Saturday, July 2, 2022

ಗುಜರಾತಿನಲ್ಲಿ ಉಪ್ಪು ಕಾರ್ಖಾನೆ ಗೋಡೆ ಕುಸಿತ: 12 ಕಾರ್ಮಿಕರು ಸಮಾಧಿ

ಅಹ್ಮದಾಬಾದ್:‌ ಉಪ್ಪು ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿ 20 ಮಂದಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಗುಜರಾತ್‌ ನ ಮೊರ್ಬಿ ಎಂಬಲ್ಲಿರುವ ಹಲ್ವಾಡ್ ಜಿಐಡಿಸಿಯಲ್ಲಿ ನಡೆದಿದೆ.


ಗೋಣಿ ಚೀಲಗಳಲ್ಲಿ ಉಪ್ಪು ತುಂಬುವ ಪ್ರಕ್ರಿಯೆ ನಡೆಯುತ್ತಿದ್ದಾಗ ಏಕಾಏಕಿ ಗೋಡೆ ಕುಸಿದು 30ಕ್ಕೂ ಅಧಿಕ ಮಂದಿ ಗೊಡೆಯಡಿ ಸಿಲುಕಿದ್ದಾರೆ.

ಸದ್ಯ 12 ಮಂದಿ ಸಾವನ್ನಪ್ಪಿದ್ದಾರೆ. ಜೆಸಿಬಿ ಮೂಲಕ ಮೃತದೇಹ ಹೊರತೆಗೆಯುವ ಕೆಲಸ ನಡೆಯುತ್ತಿದೆ. 20ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯವಾಗಿದೆ.


ಕಾರ್ಮಿಕರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದು,

ಮೃತಪಟ್ಟವರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

3ನೇ ಸೌತ್ ಇಂಡಿಯಾ ಪ್ರಾಜೆಕ್ಟ್ ಎಕ್ಸಿಬಿಷನ್‌ನಲ್ಲಿ ಉಜಿರೆ SDM ಇಂಜಿನಿಯರಿಂಗ್ ವಿಭಾಗಕ್ಕೆ ಪ್ರಶಸ್ತಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ, ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಿಪಟೂರು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ದಕ್ಷಿಣ ಭಾರತದ ಸುಮಾರು ಹದಿಮೂರು ಎಂಜಿನಿಯರಿಂಗ್ ವಿಭಾಗಗಳಲ್ಲಿ 3ನೇ ಸೌತ್...

ಗೋಹತ್ಯೆ ಕಾನೂನನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು: ವಿಹೆಚ್‌ಪಿ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ಕಾನೂನು ಜಾರಿಗೆ ಬಂದಿದೆ. ಆ ಕಾನೂನು ಪ್ರಬಲವಾಗಿದೆ. ಇದನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ವಿಹೆಚ್‌ಪಿಯ ಪ್ರಾಂತ ಗೋರಕ್ಷಾ ಪ್ರಮುಖ್‌ ಕಟೀಲು ದಿನೇಶ್‌ ಪೈ ಹೇಳಿದ್ದಾರೆ.ನಗರದ ಕದ್ರಿಯ...

ಇಂದು ಮಂಗಳೂರಿನಲ್ಲಿ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಕಾನ, ಕಲ್ಲೋಳಿ,...