DAKSHINA KANNADA
VITTLA : ಬ್ಯಾಂಕ್ ದರೋಡೆ ಪ್ರಕರಣ; ಮೂವರ ಬಂಧನ, ತಲೆಮರೆಸಿಕೊಂಡಿರುವ ಇನ್ನಿಬ್ಬರು!
ವಿಟ್ಲ : ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಚಿನ್ನ, ಬೆಳ್ಳಿ, ನಗದು ಸೇರಿದಂತೆ 26 ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮಹಮ್ಮದ್ ರಫೀಕ್, ಇಬ್ರಾಹಿಂ ಕಲಂದರ್ ಮತ್ತು ದಯಾನಂದ ಎಂಬವರನ್ನು ಬಂಧಿಸಲಾಗಿತ್ತು. ಬಂಧಿತರಿಂದ 2.40 ಲಕ್ಷ ನಗದು, 2. ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, 12.50. ಲಕ್ಷದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ ಬೀಝಾ ಕಾರು ಮತ್ತು ಗ್ಯಾಸ್ ಕಟ್ಟರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಲೆಮರೆಸಿಕೊಂಡಿರುವ ಇಬ್ಬರು :
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯನಡ್ಕದಲ್ಲಿ ಫೆಬ್ರವರಿ 7 ರಂದು ಈ ದರೋಡೆ ಪ್ರಕರಣ ನಡೆದಿತ್ತು. ಕರ್ಣಾಟಕ ಬ್ಯಾಂಕಿನಿಂದ ರೂ 17,28,735/- ನಗದು ಹಾಗೂ 696.21 ಗ್ರಾಂ ಚಿನ್ನಭರಣ ಮತ್ತು 1,00,000/- ಮೌಲ್ಯದ ಬೆಳ್ಳಿ ಕಳ್ಳತನ ನಡೆದಿತ್ತು. ಪ್ರಕರಣದ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಇಬ್ಬರು ಆರೋಪಿಗಳು ಇನ್ನೂ ತಲೆ ಮರೆಸಿಕೊಂಡಿದ್ದಾನೆ.
ಬಂಧಿತ ಆರೋಪಿಗಳಲ್ಲಿ ಗೂಡಿನ ಬಳಿ ರಫೀಕ್ ಎಂಬಾತನ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 23 ಪ್ರಕರಣಗಳು ಇದ್ದು ಖತರ್ನಾಕ್ ಕಳ್ಳನಾಗಿದ್ದಾನೆ. ಮತ್ತೋರ್ವ ಆರೋಪಿ ಇಬ್ರಾಹಿಂ ಕಲಂದರ್ ಎಂಬಾತನ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ 8 ಪ್ರಕರಣಗಳು ದಾಖಲಾಗಿದೆ.
ಮೂರನೇ ಆರೋಪಿ ದಯಾನಂದ ಎಸ್. ಎಂಬಾತ ಇದೆ ಮೊದಲ ಬಾರಿಗೆ ಕಳ್ಳತನಕ್ಕೆ ಕೈ ಹಾಕಿದ್ದು ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತವೆ. ಪರಾರಿಯಾಗಿರುವ ಇಬ್ಬರ ಪತ್ತೆಗಾಗಿ ವಿಶೇಷ ತಂಡ ಬಲೆ ಬೀಸಿದೆ.
DAKSHINA KANNADA
ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಮಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ನಡೆದ ಪ್ರೆಸ್ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
DAKSHINA KANNADA
ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!
ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.
ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.
ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್ಕ್ರೀಮ್ ತಯಾರಿಸುವ ಘಟಕ, ಕಾರ್ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.
ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್ನಲ್ಲಿ ಪಲ್ಟಿಂಗ್ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.
DAKSHINA KANNADA
ವೈರಲ್ ವಿಡಿಯೋ: ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ?
ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ ಹೊಸ ಹೊಸ ಮಾದರಿಯಲ್ಲಿ ತುಂಬಾ ವೈರಟಿ ಆಗಿ ಸಿಗುತ್ತಾ ಇದೆ. ಬಾರ್ಬಿ ಬಿರಿಯಾನಿ ವೈರಲ್ ಆದ ಬಳಿಕ ಇದೀಗ ಇನ್ನೊಂದು ಹೊಸ ಬಿರಿಯಾನಿ ವೈರಲ್ ಆಗ್ತಾ ಇದೆ.
ಕಲ್ಲಂಗಡಿ ಚಿಕನ್ ಬಿರಿಯಾನಿ
ಹೌದು, ಈ ಬಿರಿಯಾನಿಯ ಹೆಸರು ಕಲ್ಲಂಗಡಿ ಚಿಕನ್ ಬಿರಿಯಾನಿ. ಇದು ವಿಚಿತ್ರವಾದರೂ ಸತ್ಯ. ಕಲ್ಲಂಗಡಿ ಹಾಕಿ ಮಾಡಿರುವ ಈ ಚಿಕನ್ ಬಿರಿಯಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ಸ್ಟಾಗ್ರಾಮ್ನ villagefoodchannel_official ಪೇಜ್ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಈ ವಿಚಿತ್ರ ಬಿರಿಯಾನಿ ವೈರಲ್ ಆಗಿದೆ.
ಕಲ್ಲಂಗಡಿ ಬಿಕನ್ ಬಿರಿಯಾನಿ ತಯಾರಿಸುವ ವಿಧಾನ
ಮೊದಲಿಗೆ ಇಬ್ಬರು ಕಲ್ಲಂಗಡಿ ಹಣ್ಣನ್ನು ತುಂಡು ಮಾಡುವ ಮೂಲಕ ವಿಡಿಯೋ ಆರಂಭವಾಗುತ್ತದೆ. ಬಳಿಕ ಹಣ್ಣಿನ ತುಂಡುಗಳನ್ನು ದೊಡ್ಡ ಪಾತ್ರೆಗೆ ಹಾಕಿ ಅದರಲ್ಲಿ ಗುದ್ದಿ ರಸವನ್ನು ತೆಗೆಯುತ್ತಾರೆ. ಬಳಿಕ ಮತ್ತೊಂದು ಪಾತ್ರೆಯಲ್ಲಿ ಚಿಕನ್ ಬಿರಿಯಾನಿ ತಯಾರಿಸಲು ಪ್ರಾರಂಭಿಸುತ್ತಾರೆ.
ದೊಡ್ಡ ಪಾತ್ರೆಯನ್ನು ಇಟ್ಟು ಅದಕ್ಕೆ ಎಣ್ಣೆ, ನೀರುಳ್ಳಿ, ಬೆಳ್ಳುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಮಸಾಲೆಗಳು, ಗರಂ ಮಸಾಲೆ ಹಾಕಿ ಮಸಾಲೆ ತಯಾರಿಸುತ್ತಾರೆ. ಬಳಿಕ ಅದಕ್ಕೆ ಶುಚಿಗೊಳಿಸಿದ ಕೋಳಿ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ ಬೇಯಿಸುತ್ತಾರೆ.
ಕೋಳಿ ಮಾಂಸ ಬೆಂದ ನಂತರ ಅದಕ್ಕೆ ಪ್ರಮುಖ ಅಂಶವಾದ ಕಲ್ಲಂಗಡಿ ಹಣ್ಣಿನ ರಸವನ್ನು ಸೇರಿಸುತ್ತಾರೆ. ನಂತರ ಅದಕ್ಕೆ ಬಾಸುಮತಿ ಅಕ್ಕಿ ಹಾಕಿ ಮತ್ತೆ ಬೇಯಿಸುತ್ತಾರೆ. ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಮೇಲಿಗೆ ಹಾಕಿ ಮುಚ್ಚಿಡುತ್ತಾರೆ. ಈ ರೀತಿ ಮಾಡಿದಾಗ ಕಲ್ಲಂಗಡಿ ಚಿಕನ್ ಬಿರಿಯಾನಿ ತಯಾರಾಗುತ್ತದೆ.
ಈ ವಿಡಿಯೋ ಬಾರಿ ವೈರಲ್ ಆಗಿದ್ದು, ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಹಾಗೆಯೇ 21 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕಲ್ಲಂಗಡಿ ಚಿಕನ್ ಬಿರಿಯಾನಿಯ ಈ ವಿಶಿಷ್ಟ ಸಂಯೋಜನೆಯನ್ನು ವೀಕ್ಷಿಸಿದ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿದ್ದಾರೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ