್ತಿನಲ್ಲಿ ಪ್ರತಿಬಿಂಬಿತವಾಗುತ್ತಿದೆ. ವಿದ್ಯಾರ್ಥಿಗಳು ಇಂತಹ ಶಿಕ್ಷಕರ ಮಾರ್ಗದರ್ಶನದಲ್ಲಿ ಶ್ರಮಪಟ್ಟು ಓದಿದರೆ ವಿದ್ಯಾಸರಸ್ವತಿಯನ್ನು ಒಲಿಸಿಕೊಳ್ಳಲು ಸಾಧ್ಯವಾಗುತ್ತದೆ ” ಎಂದರು.
ಅಧ್ಯಕ್ಷತೆ ವಹಿಸಿಕೊಂಡಿದ್ದ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷ ಪ್ರಹ್ಲಾದ್ ಜೆ ಶೆಟ್ಟಿ ಅವರು ಸಂಸ್ಥೆಯ ಎಲ್ಲಾ ಸಿಬ್ಬಂದಿಗೆ ಉಡುಗೊರೆ ನೀಡಿ ಶುಭ ಹಾರೈಸಿದರು. ಇದೇ ವೇಳೆ ಮುಖ್ಯ ಅತಿಥಿ ನಾರಾಯಣ ನಾಯ್ಕ್ ಅವರ ನಿಸ್ವಾರ್ಥ ಸಮಾಜ ಸೇವೆಯನ್ನು ಗುರುತಿಸಿ, ವಿದ್ಯಾಸಂಸ್ಥೆಯ ಪರವಾಗಿ ಸನ್ಮಾನಿಸಿದರು.
ಶಾಲೆಯ ಆಡಳಿತಾಧಿಕಾರಿ ರವೀಂದ್ರ ದರ್ಬೆ, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ ಶೆಟ್ಟಿ ಹಾಗೂ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ ಶೆಟ್ಟಿ ಅವರು ಶಿಕ್ಷಕ ದಿನದ ಮಹತ್ವದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭ ಸರ್ವಪಲ್ಲಿ ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಾಗೂ ಶಿಕ್ಷಕರಿಗೆ ಕೆಲವು ಮನೋರಂಜನಾ ಆಟಗಳನ್ನು ಆಯೋಜಿಸಿದರು.
ವಿದ್ಯಾರ್ಥಿನಿಯರಾದ ಅನಿಶಾ ಆರ್ ಮತ್ತು ಪ್ರಕೃತಿ ಶೆಟ್ಟಿ ನಿರೂಪಿಸಿದರು. ಮೊಹಮ್ಮದ್ ಅಮೀರ್ ಸ್ವಾಗತಿಸಿ, ವೃದ್ಧಿ ಎ. ಕೊಂಡೆ ವಂದಿಸಿದರು. ಬಾಲವಿಕಾಸ ಟ್ರಸ್ಟ್ ನ ಉಪಾಧ್ಯಕ್ಷ ಯತಿರಾಜ್ ಕೆ ಎನ್ ಹಾಗೂ ಕಾರ್ಯದರ್ಶಿ ಮಹೇಶ್ ಜೆ ಶೆಟ್ಟಿ ಉಪಸ್ಥಿತರಿದ್ದರು.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಕರ್ನಾಟಕ ಉಪಚುನಾವಣೆ : ‘ಕೈ’ ಹಿಡಿದ ಮತದಾರ…ಕಮಲಕ್ಕೆ ಶಾಕ್
ಮಹಾರಾಷ್ಟ್ರದಲ್ಲಿ ಮಹಾಯುತಿಗೆ 200+ ಕ್ಷೇತ್ರಗಳಲ್ಲಿ ಮುನ್ನಡೆ
ಬಾಗಲಕೋಟೆ ಹೇರ್ ಡ್ರೈಯರ್ ಸ್ಫೋಟಕ್ಕೆ ಬಿಗ್ ಟ್ವಿಸ್ಟ್: ಪ್ರಕರಣದ ಹಿಂದಿದೆ ಪ್ರೇಮ ಪುರಾಣ
ಪತಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನು ಕೊಂ*ದ ಪಾಪಿ ತಾಯಿ!
ನೀರಸ ಪ್ರದರ್ಶನ ಮುಂದುವರಿಸಿದ ಭಾರತ: ವಿವದಾತ್ಮಕ ತೀರ್ಪಿಗೆ ರಾಹುಲ್ ಬಲಿ !
ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್..! 6 ಕೋಟಿ ಮೌಲ್ಯದ ಡ್ರ*ಗ್ಸ್ ಜಪ್ತಿ..!
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- Baindooru22 hours ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!